2026 ಡಿಸೆಂಬರ್ ಒಳಗೆ 1,80,253 ಮನೆ ಪೂರ್ಣ: ವಸತಿ ಸಚಿವ ಜಮೀರ್ ಅಹಮದ್ ಖಾನ್

Date:

Advertisements

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಿಎಂಎವೈ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಪ್ರಗತಿಯಲ್ಲಿರುವ 1,80,253 ಮನೆಗಳ ಕಾಮಗಾರಿಯನ್ನು 2026 ಡಿಸೆoಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ವಿಧಾನಸಭೆ ಅದಿವೇಶನದ ಸೋಮವಾರದ ಕಲಾಪದಲ್ಲಿ ಶಾಸಕ ಸಿದ್ದು ಪಾಟೀಲ್ ಅವರ ಪ್ರೆಶ್ನೆಗೆ ಉತ್ತರಿಸಿದ ಸಚಿವರು, “ಫಲಾನುಭವಿಗಳ ವಂತಿಗೆ ಪಾವತಿ ಆಗದ ಕಾರಣ ಯೋಜನೆಗೆ ಸಮಸ್ಯೆ ಉಂಟಾಗಿತ್ತು ಮುಖ್ಯಮಂತ್ರಿ ಯವರಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟು ಬಡವರ ಮನೆಗೆ ಸರ್ಕಾರವೇ ಫಲಾನುಭವಿಗಳ ವಂತಿಗೆ ಪಾವತಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು” ಎಂದರು.

“500ಕೋಟಿ ರೂ. ಬಿಡುಗಡೆ ನಂತರ ಮೊದಲ ಹಂತದಲ್ಲಿ 36,789 ಮನೆ ಹಂಚಿಕೆ ಮಾಡಿ, ಎರಡನೇ ಹಂತದಲ್ಲಿ 40,345 ಮನೆ ಹಂಚಿಕೆಗೆ ಸಿದ್ಧತೆ ನಡೆದಿದೆ. ಮುಖ್ಯಮಂತ್ರಿಯವರು 2026ರೊಳಗೆ ಪೂರ್ಣ ಗೊಳಿಸಲು ಸೂಚಿಸಿದ್ದು ಅದರಂತೆ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

Advertisements

ಅರವಿಂದ್ ಬೆಲ್ಲದ್ ಅವರ ಉಪ ಪ್ರೆಶ್ನೆಗೆ ಉತ್ತರಿಸಿದ ಸಚಿವರು, “ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಬಡ ಕುಟುಂಬಗಳಿಗೆ 47,870 ಮನೆ ನಿರ್ಮಾಣ ಯೋಜನೆ ಸಹ ಫಲಾನುಭ ವಿಗಳ ವಂತಿಗೆ ಪಾವತಿ ಆಗದ ಕಾರಣ, ಆ ವಿಚಾರ ಸಹ ಮುಖ್ಯಮಂತ್ರಿ ಯವರ ಗಮನಕ್ಕೆ ತಂದಿದ್ದು, ಸರ್ಕಾರವೇ ವಂತಿಗೆ ಭರಿಸಲು ತಾತ್ವಿ ಕ ಒಪ್ಪಿಗೆ ದೊರೆತಿದ್ದು ಸಂಪುಟ ಕ್ಕೆ ತಂದು ಒಪ್ಪಿಗೆ ಪಡೆಯಲಾಗುವುದು. ಆ ಮನೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಹಂಚಿಕೆ ಮಾಡಲಾಗುವುದು” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X