ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮ ರಾವ್ ಅವರಿಗೆ ದೇವರಾಜ ಅರಸು ಪ್ರಶಸ್ತಿ, ಆ.20ಕ್ಕೆ ಪ್ರದಾನ

Date:

Advertisements

ಹಿರಿಯ ಪತ್ರಕರ್ತ, ಜನಪ್ರಗತಿ ಸಂಪಾದಕರಾಗಿದ್ದ ಕಲ್ಲೆ ಶಿವೋತ್ತಮ ರಾವ್ ಅವರ ಪತ್ರಿಕೋದ್ಯಮದಲ್ಲಿನ ಸೇವೆ ಗುರುತಿಸಿ ರಾಜ್ಯ ಸರ್ಕಾರ 2025ನೇ ಸಾಲಿನ ದಿ. ದೇವರಾಜ ಅರಸು ಪ್ರಶಸ್ತಿ ಘೋಷಿಸಿದೆ.

ಪ್ರತಿಷ್ಠಿತ ಡಿ. ದೇವರಾಜ ಅರಸು ಪ್ರಶಸ್ತಿ ವಿಜೇತರಾದ ಕಲ್ಲೆ ಶಿವೋತ್ತಮ ರಾವ್ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಾದ ಕೆ ಎ ದಯಾನಂದ ಅವರು ಸೋಮವಾರ ಸನ್ಮಾನಿಸಿದರು. ಇಲಾಖೆಯ ಜಂಟಿ ನಿರ್ದೇಶಕ ಜಗದೀಶ್ ಕುಮಾರ್, ಕಲ್ಲೆಯವರ ಪುತ್ರ ಅಜಿತ್ ಕಲ್ಲೇ ಹಾಗೂ ಪತ್ರಕರ್ತ ಜಿ ಎನ್ ಮೋಹನ್ ಅವರು ಜತೆಗಿದ್ದರು.

ಸಾಮಾಜಿಕ ಪರಿವರ್ತನೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ
110ನೇ ಜನ್ಮ ದಿನಾಚರಣೆಯಂದು (ಆ.20) ವಿಧಾನಸೌಧದ ಬ್ಯಾಕ್ವೇಟ್‌ ಹಾಲ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Advertisements

ಕಲ್ಲೆ ಶಿವೋತ್ತಮರಾವ್ ಅವರ ಕಿರು ಪರಿಚಯ

ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಶಾಕಿರಣವಾಗಿ, ಸಾಮಾನ್ಯ ನ್ಯಾಯದ ಪ್ರತಿಪಾದಕರಾಗಿ, ನೊಂದವರ ಬದುಕಿಗೆ ಹೊಸ ಚೇತನ ನೀಡಿ, ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದು, ಹಿಂದುಳಿದ ವರ್ಗಗಳ ಸರ್ವತೋಮುಖ ಅಭಿವೃದ್ಧಿ ಗಾಗಿ ಶ್ರಮಿಸಿದ ಮಹಾನ್ ಚೇತನ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ ಹೆಸರಿನಲ್ಲಿ ಕರ್ನಾಟಕ ಸರ್ಕಾರವು ಪ್ರತಿಷ್ಠಾಪಿಸಿರುವ ರಾಜ್ಯ ಮಟ್ಟದ ಪ್ರಶಸ್ತಿಗೆ ಕಲ್ಲೆ ಶಿವೋತ್ತಮರಾವ್‌ ಆಯ್ಕೆಯಾಗಿರುತ್ತಾರೆ.

ಕಲ್ಲೆ ಶಿವೋತ್ತಮರಾವ್ ಇವರು 1929ರಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಜನಿಸಿದರು. ಇವರ ಮಾತೃ ಭಾಷೆ ತುಳು. ಇವರು ಚಿಕ್ಕವರಿದ್ದಾಗ ಆಟದಲ್ಲಿ ಅಂತಹ ಆಸಕ್ತಿ ಇರಲಿಲ್ಲ. ಆಟದ ಸಮಯದಲ್ಲಿ, ಸಂಯುಕ್ತ ಕರ್ನಾಟಕದಲ್ಲಿ ಪತ್ರಕರ್ತರಾಗಿದ್ದ ಅಪ್ಪನ ಲೈಬ್ರರಿಯಲ್ಲಿದ್ದ ಪುಸ್ತಕಗಳನ್ನೆಲ್ಲ ಪಾಠದಂತೆ ಓದಿ, ಮಹಾಭಾರತ, ರಾಮಾಯಣ, ಭಗವದ್ಗೀತೆಗಳನ್ನು ಬಾಯಿಪಾಠ ಮಾಡಿದ್ದರು. ಆದಕಾರಣ 14ನೇ ವಯಸ್ಸಿಗೆ ಮಂಗಳೂರಿನ ಕುಡವರ ‘ನವಭಾರತ’ ಎಂಬ ದೈನಿಕಕ್ಕೆ ವರದಿಗಾರನಾಗಿ ಕೆಲಸಕ್ಕೆ ಸೇರಿದರು. ಆನಂತರ ಕಡಂಗೋಡ್ಲು ಶಂಕರಭಟ್ಟರ ‘ರಾಷ್ಟ್ರ ಬಂಧು’ ವಾರಪತ್ರಿಕೆಗೆ ಸೇರಿ, `ರಾಷ್ಟ್ರ ಮತ’ ದಲ್ಲಿ ಸ್ವಲ್ಪ ದಿನವಿದ್ದು, ಅಲ್ಲಿಂದ ನೇರವಾಗಿ ಬೆಂಗಳೂರಿನ ಬಿ.ಎನ್.ಗುಪ್ತರ ‘ಜನಪ್ರಗತಿ’ ಪತ್ರಿಕೆಗೆ ಬಂದರು. ಅಲ್ಲಿ 14 ವರ್ಷಗಳ ಕಾಲ, ಕಾರ್ಯನಿರ್ವಾಹಕ ಸಂಪಾದಕರಾಗಿ, ಸಂಪಾದಕರಾಗಿ ಕಾರ್ಯ ನಿರ್ವಹಿಸಿದರು. ಅದಾದ ಮೇಲೆ ಪ್ರಜಾವಾಣಿ ಮತ್ತು ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ತಲಾ ಮೂರು ವರ್ಷ ಸೇವೆ ಸಲ್ಲಿಸಿದರು. ಎನ್‌ಲೈಟ್’ ಎಂಬ ಇಂಗ್ಲಿಷ್ ವಾರಪತ್ರಿಕೆಗೂ ಬರೆದರು. ಇವರು ಜೆಪಿ, ಲೋಹಿಯಾರ ಸಮಾಜವಾದ; ಎಡಪಂಥೀಯ ವಿಚಾರಧಾರೆಯನ್ನು ಒಪ್ಪಿದವರು.

ಆಗಿನ ಕಾಲದಲ್ಲಿ ಪ್ರಚಲಿತದಲ್ಲಿದ್ದ, ತಾಯಿನಾಡು, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ಕನ್ನಡಪ್ರಭ ದೈನಿಕಗಳು ಮತ್ತು ಜನಪ್ರಗತಿ, ಕಂಠೀರವ ಎಂಬ ವಾರಪತ್ರಿಕೆಗಳು, ಜನಪ್ರಗತಿ ವಾರಪತ್ರಿಕೆಯಲ್ಲಿ ಸರ್ಕಾರದ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸುವ, ಓದುಗರನ್ನು ಜಾಗೃತರನ್ನಾಗಿಸುವ ಅಗ್ರ ಲೇಖನಗಳು ಪ್ರಕಟವಾಗುತ್ತಿದ್ದ ಕಾರಣ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಈ ಪತ್ರಿಕೆಯ ಸಂಪಾದಕರಾಗಿದ್ದ ಕಲ್ಲೆ ಶಿವೋತ್ತಮ ರಾಯರು ಪ್ರಬುದ್ಧ, ಚಿಂತನಾರ್ಹ ರಾಜಕೀಯ ವಿಶ್ಲೇಷಣೆಗೆ ಹೆಸರಾಗಿದ್ದರು.

ಕಲ್ಲೆ ಶಿವೋತ್ತಮರಾವ್ ರವರು ಹಾವನೂರು ಆಯೋಗ ರಚನೆ ಪೂರ್ವದಲ್ಲಿಯೇ ಹಿಂದುಳಿದ ವರ್ಗಗಳ ಬಗ್ಗೆ ಜಾಗೃತಿ ಮೂಡಿಸಲು ಶ್ರಮಿಸಿದವರು, ಪೆರಿಯಾರ್ ಚಳುವಳಿಯ ಪ್ರತಿಪಾದಕರು, ಡಿ. ದೇವರಾಜ ಅರಸು ಅವರಿಗಿಂತ ಮೊದಲೇ ಹಿಂದುಳಿದ ವರ್ಗಗಳ ಸಮುದಾಯದ ಯುವಕರಲ್ಲಿ ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವ ಮೂಡಿಸಲು ಶ್ರಮಿಸಿದ್ದ ವ್ಯಕ್ತಿ. “ಜನಪ್ರಗತಿ” ಪತ್ರಿಕೆಯ ಸಂಪಾದಕರಾಗಿ ನೂರಾರು ಯುವಕರನ್ನು ಬರವಣಿಗೆ ಕ್ಷೇತ್ರಕ್ಕೆ ತಂದ ಕೀರ್ತಿ ಇವರಿಗೆ ಸಲ್ಲುತ್ತದೆ.
ಪ್ರಾಮಾಣಿಕತೆ ಮತ್ತು ವೃತ್ತಿನಿಷ್ಠೆಗೆ ಬದ್ದರಾಗಿದ್ದ ಶಿವೋತ್ತಮರಾಯರು ಪತ್ರಿಕೋದ್ಯಮದ ಮೌಲ್ಯವನ್ನು ಹೆಚ್ಚಿಸಿದವರಲ್ಲಿ ಪ್ರಮುಖರಾಗಿದ್ದರು. ಶಿವೋತ್ತಮ ರಾಯರು ಅಧಿಕಾರಸ್ಥರಿಂದ ಸಮಾನ ಅಂತರವನ್ನು ಕಾಯ್ದು ಕೊಂಡು, ಪತ್ರಿಕೋದ್ಯಮಕ್ಕೆ ಬೆಲೆ ತಂದವರು.

ನೊಂದವರ ನಂದಾದೀಪ, ಶೋಷಿತರ ಸಮಗ್ರ ಅಭಿವೃದ್ಧಿಯ ಹರಿಕಾರ ಡಿ ದೇವರಾಜ ಅರಸು ರವರ ಚಿಂತನೆ, ಆದರ್ಶ ತತ್ವಗಳಿಗೆ ಧ್ವನಿಯಾಗಿ, ಸಮಾಜವಾದಿ ವಿಚಾರಗಳನ್ನು ಮೈಗೂಡಿಸಿಕೊಂಡು ಜಾತ್ಯಾತೀತತೆ ತತ್ವದಲ್ಲಿ ನಂಬಿಕೆ ಇರಿಸಿ, ಸಾಮಾಜಿಕ ನ್ಯಾಯದ ಪರವಾಗಿ ಕಾರ್ಯನಿರ್ವಹಿಸುತ್ತಾ, ಧಮನಿತರ ಪರವಾದ ಸೇವೆಯಲ್ಲಿ ತೊಡಗಿಸಿ ಕೊಂಡಿರುವ ಶ್ರೀ ಕಲ್ಲೆ ಶಿವೋತ್ತಮರಾವ್ ಇವರನ್ನು ಕರ್ನಾಟಕ ರಾಜ್ಯ ಸರ್ಕಾರವು ಗುರುತಿಸಿ, ಗೌರವಿಸಿ 2025ನೇ ಸಾಲಿನ ಪ್ರತಿಷ್ಠಿತ “ಡಿ.ದೇವರಾಜ ಅರಸು ಪ್ರಶಸ್ತಿ” ಯನ್ನು ನೀಡುತ್ತಿದೆ.

ದೇವರಾಜ ಅರಸು ಅವರ ಜನ್ಮದಿನದಂದು ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ವ್ಯಕ್ತಿ/ಸಂಘ/ಸಂಸ್ಥೆಗೆ ಡಿ.ದೇವರಾಜ ಅರಸು ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. ಅದರಂತೆ 2025-26ನೇ ಸಾಲಿಗೆ ಡಿ. ದೇವರಾಜ ಅರಸು ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡುವ ಸಲುವಾಗಿ ಆಯ್ಕೆ ಸಮಿತಿ ರಚಿಸಲಾಗಿತ್ತು.

ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ ಎಸ್‌ ದ್ವಾರಕಾನಾಥ್‌ ನೇಮಕವಾಗಿದ್ದಾರೆ. ಆಯ್ಕೆ ಸಮತಿಯ ಸದಸ್ಯರಾಗಿ ‘ಈ ದಿನ.ಕಾಂ’ನ ಸಂಪಾದಕರು ಮತ್ತು 2015ರಲ್ಲಿ ದೇವರಾಜ ಅರಸು ಹಿಂದುಳಿದ ಜಾತಿಗಳ ಅಭಿವೃದ್ಧಿ ನಿಗಮದ ವತಿಯಿಂದ ದೇವರಾಜ ಅರಸು ಪುಸ್ತಕ ಪ್ರಕಟಣೆಯ ಸಂಪಾದಕೀಯ ಮಂಡಳಿಯ ಸಂಪನ್ಮೂಲ ವ್ಯಕ್ತಿಯಾಗಿದ್ದ ಬಸವರಾಜು ಮೇಗಲಕೇರಿ, ನಿವೃತ್ತ ಪ್ರಾಂಶುಪಾಲ ಬಿ ಶಿವರಾಮ ಶೆಟ್ಟಿ, ಡಾ.ಯು.ಪಿ.ಚಂದ್ರಶೇಖರ್‌, ಡಾ. ಲಕ್ಷ್ಮಣ ದಸ್ತಿ ಆಯ್ಕೆ ಸಮಿತಿ ಸದಸ್ಯರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X