ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗದ ಅಭಿಲಾಷೆಯಿಂದ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ? ಒಂದು ದಿನದ ಕಾರ್ಯಾಗಾರದ ಪೋಸ್ಟರ್ ಅನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಹೇಶ ಪೊತದಾರ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರ ನೇತೃತ್ವದಲ್ಲಿ ಬಿಡುಗಡೆ ಮಾಡಲಾಯಿತು.
ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯ್ ಕುಮಾರ್ ಅಜಮನಿ ಮಾತನಾಡಿ, “ಪ್ರತಿ ವರ್ಷದಂತೆ ಈ ವರ್ಷವೂ ಸರ್ಕಾರಿ ನೌಕರಿ ಉದ್ದೇಶದಿಂದ ವಿಜಯಪುರ ನಗರಕ್ಕೆ ಲಕ್ಷಾಂತರ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಎಷ್ಟೋ ವಿದ್ಯಾರ್ಥಿಗಳು ಸುಮಾರು ವರ್ಷದಿಂದ ಓದಿಕೊಂಡೇ ಇರುತ್ತಾರೆ. ಅವರಿಗೆ ಸರಿಯಾದ ಮಾರ್ಗದರ್ಶನವಿಲ್ಲದೆ ಎನು ಓದಬೇಕು, ಯಾವರೀತಿ ಓದಬೇಕು ಎನ್ನುವ ಗೊಂದಲದಲ್ಲಿರುತ್ತಾರೆ. ಅಂತಹ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕೆನ್ನುವ ಉದ್ದೇಶದಿಂದ ಜಿಲ್ಲೆಯ ಉನ್ನತ ಮಟ್ಟದ ಅಧಿಕಾರಿಗಳ ಮತ್ತು ನಾಡಿನ ಹೆಸರಾಂತ ಉಪನ್ಯಾಸಕರಾದ ಮಂಜುನಾಥ್ ಶಿಕಾರಿ ಸಾಧನ ಅಕಾಡೆಮಿ ಮತ್ತು ಡಿವಿಪಿ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ, ಶರಣಯ್ಯ ಭಂಡಾರಿಮಠಯವರಿಂದ ಉಪನ್ಯಾಸ ಮಾಡಿಸಲಾಗುವುದು” ಎಂದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗದಲ್ಲಿ ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆ: ಕುರಿಗಾಹಿಯಿಂದ ಧ್ವಜಾರೋಹಣ
ಈ ಕಾರ್ಯಕ್ರಮ ಆಗಸ್ 24ರ ಭಾನುವಾರದಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಪ್ರತಿಷ್ಠಿತ ಕಂದಗಲ್ ಹನುಮಂತ ರಾಯರ ರಂಗಮಂದಿರದಲ್ಲಿ ಕಾರ್ಯಾಗಾರ ನಡೆಸಲಾಗುವುದು. ಮಧ್ಯಾಹ್ನ ಊಟದ ವ್ಯವಸ್ಥೆ ಕೂಡ ಮಾಡಿರುತ್ತೇವೆ. ಎಲ್ಲ ಮೂಲಭೂತ ವ್ಯವಸ್ಥೆಗಳೊಂದಿಗೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಆದ್ದರಿಂದ ಜಿಲ್ಲೆಯ ಎಲ್ಲ ವಿದ್ಯಾರ್ಥಿ ಮಿತ್ರರು ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು” ಎಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಎಲ್ಲ ಅಧಿಕಾರಿ ವೃಂದ ಮತ್ತು ಸಿಬ್ಬಂದಿಗಳು ಹಾಗೂ ದಲಿತ ವಿದ್ಯಾರ್ಥಿ ಪರಿಷತ್‌ನ ಎಲ್ಲ ಮುಖಂಡರು, ಪದಾಧಿಕಾರಿಗಳು ಭಾಗಿಯಾಗಿದ್ದರು.