ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಧಾರವಾಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರಿಗೆ ಮತ್ತು ರೈತರಿಗೆ ಮುಂಜಾಗ್ರತಾ ಕ್ರಮ ಪಾಲಿಸಲು ಸೂಚಿಸಲಾಗಿದೆ.
ಹವಾಮಾನ ಇಲಾಖೆಯ ವರದಿ ಪ್ರಕಾರ ಧಾರವಾಡ ಜಿಲ್ಲೆ ಸೇರಿದಂತೆ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯ ಬಗ್ಗೆ ತಿಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಆಗಸ್ಟ್ 20 ರಂದು, ಅರಸು ಹಾಗೂ ರಾಜೀವ್ ಗಾಂಧಿ ಜಯಂತಿ ಆಚರಣೆ
“ಸಾರ್ವಜನಿಕರು ಯೋಗ್ಯವಲ್ಲದ ಮನೆಗಳನ್ನು ಬಿಟ್ಟು ಸುರಕ್ಷಿತವಾದ ಮನೆಗಳಲ್ಲಿ ವಾಸಿಸಬೇಕು. ಅವಶ್ಯಕತೆ ಇದ್ದಾಗ ಮಾತ್ರ ಹೊರಗಡೆ ಓಡಾಡಬೇಕು. ಪ್ರತಿಕೂಲ ಹವಾಮಾನ ಇದ್ದಲ್ಲಿ ರೈತರು ಕೃಷಿ ಕೆಲಸಕ್ಕೆ ಹೊಲಗಳಿಗೆ ಹೋಗಬಾರದು. ತಮ್ಮ ಜಾನುವಾರುಗಳು ಸುರಕ್ಷಿತ ಜಾಗಗಳಲ್ಲಿ ವಾಸಿಸುವಂತೆ ನೋಡಿಕೊಳ್ಳಬೇಕು. ಗುಡುಗು ಮಿಂಚು ಮಳೆಯಾಗುತ್ತಿರುವಾಗ ಗಿಡ ಮರಗಳ ಕೆಳಗೆ ನಿಲ್ಲಬಾರದು” ಎಂದು ಸೂಚನೆಗಳನ್ನು ನೀಡಲಾಗಿದೆ.