ಹಾವೇರಿ | ವಿದ್ಯಾರ್ಥಿಗಳು ಓದಿನೊಂದಿಗೆ ಕೌಶಲ್ಯ ತರಬೇತಿ ಪಡೆದುಕೊಳ್ಳಬೇಕು: ಶಾಸಕ ಪ್ರಕಾಶ ಕೋಳಿವಾಡ

Date:

Advertisements

“ವಿದ್ಯಾರ್ಥಿಗಳು ಓದಿನೊಂದಿಗೆ ಕೌಶಲ್ಯ ತರಬೇತಿ ಪಡೆದುಕೊಳ್ಳಬೇಕು. ಶಾಲಾ ಹಂತದಿಂದಲೇ ಮಕ್ಕಳಿಗೆ ಕೌಶಲ್ಯ ಕಲಿಸಬೇಕು” ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಹಾವೇರಿ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯ ಯುವನಿಧಿ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಆಯೋಜಿಸಲಾದ “ಅರಿವು” ಉದ್ಯೋಗವಕಾಶಗಳ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

“ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದು, ಕಲಿಕೆ ಹಾಗೂ ಕೈಗಾರಿಕೆ ಕೌಶಲ್ಯದ ನಡುವೆ ಅಂತರವಿರುತ್ತದೆ. ಹಾಗಾಗಿ ತಂತ್ರಜ್ಞಾನ ಯುಗದಲ್ಲಿ ಕೌಶಲ್ಯದ ತರಬೇತಿ ಅಗತ್ಯವಾಗಿದೆ. ಯುವ ಸಮೂಹ ತಂತ್ರಜ್ಞಾನ ಸರಿಯಾಗಿ ಬಳಕೆಮಾಡಿಕೊಂಡು ಹಾಗೂ ಯುವನಿಧಿ ಹಣವನ್ನು ಕೌಶಲ್ಯ ತರಬೇತಿಗೆ ಉಪಯೋಗಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು” ಎಂದು ಕರೆ ನೀಡಿದರು.

Advertisements

“ದೇಶದಲ್ಲಿ ದುಡಿಯುವ ಕೈಗಳು ಹೆಚ್ಚಾದರೆ ಆದೇಶ ಆರ್ಥಿಕ ಅಭಿವೃದ್ಧಿ ಜೊತೆಗೆ ವಿಶ್ವಗುರು ಆಗಲು ಸಾಧ್ಯ. ಹಾಗಾಗಿ ಕೃಷಿ, ತೋಟಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿದ್ದು. ಅವುಗಳ ಬಗ್ಗೆ ತಿಳಿದುಕೊಂಡು ಸ್ವಂತ ಉದ್ಯಮಗಳನ್ನು ಆರಂಭಿಸಿ ಸದೃಢ ದೇಶ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು” ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ. “ಭಾರತ ದೇಶದಲ್ಲಿ ಲಕ್ಷಕ್ಕೂ ಅಧಿಕ ಕಾಲೇಜುಗಳಿವೆ. ಪ್ರತಿ ವರ್ಷ ಕೋಟಿಗೂ ಅಧಿಕ ಪದವೀಧರರು ಹೊರಬರುತ್ತಿದ್ದಾರೆ. ನೂರು ಜನರಲ್ಲಿ ಶೇ.22.6 ರಷ್ಟು ಜನರಿಗೆ ಮಾತ್ರ ಉದ್ಯೋಗ ನೀಡಬಹುದಾಗಿದೆ. ಹಾಗಾಗಿ ಯುವ ಸಮೂಹ ಜ್ಞಾನದ ಜೊತೆಗೆ ಕೌಶಲ್ಯ ರೂಢಿಸಿಕೊಳ್ಳಬೇಕು. ಕೈಗಾರಿಕೆಗಳಿಗೆ ಬೇಕಾದ ಕೌಶಲ್ಯ ಯುವ ಸಮೂಹ ಕಲಿಯಬೇಕು” ಎಂದು ಹೇಳಿದರು.

“ಕಠಿಣ ಪರಿಶ್ರಮ ಹಾಗೂ ಇಚ್ಛಾಶಕ್ತಿಯಿಂದ ಏನಾದರೂ ಸಾಧಿಸಬಹುದು. ಸಮಯಕ್ಕೆ ಬಹಳ ಮಹತ್ವ ಇದೆ. ಜೀವನದಲ್ಲಿ ಶಿಸ್ತು ಸಮಯ ಪಾಲನೆ ಮಾಡಿದರೆ ಯಶಸ್ಸು ಸಾಧ್ಯ. ನಿಮ್ಮಲ್ಲಿ ದುಡಿಯುವ ಮನಸ್ಸು, ಸಾಧಿಸುವ ಛಲ ಇದ್ದರೆ ಮಿಲೆನಿಯನ್ ಹಾಗೂ ಬಿಲೆನಿಯನ್ ಕೂಡ ಆಗಬಹುದು. ಧೈರ್ಯದಿಂದ ಮುನ್ನುಗ್ಗಬೇಕು. ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಕೃಷಿ, ತೋಟಗಾರಿಕೆ, ಹಣ್ಣು, ತರಕಾರಿ, ಹಾಲು ಸೇರಿದಂತೆ ವಿವಿಧ ಆಹಾರ ಪದಾರ್ಥಗಳ ಸಂಸ್ಕರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಇಂತಹ ಕೌಶಲ್ಯ ತರಬೇತಿಗಳನ್ನು ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು” ಎಂದು ಶುಭ ಕೋರಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ.ಹಿರೇಮಠ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಮೈದೂರ ಅವರು ಮಾತನಾಡಿದರು. ಜಿಲ್ಲಾ ಕೌಶಲ್ಯ ಅಭಿವೃದ್ದಿ ಇಲಾಖೆ ಅಧಿಕಾರಿ ಶ್ರೀಮತಿ ಸೋನಾಲಿ ಕ್ಷೀರಸಾಗರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಲಕ್ಷ್ಮೇಶ್ವರ ರಸ್ತೆಯುದ್ಧಕ್ಕೂ ನೂರಾರು ತಗ್ಗು ಗುಂಡಿಗಳು: ರಸ್ತೆ ಅಭಿವೃದ್ಧಿಪಡಿಸಲು ಸಾರ್ವಜನಿಕರು ಒತ್ತಾಯ

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ರುಚಿ ಬಿಂದಲ್, ಬ್ಯಾಡಗಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಂಭನಗೌಡ ಪಾಟೀಲ ಹಾಗೂ ಸವಣೂರ ತಾಲೂಕು ಅಧ್ಯಕ್ಷ ಸುಭಾಸ ಮಜ್ಜಗಿ ಇತರರು ಉಪಸ್ಥಿತರಿದ್ದರು. ನಾಗಪ್ಪ ಗೋಡಿ ಸ್ವಾಗತಿಸಿದರು. ಕುಮಾರ ಬಿದರಗಡ್ಡಿ ಕಾರ್ಯಕ್ರಮ ನಿರೂಪಿಸಿದರು. ಚೇತನಕುಮಾರ ಮೊಹತೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Download Eedina App Android / iOS

X