ಕೋಲಾರ | ವೇಮಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಭಾಗವಹಿಸಿದ್ದವರಿಗೆ ಕಾಂಗ್ರೆಸ್ ಧನ್ಯವಾದ

Date:

Advertisements

ನಿನ್ನೆ (ಆ. 17) ನಡೆದ ಕೋಲಾರ ಜಿಲ್ಲೆಯ ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಮತದಾನ ಪ್ರಕ್ರಿಯಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್ ಅವರುಗಳು ಕಾಂಗ್ರೆಸ್ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು “ಸಂವಿಧಾನ, ಪ್ರಜಾಪ್ರಭುತ್ವ, ಸೌಹಾರ್ದತೆ, ಅಭಿವೃದ್ಧಿ, ಆಡಳಿತ ವಿಕೇಂದ್ರೀಕರಣ ಮತ್ತು ಸಂಘಟನೆ ಇವುಗಳನ್ನು ಶಕ್ತಿಗೊಳಿಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ವ್ಯವಸ್ಥಿತವಾಗಿ ಶಾಂತಿಯುತವಾಗಿ ಚುನಾವಣಾ ಪ್ರಚಾರಗಳನ್ನು ಕೈಗೊಳ್ಳಲಾಗಿತ್ತು. ಜಿಲ್ಲೆಯ ವೇಮಗಲ್ ಕುರುಗಲ್ ಚುನಾವಣಾ ಪ್ರಕ್ರಿಯೆಗಳು ಇತಿಹಾಸದ ಪುಟಗಳಲ್ಲಿ ದಾಖಲಾಗಲಿವೆ. ಈ ಚುನಾವಣಾ ಪ್ರಚಾರಗಳಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರುಗಳ ಸರ್ಕಾರದ ಜನಪರ ಕಾರ್ಯಕ್ರಮಗಳು ಪಕ್ಷದ ಸಿದ್ಧಾಂತ ಪರಂಪರೆಯನ್ನು ಮತ್ತು ಸ್ಥಳೀಯ ಶಾಸಕರು ಮಾಡಿದ್ದ ಸಾಧನೆಗಳು, ನೆರವು, ಭವಿಷ್ಯದ ಐದು ವರ್ಷಗಳ ವೇಮಗಲ್ ಪಟ್ಟಣ ಪಂಚಾಯತ್ ಅಭಿವೃದ್ಧಿಗಾಗಿ ಜನತೆಯ ಮುಂದೆ ಮಂಡಿಸಿರುವ ಪ್ರಣಾಳಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರ ಮಾರ್ಗದರ್ಶನ ಮತ್ತು ಸಲಹೆ ಸೂಚನೆ ಮತ್ತು ನೆರವು ಹಾಗೇ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಸಹಕಾರ ಮತ್ತು ಕೋಲಾರ ತಾಲೂಕು ಕಾಂಗ್ರೆಸ್ ಪಕ್ಷದ ಮುಖಂಡರು, ಪದಾಧಿಕಾರಿಗಳ ಮತ್ತು ಸದಸ್ಯರುಗಳ ಹಿತೈಷಿಗಳು ಸಕ್ರಿಯವಾಗಿ ಈ ಚುನಾವಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ” ಎಂದಿದ್ದಾರೆ.

“ಕಾಂಗ್ರೆಸ್ ಪಕ್ಷದ ಪರವಾಗಿ ಅಭ್ಯರ್ಥಿಗಳು ಅವರ ಕುಟುಂಬದ ಸದಸ್ಯರು, ಬೆಂಬಲಿಗರು, ಹಿತೈಷಿಗಳು ಅತ್ಯಂತ ಸಕ್ರಿಯವಾಗಿ ಚುನಾವಣೆಯ ಕರ್ತವ್ಯವನ್ನು ನಿರ್ವಹಿಸಿದ್ದಾರೆ ಕಾಂಗ್ರೆಸ್ ಪಕ್ಷದ ಪರವಾಗಿ ಮತ ಚಲಾಯಿಸಿದ ಎಲ್ಲಾ ಮತದಾರರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸುತ್ತಿದೇವೆ. ಮತದಾರರ ನಾಡಿ ಮಿಡಿತ ಸಾರ್ವಜನಿಕರ ಅಭಿಪ್ರಾಯ ಮಾಧ್ಯಮ ಕ್ಷೇತ್ರದ ಸಹಕಾರ ಅಭಿಪ್ರಾಯದ ಹಿನ್ನೆಲೆಯಲ್ಲಿ ಆ.20 ರಂದು ಹೊರಬರುವ ಪಟ್ಟಣ ಪಂಚಾಯಿತಿಯ ಫಲಿತಾಂಶವು ನಿಚ್ಚಳವಾಗಿ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಆಶೀರ್ವಾದ ಮಾಡಿ ಅಧಿಕಾರದ ಜವಾಬ್ದಾರಿ ಸ್ಥಾನಕ್ಕೆ ಬರಲಿದೆ. ಮುಂದಿನ 5 ವರ್ಷಗಳಲ್ಲಿ ಜನತೆಯ ಸಹಕಾರದೊಂದಿಗೆ ಸರ್ಕಾರದ ನೆರವು ಮಾರ್ಗದರ್ಶದೊಂದಿಗೆ ಪ್ರಣಾಳಿಕೆಯಲ್ಲಿ ತಿಳಿಸಿರುವ ಅಂಶಗಳನ್ನು ಜಾರಿಗೊಳಿಸಲು ಪ್ರಯತ್ನಿಸಲಾಗುವುದು ಈ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಹಾಗೆ ಜಿಲ್ಲಾಡಳಿತಕ್ಕೆ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೂ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದಗಳು” ಎಂದು ತಿಳಿಸಿದ್ದಾರೆ,

Advertisements

ಇದನ್ನೂ ಓದಿ: ಕೋಲಾರ | ರಾಜ್ಯ ಸರ್ಕಾರ ಪರಿಶಿಷ್ಟರ ಹಣ ಪರಿಶಿಷ್ಟರಿಗೆ ಮಾತ್ರ ಬಳಸಬೇಕು; ದಸಂಸ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

Download Eedina App Android / iOS

X