ಕೋಲಾರ | ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಡಿಸಿ ರವಿ

Date:

Advertisements

ಕೋಲಾರ ಜಿಲ್ಲೆಯಲ್ಲಿ ಗೌರಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿ, ಸೌಹಾರ್ದಯುತವಾಗಿ ಆಚರಿಸಲು ಸಾರ್ವಜನಿಕರು ಸಹಕಾರ ನೀಡಬೇಕು. ಹಾಗೂ ಗಣೇಶ ಪ್ರತಿಷ್ಠಾಪನೆ ಮಾಡಲು ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಕೋಲಾರ ಜಿಲ್ಲಾಧಿಕಾರಿ ಎಂ ಆರ್ ರವಿ ತಿಳಿಸಿದರು.

ನಗರ ಹೊರವಲಯದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗಣೇಶ ಹಬ್ಬ ಹಾಗೂ ಈದ್‌ ಮಿಲಾದ್‌ ಪ್ರಯುಕ್ತ ಸೋಮವಾರ ನಡೆದ ಶಾಂತಿ ಪಾಲನಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ಎಲ್ಲಾ ಸಮಾಜದವರು ಭಾವೈಕ್ಯದಿಂದ ಹಬ್ಬ ಆಚರಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬಳಸಬೇಕು. ಹಿರಿಯ ನಾಗರಿಕರು, ಮಕ್ಕಳು, ಪ್ರಾಣಿಗಳಿಗೆ ತೊಂದರೆಯಾಗದಂತೆ ಸಾರ್ವಜನಿಕರು, ಗಣೇಶ ಮಂಡಳಿಗಳು ನಿಗಾವಹಿಸಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು” ಎಂದರು.

“ಗಣೇಶ ವಿಸರ್ಜನೆಯ ದಿನಗಳಂದು ವ್ಯತ್ಯಯವಾಗದಂತೆ ನಿರಂತರ ವಿದ್ಯುತ್ ಪೂರೈಸಲು ಬೆಸ್ಕಾಂ ಕ್ರಮ ವಹಿಸಬೇಕು. ಪೊಲೀಸರು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ಗಣೇಶ ವಿಸರ್ಜನೆಯ ದಿನ ಸಂಚಾರಕ್ಕೆ ಅಡೆತಡೆಯಾಗದಂತೆ ಮೊದಲೇ ಸಂಚಾರ ಮಾರ್ಗ ಬದಲಾವಣೆ ಮಾಡಿ ಸಾರ್ವಜನಿಕರಿಗೆ ಮುನ್ಸೂಚನೆ ನೀಡಬೇಕು. ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಆಯಕಟ್ಟಿನ ಪ್ರದೇಶಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಬೇಕು” ಎಂದು ಸೂಚನೆ ನೀಡಿದರು.

Advertisements

“ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಏಕ ಗವಾಕ್ಷಿಯಲ್ಲಿ ನಿಗದಿತ ನಮೂನೆಯಲ್ಲಿ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು. ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳು ಜಂಟಿ ತಪಾಸಣೆ ಮಾಡಿ ನಿಯಮಾನುಸಾರ ಪರವಾನಗಿ ನೀಡಲು ಕ್ರಮ ವಹಿಸಬೇಕು. ರಾತ್ರಿ 10.30ರೊಳಗಾಗಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಬೇಕು. ಪಿಒಪಿ ಹಾಗೂ ರಾಸಾಯನಿಕ ಮಿಶ್ರಿತ ಬಣ್ಣಗಳ ಮೂರ್ತಿಗಳನ್ನು ಪ್ರತಿಷ್ಠಾಪಿಸಬಾರದು. ಪರಿಸರ ಸ್ನೇಹಿ ವಿಗ್ರಹಗಳ ಪ್ರತಿಷ್ಠಾಪನೆ ಮಾಡಬೇಕು. ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳ ಸ್ಥಾಪನೆ ಮಾಡಬೇಕು. ಸರ್ಕಾರ ರೂಪಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದರು.

“ಎರಡೂ ಹಬ್ಬಗಳಿಗೆ ಬಿಗಿ ಬಂದೋಬಸ್ತ್‌ ಒದಗಿಸಲು ಕ್ರಮ ವಹಿಸಲಾಗುವುದು. ಸೆ.4ರಂದು ಒಂಬತ್ತನೇ ದಿನದ ಗಣೇಶ ಮೂರ್ತಿಗಳ ವಿಸರ್ಜನೆಯಾಗಲಿದೆ. ಮರುದಿನ 5ಕ್ಕೆ ಈದ್ ಮಿಲಾದ್ ಇರುವ ಕಾರಣ ಪೊಲೀಸ್ ಬಂದೋಬಸ್ತ್‌ಗೆ ಒತ್ತಡ ಬೀಳಲಿದೆ. ಒಂಬತ್ತನೇ ದಿನದ ಗಣೇಶ ಮೂರ್ತಿಗಳನ್ನು ಸಾಧ್ಯವಾದಷ್ಟೂ ಬೇಗ ವಿಸರ್ಜನೆ ಮಾಡಬೇಕು” ಎಂದು ನಿಖಿಲ್‌ ಬಿ. ಹೇಳಿದರು.

ಇದನ್ನೂ ಓದಿ: ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಮಾತನಾಡಿ, “ಗಣೇಶೋತ್ಸವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆ ಒದಗಿಸಲಾಗುವುದು. ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿ ರಾಜು ಮಾತನಾಡಿ, ‘ಪರಿಸರಕ್ಕೆ ಹಾನಿಯಾಗದಂತೆ ಗಣೇಶೋತ್ಸವ ಆಚರಣೆ ಮಾಡಬೇಕು. ಎಲ್ಲ ಜಿಲ್ಲೆಗಳಲ್ಲೂ ಪಿಒಪಿ ಗಣೇಶ ಮೂರ್ತಿ ಹಾಗೂ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಕೋಲಾರ ನಗರದ ಜನತೆ ಸಹಕಾರ ನೀಡಬೇಕು” ಎಂದು ಕೋರಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ, ಕೆಜಿಎಫ್ ಪೊಲೀಸ್‌ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಎಂ.ಮಂಗಳಾ, ಉಪವಿಭಾಗಾಧಿಕಾರಿ ಡಾ.ಮೈತ್ರಿ, ಡಿವೈಎಸ್ಪಿ ಎಂ.ಎಚ್.ನಾಗ್ತೆ, ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್‌ಗಳು, ಪೊಲೀಸ್ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಸಮಾಜದ ಮುಖಂಡರು, ಗಣೇಶ ಮಂಡಳಿಗಳ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X