ಮಂಡ್ಯ | ಈದ್ ಮಿಲಾದ್ ಮತ್ತು ಗಣೇಶ ಹಬ್ಬಗಳ ಶಾಂತಿಯುತ ಆಚರಣೆಗೆ ಡಿಸಿ ಕುಮಾರ್ ಸೂಚನೆ

Date:

Advertisements

ಮಂಡ್ಯ ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯಿಂದ ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸಾರ್ವಜನಿಕರ ಸಾಮರಸ್ಯ ಸಭೆಯಲ್ಲಿ ತಿಳಿಸಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, “ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗದಂತೆ ಕಾನೂನಿನ ಚೌಕಟ್ಟಿನಲ್ಲಿ ಗಣೇಶ ಹಬ್ಬವನ್ನು ಆಚರಿಸಿ” ಎಂದರು.

ಅನುಮತಿ ಕಡ್ಡಾಯ: ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪಿಸುವವರು ತಾಲೂಕು ಕಚೇರಿಗಳಲ್ಲಿ ತೆರೆಯಲಾಗುವ ಏಕಗವಾಕ್ಷಿ ಕೇಂದ್ರದಲ್ಲಿ ಮನವಿ ಸಲ್ಲಿಸಿ ಅನುಮತಿ ಪಡೆಯುವುದು ಕಡ್ಡಾಯ. ಅನುಮತಿ ಪಡೆಯುವ ಸಂದರ್ಭದಲ್ಲಿ ಗಣಪತಿ ಪ್ರತಿಷ್ಠಾಪಿಸುವ ದಿನಾಂಕ, ಅವಧಿ, ವಿಸರ್ಜನೆ ಮಾಡುವ ದಿನಾಂಕ ಮತ್ತು ಸ್ಥಳ, ಮೆರವಣಿಗೆಯ ರೂಟ್ ಮ್ಯಾಪ್ ಗಳನ್ನು ನಮೂದಿಸಬೇಕು. ಇದರಿಂದ ಪೊಲೀಸ್‌ ಬಂದೋಬಸ್ತ್, ಸಿಸಿಟಿವಿ ಅಳವಡಿಕೆ, ಬ್ಯಾರಿಕ್ಯಾಡಿಂಗ್, ಚೆಸ್ಕಾಂ ಹಾಗೂ ಅಗ್ನಿಶಾಮಕ ಇಲಾಖೆಯಿಂದ ಅಗತ್ಯ ಸಿದ್ಧತೆಯನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳಬಹುದು” ಎಂದ ಅವರು, “ಸ್ಥಳೀಯ ಮುಖಂಡರು ಒಂದೇ ಸ್ಥಳವನ್ನು ನಿಗದಿಪಡಿಸಿಕೊಂಡು ಗಣಪತಿ ವಿಸರ್ಜನೆ ಮಾಡಿದರೆ, ಜಿಲ್ಲಾಡಳಿತದಿಂದ ಬೇಕಿರುವ ಸಿದ್ಧತೆ ಹಾಗೂ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವುದು ಸುಲಭ” ಎಂದರು.

Advertisements

ಪಿ.ಒ.ಪಿ ಗಣಪತಿ ಖರೀದಿ ಮಾಡಬಾರದು: ಮಂಡ್ಯ ಜಿಲ್ಲೆಯಲ್ಲಿ ಪಿ.ಒ.ಪಿ ಗಣಪತಿ ತಯಾರಿಸುವುದಿಲ್ಲ ಆದರೆ ಹೊರಗಿನಿಂದ ತಂದು ಮಾರಾಟ ಮಾಡುತ್ತಾರೆ. ಸಾರ್ವಜನಿಕರು ಪಿ.ಒ.ಪಿ ಗಣಪತಿ ಖರೀದಿ ಮಾಡಬಾರದು. ಆಯೋಜಕರು ಸಹ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅನ್ನ ಸಂತರ್ಪಣೆ ಸಂದರ್ಭದಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಬೇಕು ಎಂದರು.

ಹಬ್ಬದ ದಿನದಂದೇ ಗಣಪತಿ ಪ್ರತಿಷ್ಠಾಪಿಸಿ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, “ಸೆಪ್ಟೆಂಬರ್ 5 ರಂದು ಈದ್ ಮಿಲಾದ್ ಹಬ್ಬ ಇರುವುದರಿಂದ ಸದರಿ ದಿನದಂದು ಗಣಪತಿ ವಿಸರ್ಜನೆ ಮಾಡುವುದು ಬೇಡ. 9 ಹಾಗೂ 11 ದಿನಕ್ಕೆ ವಿಸರ್ಜನೆ ಮಾಡುವುದು ಉತ್ತಮ. ಗಣಪತಿ ಹಬ್ಬದ ದಿನದಂದೇ ಗಣಪತಿಯನ್ನು ಪ್ರತಿಷ್ಠಾಪಿಸಿ ಅದರ ಬದಲಾಗಿ ಬೇರೆ ದಿನ ಪ್ರತಿಷ್ಠಾಪಿಸುವುದು” ಬೇಡ ಎಂದರು.

ಗಣಪತಿ ವಿಸರ್ಜನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಗೆ ನಿಗದಿಪಡಿಸುವ ರೂಟ್ ಮ್ಯಾಪ್ ಅನುಸಾರ ಮೆರವಣಿಗೆ ಚಲಿಸಬೇಕು. ತಾಲೂಕು ಮಟ್ಟದಲ್ಲಿ ಸಭೆಗಳನ್ನು ನಡೆಸಿ ಸೂಕ್ತ ನಿರ್ದೇಶನಗಳನ್ನು ನೀಡಲಾಗುವುದು.

ಕಿಡಿಗೇಡಿಗಳ ಬಗ್ಗೆ ನಿಗಾ: “ಕೋಮು ಗಲಭೆ ಉಂಟುಮಾಡುವ ಕಿಡಿಗೇಡಿಗಳ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಸ್ಥಳೀಯರಿಗೆ ಕಿಡಿಗೇಡಿಗಳು ಹಾಗೂ ಸಂದೇಹಾತ್ಮಕ ಘಟನೆ ಕಂಡುಬಂದಲ್ಲಿ ಸ್ಥಳೀಯ ಪೊಲೀಸ್‌ ಇಲಾಖೆ ಮಾಹಿತಿ ನೀಡಿ. ಕೋಮು ಗಲಭೆ ಉಂಟು ಮಾಡುವ ಹಾಗೂ ಶಾಂತಿ ಕದಡುವ ಸಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದು ಹಾಗೂ ಸುಳ್ಳು ಸುದ್ದಿ ಹರಡುವವರ ಮೇಲೂ ಸಹ ಪೊಲೀಸ್‌ ತಂಡ ನಡುವೆ ನಿಗಾ ವಹಿಸುತ್ತಿದೆ. ಪ್ರಕರಣಗಳು ಕಂಡು ಬಂದಲ್ಲಿ ನಿರ್ಧಾಕ್ಷಿಣ್ಯ ಕ್ರಮ ವಹಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್ ಮಾತನಾಡಿ, “ಪರಿಸರ ಮಾಲಿನ್ಯ ಉಂಟುಮಾಡದಂತೆ ಗಣಪತಿ ಹಬ್ಬ ಆಚರಿಸೋಣ, ಈ ಬಾರಿ ಪುಟ್ಟದಾದ ಜೇಡಿ ಮಣ್ಣು ಹಾಗೂ ನೈಸರ್ಗಿಕ ಬಣ್ಣ ಉಪಯೋಗಿಸಿ ತಯಾರಿಸಿದ ಗಣಪತಿಯನ್ನು ಪ್ರತಿಷ್ಠಾಪಿಸಿ. ಪಿ.ಒ.ಪಿ ಗಣಪತಿಯನ್ನು ಕೆರೆ ನೀರಿನಲ್ಲಿ ವಿಸರ್ಜನೆ ಮಾಡಿದರೆ ಕೆರೆ ನೀರು ಮಲಿನವಾಗಿ ಮುಂದಿನ ದುಷ್ಪರಿಣಾಮವನ್ನು ನಾವೇ ಎದುರಿಸಬೇಕಾಗುತ್ತದೆ” ಎಂದರು.

“ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ತಾಲೂಕು ಮಟ್ಟದಲ್ಲಿ ಜೇಡಿ ಮಣ್ಣಿನಿಂದ ಗಣಪತಿ ತಯಾರಿ ಮಾಡಲು ಮಕ್ಕಳಿಗೆ ತರಬೇತಿ ನೀಡಲು ಯೋಜಿಸಲಾಗಿದೆ. ಮಕ್ಕಳು ಪ್ರತಿ ಬೀದಿಯಲ್ಲಿ ಗಣಪತಿ ಪ್ರತಿಷ್ಠಾಪಿಸುವುದು ಸಾಮಾನ್ಯ. ಮಕ್ಕಳು ತರಬೇತಿಯಲ್ಲಿ ಹಾಜರಾಗಿ ಅವರೇ ತಯಾರಿಸಿದ ಗಣಪತಿ ಪ್ರತಿಷ್ಠಾಪಿಸಲಿ. ಇದರರಿಂದ ಪರಿಸರ ಮಾಲಿನ್ಯ ತಡೆಗಟ್ಟಬಹುದು. ಮಕ್ಕಳು ಮಣ್ಣಿನಲ್ಲಿ ಗಣಪತಿ ತಯಾರಿ ಮಾಡುವಾಗ ಕೆಲವು ಗಿಡಗಳ ಬೀಜವನ್ನು ಸೇರಿಸಿದರೆ. ಗಣಪತಿ ವಿಸರ್ಜನೆಯ ನಂತರ ಗಿಡಗಳು ಬೆಳೆದು ಹಸರೀಕರಣಕ್ಕೂ ಸಹ ಆದ್ಯತೆ ನೀಡಬಹುದು” ಎಂದರು.

ಇದನ್ನೂ ಓದಿ: ಮಂಡ್ಯ | ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದಿದೆ: ಸಚಿವ ಎನ್ ಚಲುವರಾಯಸ್ವಾಮಿ

ಸಭೆಯಲ್ಲಿ ಹಾಜರಿದ್ದ ಮುಖಂಡರು ಶಾಂತಿ ಸಭೆಯ ಬದಲಾಗಿ ಸಾಮರಸ್ಯ ಸಭೆ ಎಂದು ಕರೆಯೋಣ, ಈದೆ ಮಿಲಾದ್ ನಲ್ಲಿ ನಡೆಯುವ ಮೆರವಣಿಗೆಯಲ್ಲಿ ವಿಧಿಸಲಾಗುವ ಷರತ್ತುಗಳನ್ನು ಸರಳೀಕರಣ ಮಾಡಿಕೊಡಿ, ಗಣಪತಿ ಪ್ರತಿಷ್ಠಾಪಿಸುವ ಸ್ಥಳಗಳಲ್ಲಿ ಜಾನಪದ ಶೈಲಿಯ ಡೊಳ್ಳು ಕುಣಿತ, ತಮಟೆ, ವೀರಗಾಸೆ ಮುಂತಾದ ಪ್ರದರ್ಶನಗಳಿಗೆ ಅವಕಾಶ ನೀಡಬೇಕು. ಸಭೆಯಲ್ಲಿ ಹಾಜರಾಗಿರುವ ಮುಖಂಡರು ಯಾವುದೇ ಹಬ್ಬಗಳಲ್ಲಿ ಯಾವುದೇ ತೊಂದರೆ ಮಾಡುವುದಿಲ್ಲ ಕಿಡಿಗೇಡಿಗಳು ಗಲಭೆಗಳು ಸೃಷ್ಠಿಸುತ್ತಾರೆ ಅವರ ಮೇಲೆ ನಿಗಾವಿಡಿ. ಗಣಪತಿ ವಿಸರ್ಜನೆಗೆ ಪೊಲೀಸ್ ಇಲಾಖೆ ದಿನಾಂಕ ನಿಗದಿಪಡಿಸಬೇಕು. ಸಿ.ಸಿ ಕ್ಯಾಮರಾ ಹೆಚ್ಚು ಅಳವಡಿಸಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೆರೆಗಳ ಹತ್ತಿರ ಎಚ್ಚರಿಕೆ ವಹಿಸಿ.ಗಣಪತಿ ಹಬ್ಬದಲ್ಲಿ ಆಯೋಜಿಸುವ ಕಾರ್ಯಕ್ರಮಗಳು ಸಾಮರಸ್ಯದಿಂದ ಕೂಡಿರಲಿ, ಸ್ಪಧಾತ್ಮಕವಾಗಿ ಬೇಡ ಎಂದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಗಂಗಾಧರ ಸ್ವಾಮಿ, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X