ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯಿಂದ ಉಂಟಾದ ಅಲೆಗಳ ಅಬ್ಬರಕ್ಕೆ ದಡಕ್ಕೆ ಬಂದಿದ್ದ ಇಂಡೋ-ಪೆಸಿಫಿಕ್ ಹಂಪ್‌ಬ್ಯಾಕ್ ಡಾಲ್ಪಿನ್ ಮರಿಯನ್ನು ಕಾರವಾರದ ದೇವಬಾಗ ಕಡಲತೀರದಲ್ಲಿ ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ.
ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಡಾಲ್ಪಿನ್ ಮರಿ ಸಮುದ್ರಕ್ಕೆ ಹಿಂತಿರುಗಲು ಸಾಧ್ಯವಾಗದೆ ಒದ್ದಾಡುತ್ತಿತ್ತು. ಇದನ್ನು ಗಮನಿಸಿದ ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್ ಸಿಬ್ಬಂದಿ ನೀಲೇಶ, ಸುನೀಲ ಮತ್ತು ಸಂತೋಷ ಅವರು ಕೂಡಲೇ ಸ್ಥಳಕ್ಕಾಗಮಿಸಿ, ಶ್ರಮಪಟ್ಟು ಅದನ್ನು ಸುರಕ್ಷಿತವಾಗಿ ಮತ್ತೆ ಸಮುದ್ರಕ್ಕೆ ಬಿಡುವಲ್ಲಿ ಯಶಸ್ವಿಯಾದರು.