ಬೀದರ್‌ |ಜೆಜೆಎಂ ಕಾಮಗಾರಿ ಕಳಪೆಯಾದರೆ ಶಿಸ್ತು ಕ್ರಮ: ಶಾಸಕ ಪ್ರಭು ಚವ್ಹಾಣ

Date:

Advertisements
  • ಕ್ಷೇತ್ರದಲ್ಲಿ ಜೆಜೆಎಂ ಕೆಲಸ ಕಳಪೆಯಾದರೆ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆ
  • ಸಾರ್ವಜನಿಕರ ಅಹವಾಲು ಸ್ವೀಕರಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆ

ಜಲ ಜೀವನ್ ಮಿಷನ್ ಯೋಜನೆಯಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿ ಸರಿಯಾಗಿ ಆಗಬೇಕು. ಕೆಲಸ ಕಳಪೆಯಾದರೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕ ಪ್ರಭು.ಬಿ ಚವ್ಹಾಣ ಅವರು ಎಚ್ಚರಿಸಿದರು.

ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಸಂಚರಿಸಿ ಜೆಜೆಎಂ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, “ಪ್ರತಿ ಮನೆಗೆ ನಲ್ಲಿಗಳನ್ನು ಅಳವಡಿಸಿ ಶುದ್ಧ ಕುಡಿಯುವ ನೀರು ಪೂರೈಸುವುದು ಈ ಯೋಜನೆಯ ಉದ್ದೇಶವಾಗಿದ್ದು, ನೀರಿನ ತೊಟ್ಟಿ ಹಾಗೂ ಪೈಪ್ ಲೈನ್ ಕೆಲಸ ಸರಿಯಾಗಿ ಆಗಬೇಕು. ಪೈಪ್ ಅಳವಡಿಸಲು ಅಗೆದ ಗುಂಡಿಗಳನ್ನು ಸರಿಯಾಗಿ ಮುಚ್ಚಬೇಕು. ಕೆಲಸ ನಿಗದಿತ ಅವಧಿಯಲ್ಲಿ ಮುಗಿಸಿ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಗ್ರಾಮಸ್ಥರು ಕೂಡ ಅಭಿವೃದ್ಧಿ ಕೆಲಸಗಳಿಗೆ ಸಹಕರಿಸುವ ಜೊತೆಗೆ ಕೆಲಸ ಸರಿಯಾಗಿ ಆಗುವಂತೆ ನೋಡಿಕೊಳ್ಳಬೇಕು. ಏನಾದರೂ ಲೋಪಗಳು ಕಾಣಿಸಿದಲ್ಲಿ ತಕ್ಷಣ ಸಂಬಂಧಿಸಿದ ಅಧಿಕಾರಿ ಅಥವಾ ತಮ್ಮನ್ನು ಸಂಪರ್ಕಿಸಬೇಕೆಂದು” ಹೇಳಿದರು.

ಇದೇ ಸಂದರ್ಭದಲ್ಲಿ ಹಂಗರಗಾದಲ್ಲಿ 1.50 ಕೋಟಿ, ವನಮಾರಪಳ್ಳಿಯಲ್ಲಿ 1.96 ಕೋಟಿ, ಬಾದಲಗಾಂವ ತಾಂಡಾದಲ್ಲಿ 35.57 ಲಕ್ಷ, ದುಢಕನಾಳ್ ನಲ್ಲಿ 1.02 ಕೋಟಿ, ಸಂಗ್ರಾಮ ತಾಂಡಾದಲ್ಲಿ 27.51 ಲಕ್ಷ, ತೋರ್ಣಾ ವಾಡಿಯಲ್ಲಿ 1.38 ಕೋಟಿ, ತಪಶ್ಯಾಳದಲ್ಲಿ 2.63 ಕೋಟಿ ಹಾಗೂ ಖಂಡಿಕೇರಿ ತಾಂಡಾದಲ್ಲಿ 22.90 ಲಕ್ಷ ಮೊತ್ತದ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

Advertisements

ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಷಕರು ಎಲ್ಲ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ. ಧ್ಯಾನೇಶ್ವರ ನೀರಗುಡೆ ಅಧಿಕಾರ ಸ್ವೀಕಾರ

ಈ ಸಂದರ್ಭದಲ್ಲಿ‌ ಔರಾದ ತಾಲೂಕು ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಡಿ.ಸುಭಾಷ, ಮುಖಂಡರಾದ ವಸಂತ ಬಿರಾದಾರ, ರಾಜು ಪೋಕಲವಾರ, ಸುರೇಶ ಭೋಸ್ಲೆ, ರಾಮಶೆಟ್ಟಿ ಪನ್ನಾಳೆ,ಪ್ರತೀಕ್ ಚವ್ಹಾಣ, ಸಚಿನ ರಾಠೋಡ್, ದೊಂಡಿಬಾ ನರೋಟೆ, ವಸಂತ ರಾಠೋಡ್, ರಮೇಶ ಉಪಾಸೆ, ಸುನೀಲ ಸಿಗ್ರೆ, ಬಾಬುರಾವ ಬಿರಾದಾರ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X