ಮಲೆನಾಡಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ನಾಳೆ (ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ತಾಲೂಕುಗಳಲ್ಲಿ ಹಾಗೂ ಚಿಕ್ಕಮಗಳೂರು ತಾಲೂಕಿನ ಆವತಿ, ಅಂಬಳೆ, ಕಸಬಾ, ಜಾಗರ, ವಸ್ತಾರೆ, ಆಲ್ಲೂರು, ಖಾಂಡ್ಯ ಹೋಬಳಿ ಮತ್ತು ತರೀಕೆರೆ ತಾಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ ವ್ಯಾಪ್ತಿಯ ಅಂಗನವಾಡಿ, ಶಿಶುಪಾಲನಾ ಕೇಂದ್ರಗಳು ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ದಲಿತ ಯುವಕ ಸಾವಿನ ಪ್ರಕರಣ: ಆರೋಪಿ ಪೊಲೀಸ್ ಪೇದೆ ಬಂಧನ
ಎಲ್ಲಾ ಶಾಲೆಗಳು ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಂಡು ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ