ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮತ್ತೆ ಬೇಡಿಕೆ ಇಟ್ಟ ಮಾಜಿ ಸಚಿವ ವಿ ಸೋಮಣ್ಣ

Date:

Advertisements
  • ‘ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಕೊಟ್ಟರೆ ಅದರ ಮಜವೇ ಬೇರೆ ಇರಲಿದೆ’
  • ‘ಕಾಂಗ್ರೆಸ್​​​ ಮಾದರಿಯಲ್ಲಿ ಎರಡು ಕಾರ್ಯಾಧ್ಯಕ್ಷ ಹುದ್ದೆ ಸೃಷ್ಟಿಸಲಿ’

ಮಾಜಿ ಸಚಿವ ವಿ.ಸೋಮಣ್ಣ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಕೊಟ್ಟರೆ ಅದರ ಮಜವೇ ಬೇರೆ ಇರುತ್ತದೆ. ನನ್ನ ಅನುಭವ ಬಳಸಿಕೊಳ್ಳುವುದು, ಬಿಡುವುದು ಹೈಕಮಾಂಡ್​​​​ಗೆ ಬಿಟ್ಟಿದ್ದು” ಎಂದಿದ್ದಾರೆ.

“ಕಾಂಗ್ರೆಸ್​ ಪಕ್ಷದಲ್ಲಿ ನೂರಾರು ನಾಯಕರು ಇದ್ದಾರೆ. ಕಾರ್ಯಾಧ್ಯಕ್ಷರ ಮೂಲಕ ಕಾಂಗ್ರೆಸ್​​ನವರು ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್​​​ ಮಾದರಿಯಲ್ಲೇ ಬಿಜೆಪಿಯಲ್ಲೂ ಎರಡು ಕಾರ್ಯಾಧ್ಯಕ್ಷ ಹುದ್ದೆ ಸೃಷ್ಟಿಸಲಿ. ಆ ಮೂಲಕ ನಾವು ಹಾಗೇ ಕೆಲಸ ಮಾಡಬಹುದು. ನನಗೆ ಅವಕಾಶ ನೀಡಿದರೆ ಡಿಸಿಎಂ ಡಿಕೆ ಶಿವಕುಮಾರ್​ ಅವರಿಗಿಂತ ವೇಗವಾಗಿ​​​​​​ ಕೆಲಸ ಮಾಡುತ್ತೇನೆ” ಎಂದು ಇಂಗಿತ ವ್ಯಕ್ತಪಡಿಸಿದರು.

ಡಿಕೆಶಿ ಸಿಎಂ ಆಗಲಿ

Advertisements

“ಕಮಿಷನ್ ಆರೋಪ ನಾವು ಮಾಡುತ್ತಿಲ್ಲ. ಗುತ್ತಿಗೆದಾರರು ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿಚಲಿತರಾಗಬಾರದು. ಉಪಮುಖ್ಯಮಂತ್ರಿ ಸ್ಥಾನದಿಂದ ಇನ್ನೊಂದು ಹೆಜ್ಜೆ ಮುಂದೆ ಹೋಗೋದಿದೆ. ಈ ಹಿಂದೆ ಡಿಕೆಶಿ ಸಿಎಂ ಆಗಲಿ ಅಂತಾ ನಾನೇ ಹೇಳಿದ್ದೆ. ರಾಜಕೀಯ ಬೇರೆ, ಅವರನ್ನು ಬೇರೆಯವರಿಗೆ ಹೋಲಿಸಲ್ಲ. ಗುತ್ತಿಗೆದಾರರ ಕಾಮಗಾರಿ ಬಿಲ್​​​​​ ತಡೆಹಿಡಿಯುವುದು ಬೇಡ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | 2 ಗಂಟೆ 10 ನಿಮಿಷಗಳ ಕ್ರೌರ್ಯ, 3 ನಿಮಿಷಗಳ ತೋರಿಕೆಯ ಕಾರ್ಯ

“ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿಕೆಯಿಂದ ಎಷ್ಟರ ಮಟ್ಟಿಗೆ ಪರಿಣಾಮ ಬೀರಿದೆ ಎಂಬುದನ್ನು ನಾವು ಅನುಭವಿಸಿದ್ದೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಂಪಣ್ಣ ಹೇಳಿರುವುದೆಲ್ಲ ಸತ್ಯ ಎನ್ನುತ್ತಿದ್ದರು. ಈಗ ಯಾಕೆ ಕೆಂಪಣ್ಣ ಹೇಳಿಕೆಯನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ” ಎಂದು ಪ್ರಶ್ನಿಸಿದರು.

ಬಿಬಿಎಂಪಿ ಲ್ಯಾಬ್​​ನಲ್ಲಿ ಬೆಂಕಿ ಪ್ರಕರಣವಾಗಿ ಪ್ರತಿಕ್ರಿಯಿಸಿ, “ನನ್ನ ಪ್ರಕಾರ ಇದೊಂದು ಆಕಸ್ಮಿಕವಾಗಿ ನಡೆದಿರುವ ಘಟನೆ. ಆದರೆ ಡಿಕೆ ಶಿವಕುಮಾರ್​​ ಇದಕ್ಕೆ ಬಿಜೆಪಿ ಕಾರಣ ಎಂದು ಆರೋಪಿಸಿದ್ದಾರೆ. ಸರ್ಕಾರ, ಅಧಿಕಾರ ಎಂದಿಗೂ ಶಾಶ್ವತವಲ್ಲ. ನನ್ನ ಈ ಮಾತನ್ನು ನೀತಿ ಪಾಠ ಅಂತ ಡಿಕೆಶಿ ತಿಳಿದುಕೊಳ್ಳುವುದು ಬೇಡ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X