ದಾವಣಗೆರೆ ನಗರದ ಶಾಸ್ತ್ರೀನಗರದಲ್ಲಿ ಮನೆ ಮುಂದೆ ಆಟ ಆಡುವ ವೇಳೆ ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡು ರೇಬೀಸ್ ಗೆ ಒಳಗಾಗಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.
4 ವರ್ಷದ ಖದೀರಾ ಬಾನು ಬೀದಿ ನಾಯಿ ದಾಳಿಗೆ ಬಲಿಯಾದ ದುರ್ದೈವಿ ಮಗು. ನಾಲ್ಕು ತಿಂಗಳ ಹಿಂದೆ ಮನೆಯ ಬಳಿ ಆಟವಾಡುವಾಗ ಬೀದಿ ನಾಯಿ ದಾಳಿ ನಡೆಸಿತ್ತು. ನಾಯಿ ಕಡಿತದಿಂದ ಮಗುವಿಗೆ ತೀವ್ರ ಗಾಯಗಳಾಗಿದ್ದು, ನಾಯಿ ಕಡಿತದಿಂದ ಉಂಟಾಗುವ ರೇಬೀಸ್ ಖಾಯಿಲೆಗೆ ಬಾಲಕಿಗೆ ತುತ್ತಾಗಿತ್ತು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗದಲ್ಲಿ ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆ: ಕುರಿಗಾಹಿಯಿಂದ ಧ್ವಜಾರೋಹಣ
ನಾಲ್ಕು ತಿಂಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೇರಿದಂತೆ ವಿವಿಧ ಖಾಸಗಿ ಅಸ್ಪತ್ರೆಗಳಲ್ಲಿ ರೇಬೀಸ್ ಗೆ ಚಿಕಿತ್ಸೆ ಕೊಡಿಸಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಬಾಲಕಿ ಮೃತಪಟ್ಟಿದ್ದಾರೆ. ದಾವಣಗೆರೆ ನಗರದ ಶಾಸ್ತ್ರೀನಗರ, ಎಸ್ ವಿ ಎಸ್ ನಗರ, ಆಜಾದ್ ಮಿಲ್, ನಿಟುವಳ್ಳಿ, ಬೂದಾಳ್ ರಸ್ತೆ, ಮಂಡಕ್ಕಿ ಭಟ್ಟಿ ಸೇರಿದಂತೆ ಹಲವು ಭಾಗಗಳಲ್ಲಿ ಹಿಂಡು ಹಿಂಡಾಗಿ ಬೀದಿನಾಯಿಗಳ ಕಾಟ ಹೆಚ್ಚಾಗಿದೆ. ನಾಯಿಗಳನ್ನು ನಿಯಂತ್ರಿಸುವಲ್ಲಿ ಸಾರ್ವಜನಿಕರು ಪದೇ ಪದೇ ಮನವಿ ಮಾಡಿದರೂ ಸ್ಥಳೀಯ ಆಡಳಿತ ವಿಫಲವಾಗಿದೆ. ಕಳೆದೊಂದು ವರ್ಷದಿಂದ ನಗರದಲ್ಲಿ ಎರಡು ಮೂರು ಮಕ್ಕಳು ನಾಯಿಕಡಿತಕ್ಕೆ ಬಲಿಯಾಗಿವೆ.
.