ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿ ನಗರದ ಜೇವರ್ಗಿ ಕಾಲೋನಿಯ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ನಡೆದಿದೆ.
ಸುಮಾರು 35ರಿಂದ 40 ವರ್ಷದ ಅಪರಿಚಿತ ವ್ಯಕ್ತಿಯ ಹತ್ಯೆ ಮಾಡಲಾಗಿದ್ದು, ಹತ್ಯೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಹಾಗೆಯೇ ಕೊಲೆ ಮಾಡಿದವರ ಬಗ್ಗೆಯೂ ಮಾಹಿತಿ ತಿಳಿದುಬಂದಿಲ್ಲ.
ಇದನ್ನು ಓದಿದ್ದೀರಾ? ಬೀದರ್ | ವ್ಯಕ್ತಿಯ ಕುತ್ತಿಗೆ ಕಡಿದು ಬರ್ಬರ ಹತ್ಯೆ
ಆರೋಪಿಗಳು ಬೇರೆ ಪ್ರದೇಶದಿಂದ ವ್ಯಕ್ತಿಯನ್ನು ಜೇವರ್ಗಿಗೆ ಕರೆತಂದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸದ್ಯ ಸ್ಥಳಕ್ಕೆ ಸ್ಟೇಷನ್ ಬಜಾರ್ ಪೊಲೀಸರು ಭೇಟಿ ನೀಡಿದ್ದಾರೆ. ಕೊಲೆಯಾದ ವ್ಯಕ್ತಿ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
