ಶಿವಮೊಗ್ಗ, ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ವಾರ್ಡ್ ನಂ.31 ರಲ್ಲಿ ನಾರಾಯಣ ಹೃದಯಾಲಯದ ಪಕ್ಕದಲ್ಲಿರುವ ರಾಮೇನಕೊಪ್ಪ ಕ್ಕೆ ಹೋಗುವ ರಸ್ತೆಯಲ್ಲಿ ಸುಮಾರು 55 ಕ್ಕೂ ಹೆಚ್ಚು ವಿದ್ಯುತ್ ಕಂಬಗಳಿದ್ದು ಇದರಲ್ಲಿ ಕೇವಲ 5 ಕಂಬಗಳಲ್ಲಿ ಮಾತ್ರ ಬೀದಿ ದೀಪಗಳು ಬರುತ್ತಿವೆ.
ಈ ರಸ್ತೆಯಲ್ಲಿ ಮಹಿಳೆಯರು, ಮಕ್ಕಳು, ವಯಸ್ಕರು, ಸಾರ್ವಜನಿಕರು ದಿನನಿತ್ಯ ಸಂಚರಿಸುವ ರಸ್ತೆಯಾಗಿದ್ದು ಕತ್ತಲಾದರೆ ಈ ರಸ್ತೆಯಲ್ಲಿ ಓಡಾಡಲು ಬಹಳ ತೊಂದರೆಯಾಗುತ್ತಿದ್ದು, ಸಾರ್ವಜನಿಕರು ಸಂಚರಿಸುವಾಗ ರಸ್ತೆ ಮಧ್ಯದಲ್ಲಿ ಜಾನುವಾರುಗಳು ಓಡಾಡುವುದರಿಂದ, ರಸ್ತೆಯ ಅಕ್ಕಪಕ್ಕದಲ್ಲಿ ಗಿಡ ಮರಗಳು ಬೆಳೆದು ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದೆ, ಮತ್ತು ಈ ರಸ್ತೆಯ ಪ್ರಸ್ತುತ ಸ್ಥಿತಿ ಕಳ್ಳರಿಗೆ ಅನುಕೂಲವಾಗುವ ರೀತಿಯಲ್ಲಿದೆ ಎಂದಿದ್ದಾರೆ.
ಆದ್ದರಿಂದ ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಿಕೊಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಶಿವಮೊಗ್ಗ ಇವರ ವತಿಯಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಶಿವಮೊಗ್ಗ ಜಿಲ್ಲಾ ಪ್ರ.ಕಾರ್ಯದರ್ಶಿ ಇಮ್ರಾನ್ ಅಹ್ಮದ್, ಜಿಲ್ಲಾ ಕಾರ್ಯದರ್ಶಿ ಮನ್ಸೂರ್ ಅಲಿಖಾನ್, ರಾಮೇನಕೊಪ್ಪ ನಿವಾಸಿಗಳಾದ ಮುಜಾಹಿದ್, ಬರ್ಕತ್, ಅದ್ನಾನ್ ರವರು ಹಾಜರಿದ್ದರು*
https://shorturl.fm/Temie