ರಾಜ್ಯದಲ್ಲಿ 43,000ಕ್ಕೂ ಅಧಿಕ ಮಹಿಳೆಯರು, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ದಾಖಲು: ವರದಕ್ಷಿಣೆ ಕಿರುಕುಳದಿಂದ 340 ಮಂದಿ ಸಾವು

Date:

Advertisements

ಮಹಿಳಾ ಸಬಲೀಕರಣವು ಲಿಂಗ ತಾರತಮ್ಯ ಮತ್ತು ಅಸಮಾನತೆಯನ್ನು ತೊರೆದು ಶೈಕ್ಷಣಿಕ, ರಾಜಕೀಯ, ಆರ್ಥಿಕ, ಸಾಮಾಜಿಕ, ಔದ್ಯೋಗಿಕ ಹಾಗೂ ಎಲ್ಲಾ ರೀತಿಯಲ್ಲೂ ಮುನ್ನಲೆಗೆ ಬರುವಂತೆ ಮಹಿಳೆಯರಿಗೆ ಪ್ರೇರೇಪಿಸಿದರೆ ಮತ್ತೊಂದೆಡೆ ಈ ಸಮಾಜವು ಆಕೆಯನ್ನು ಕೆಂಗಣ್ಣಿನಿಂದ ನೋಡುವುದು ಇನ್ನೂ ತಪ್ಪಿಲ್ಲ. ದಿನನಿತ್ಯ ಶಾಲಾ ಕಾಲೇಜುಗಳಿಗೆ ತೆರಳುವ ಮಕ್ಕಳು, ಕೆಲಸವನ್ನು ಅವಲಂಬಿಸಿರುವ ಮಹಿಳೆಯರು ಅಥವಾ ಗೃಹಿಣಿಯರು ಒಂದಲ್ಲಾ ಒಂದು ರೀತಿಯಲ್ಲಿ ಕಿರುಕುಳ, ದೌರ್ಜನ್ಯಗಳನ್ನು ಅನುಭವಿಸುತ್ತಲೇ ಇರುತ್ತಾರೆ. ದೇಶದಲ್ಲಿ ಮಹಿಳಾ ಮತ್ತು ಮಕ್ಕಳ ರಕ್ಷಣೆಗೆ ಕಾನೂನು ಜಾರಿಯಲ್ಲಿದ್ದರೂ ಅವುಗಳು ಕೇವಲ ನಾಮಾವಶೇಷವಷ್ಟೇ ಎನ್ನುವಂತಾಗಿದೆ.

ಇದಕ್ಕೆ ಉದಾಹರಣೆ ಎನ್ನುವಂತೆ ಕಳೆದ ಎರಡು ವರ್ಷಗಳಲ್ಲಿ 43,053 ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಕೇವಲ ಕರ್ನಾಟಕವೊಂದರಲ್ಲೇ ದಾಖಲಾಗಿವೆ! ಇದರಲ್ಲಿ ಲೈಂಗಿಕ ಕಿರುಕುಳ, ವರದಕ್ಷಿಣೆ ಕಿರುಕುಳ ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅದರಲ್ಲೂ ಅತ್ಯಾಚಾರ, ಲೈಂಗಿಕ ಕಿರುಕುಳ, ಕೌಟುಂಬಿಕ ಕಿರುಕುಳ, ಪೋಕ್ಸೋ ಪ್ರಕರಣಗಳಿಗಿಂತ ಹೆಚ್ಚು ಬಾಲ್ಯ ವಿವಾಹ, ಬಾಲ ಕಾರ್ಮಿಕ, ಹಾಗೂ ಮಕ್ಕಳ ರಕ್ಷಣೆ ಮತ್ತುಆರೈಕೆ ಕಾಯ್ದೆಯಡಿಯಲ್ಲಿ ಸುಮಾರು 43 ಸಾವಿರಕ್ಕಿಂತಲೂ ಹೆಚ್ಚು ದೂರುಗಳು ದಾಖಲಾಗಿವೆ.

ಇದನ್ನು ಓದಿದ್ದೀರಾ? ವರದಕ್ಷಿಣೆ ಕಿರುಕುಳ | ಮಗು ಕೊಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಆತ್ಮಹತ್ಯೆ

Advertisements

ಕೌಟುಂಬಿಕವಾಗಿ ಒಟ್ಟು 5,456 ವರದಕ್ಷಿಣೆ ಪ್ರಕರಣ ಹಾಗೂ 7,546 ಪ್ರಕರಣಗಳು ಗಂಡನಿಂದ ಕಿರುಕುಳಕ್ಕೆ ಸಂಬಂಧಿಸಿದಂತೆ ದಾಖಲಾಗಿವೆ. ಇವುಗಳಲ್ಲಿ 340 ಮಹಿಳೆಯರು ವರದಕ್ಷಿಣೆ ಕಿರುಕುಳದಿಂದಾಗಿ ಮೃತಪಟ್ಟಿದ್ದಾರೆ ಎಂದು ಅಧಿಕೃತ ಮಾಹಿತಿಗಳಿಂದ ತಿಳಿದು ಬಂದಿದೆ. ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ವಿವಿಧ ಕಡೆಗಳಲ್ಲಿ ಒಟ್ಟು 16,273 ಪ್ರಕರಣಗಳು ದಾಖಲಾಗಿವೆ.

ಕಠಿಣ ಕಾನೂನು ಜಾರಿಯಲ್ಲಿದ್ದರೂ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಲೇ ಇವೆ. ವರದಿಯ ಪ್ರಕಾರ 2023ರಲ್ಲಿ 600, 2024ರಲ್ಲಿ 739 ಕೇಸುಗಳು ಹಾಗೂ 2025ರ ಜುಲೈವರೆಗಿನ ಕೇವಲ ಏಳು ತಿಂಗಳ ಅವಧಿಯಲ್ಲಿ 547 ಪ್ರಕರಣಗಳು ದಾಖಲಾಗಿವೆ. 2023ರಲ್ಲಿ 3,902 ಪೋಕ್ಸೊ ಪ್ರಕರಣಗಳು, 2024 ರಲ್ಲಿ 4,064 ಹಾಗೂ ಪ್ರಸಕ್ತ ವರ್ಷದ ಜುಲೈವರೆಗಿನ ವರದಿಯಲ್ಲಿ 2,544 ಪೋಕ್ಸೊ ಪ್ರಕರಣಗಳು ದಾಖಲಾಗಿವೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ “ಬಡತನ, ಅನಕ್ಷರತೆ, ಕಾನೂನಿನ ಕುರಿತು ಸಮರ್ಪಕ ಮಾಹಿತಿ ಇಲ್ಲದಿರುವುದರಿಂದ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಮಹಿಳಾ ಆಯೋಗವು ಸೂಕ್ತ ರೀತಿಯಲ್ಲಿ ರಕ್ಷಣೆ ಒದಗಿಸುವುದರ ಜೊತೆಗೆ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕೆಲಸ ಮಾಡುತ್ತಿದೆ. ಅತ್ಯಾಚಾರ, ಪೋಕ್ಸೋದಂತಹ ಪ್ರಕರಣಗಳನ್ನು ನ್ಯಾಯಾಲಯವು ಶೀಘ್ರವೇ ಪರಿಶೀಲಿಸಿ ಸಂತ್ರಸ್ತರಿಗೆ ನ್ಯಾಯ ನೀಡಬೇಕು” ಎಂದರು.

ಕೇವಲ ಕಾನೂನು ಕ್ರಮಗಳ ಮೂಲಕ ಮಾತ್ರವೇ ಇಂತಹ ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಿಲ್ಲ ಎನ್ನುವ ಸ್ಪಷ್ಟ ಮಾಹಿತಿಯನ್ನು ಈ ಮೇಲಿನ ವರದಿಯು ದೃಢಪಡಿಸುತ್ತದೆ. ಕೌಟುಂಬಿಕ ಗೌರವಕ್ಕೆ ಧಕ್ಕೆ ಉಂಟಾಗಬಹುದು ಎಂಬ ಕಾರಣಕ್ಕಾಗಿ ದೂರುಗಳನ್ನು ನೀಡದಿರುವ ಅಥವಾ ಎಷ್ಟೋ ಪ್ರಕರಣಗಳು ಮುನ್ನಲೆಗೆ ಬಾರದೆ ಇರುವುದನ್ನು ಗಮನಿಸಬಹುದು.

ಪ್ರಕರಣ ದಾಖಲಾದರೂ ಕಾನೂನು ಕ್ರಮಗಳಿಂದ ಆರೋಪಿಗಳು ತಪ್ಪಿಸಿಕೊಳ್ಳಲು ರಾಜಕೀಯ, ಸಾಮಾಜಿಕ ಸ್ಥಾನಮಾನ ಅವಕಾಶ ಮಾಡಿಕೊಡುವುದರಿಂದ ಸಂತ್ರಸ್ತರು ನ್ಯಾಯ ಪಡೆಯುವಲ್ಲಿ ಸವಾಲುಗಳನ್ನು ಎದುರಿಸಬೇಕಾಗಿದೆ. ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆ ಇವುಗಳಾದರೆ, ಇನ್ನು ದಾಖಲಾಗದ ಹಿಂಸಾಚಾರಗಳ ಸಂಖ್ಯೆ ಎಷ್ಟಿರಬಹುದು ಎಂಬುವುದನ್ನು ಊಹಿಸಲಾಗದು!

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X