ಹಾಸನ ಜಿಲ್ಲಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಕಲೇಶಪುರ, ಬೇಲೂರು ಹಾಗೂ ಆಲೂರು ತಾಲೂಕಿನ ಕೆ.ಹೊಸಕೋಟೆ ಹೋಬಳಿಯ ಎಲ್ಲ ಅಂಗನವಾಡಿ ಮತ್ತು ಶಾಲೆಗಳಿಗೆ ಸೋಮವಾರ ಅಂದರೆ ಆಗಸ್ಟ್ 18ರಂದು ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ವ್ಯಾಪಕ ಮಳೆ : ಔರಾದ್ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು ರಜೆ
ಕಳೆದ ಮೂರು ದಿನಗಳಿಂದ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಈ ಸಂಬಂಧ ಬೇಲೂರು, ಸಕಲೇಶಪುರ ಹಾಗೂ ಆಲೂರು ತಾಲೂಕಿನ ಕೆ ಹೊಸಕೋಟೆ ಹೋಬಳಿಯ ಅಂಗನವಾಡಿ ಹಾಗೂ ಶಾಲೆಗಳಿಗೆ ಮಕ್ಕಳು ಆಗಮಿಸಲು ಸಮಸ್ಯೆಯಾಗುವ ಸಾಧ್ಯತೆಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಯವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.