ಚಿತ್ರದುರ್ಗ | ಕೃಷಿತ್ಯಾಜ್ಯ ಮೌಲ್ಯವರ್ಧನೆ, ರೈತರ ಆದಾಯ ವೃದ್ಧಿಗೆ ಉತ್ತಮ ಮಾರುಕಟ್ಟೆಯ ಸೌಲಭ್ಯ ಕುರಿತು ವಿಚಾರ ಸಂಕಿರಣ

Date:

Advertisements

ರೈತರ ಆದಾಯ ವೃದ್ಧಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಅವಶ್ಯವಾಗಿ ಬೇಕಾಗಿದೆ ಎಂದು ಬೆಂಗಳೂರು ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷರು ಹಾಗೂ ಕೃಷಿ ಸಚಿವರ ವಿಶೇಷ ಕರ್ತವ್ಯ ಅಧಿಕಾರಿಗಳಾದ ಡಾ.ಎ.ಬಿ.ಪಾಟೀಲ್ ಚಿತ್ರದುರ್ಗದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಕೃಷಿ ಇಲಾಖೆ, ಕೃಷಿ ತಂತ್ರಜ್ಞರ ಸಂಸ್ಥೆ ರಾಜ್ಯ ಮತ್ತು ಪ್ರಾದೇಶಿಕ ಘಟಕ ಹಾಗೂ ಸಮನ್ವಯ ಟ್ರಸ್ಟ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೃಷಿ ತ್ಯಾಜ್ಯದ ಮೌಲ್ಯವರ್ಧನೆ ಹಾಗೂ ರೈತ ಉತ್ಪಾದಕ ಕಂಪನಿಗಳಿಗೆ ಮಾರುಕಟ್ಟೆಯ ಸೌಲಭ್ಯ ಕಲ್ಪಿಸುವ ಕುರಿತು ಒಂದು ದಿನದ ವಿಚಾರ ಸಂಕಿರಣದಲ್ಲಿ ಅಭಿಪ್ರಾಯಪಟ್ಟರು.

1002529810

ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು “ರೈತರು ಪ್ರಾಥಮಿಕ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಆದಾಯ ಗಳಿಸುತ್ತಾರೆ. ಆದರೆ ಅಧಿಕ ಆದಾಯ ಗಳಿಸಬೇಕಾದರೆ ರೈತ-ರೈತೋದ್ಯಮಿ ಆಗಬೇಕಾದರೆ ರೈತರಿಗೆ, ರೈತ ಉತ್ಪಾದಕ ಸಂಸ್ಥೆಯು ಉತ್ತಮವಾಗಿ ಸೇವೆ ನೀಡಬೇಕು. ವಿಜ್ಞಾನ ಮತ್ತು ವಾಣಿಜ್ಯ ಸೇರಿದಾಗ ಮಾತ್ರ ಆದಾಯ ಹೆಚ್ಚಾಗಲಿದೆ. ಇದರ ಜೊತೆಗೆ ಮಾರುಕಟ್ಟೆ ಹಾಗೂ ಹೆಚ್ಚಿನ ಬೆಲೆ ಸಿಗುವುದು ಸಹ ಬಹಳ ಮುಖ್ಯವಾಗಿದ್ದು, ಮಾರುಕಟ್ಟೆ, ಮಾರಾಟಗಾರರು, ಖರೀದಿದಾರರನ್ನು, ಉತ್ಪಾದಕರನ್ನು ಹಾಗೂ ಉತ್ಪಾದಕ ಸಂಸ್ಥೆಗಳನ್ನು ಒಂದುಗೂಡಿಸಿ, ಸಮನ್ವಯತೆ ತಂದಿರುವ ಸಮನ್ವಯ ಟ್ರಸ್ಟ್ ನ ಕಾರ್ಯ ಎಂದು ಶ್ಘಾಘನೀಯ” ಎಂದರು.

“ಕೃಷಿ, ತೋಟಗಾರಿಕೆ, ಹೈನುಗಾರಿಕೆ ಹಾಗೂ ಇತರೆ ಉಪ ಕಸುಬುಗಳನ್ನು ಅಳವಡಿಸಿಕೊಂಡರೆ ಆದಾಯ ವೃದ್ಧಿಯಾಗಲಿದ್ದು, ಕೃಷಿಯಿಂದ ಸಂಸ್ಕೃತಿ, ತೋಟಗಾರಿಕೆಯಿಂದ ಸಂಸ್ಕಾರ ಹಾಗೂ ಪಶುಸಂಗೋಪನೆಯಿಂದ ರೈತರಿಗೆ ಸಮ್ಮೋಹನ ಶಕ್ತಿ ಬರಲಿದೆ” ಎಂದು ತಿಳಿಸಿದ ಅವರು, “ಕೃಷಿ ಹಾಗೂ ಇತರೆ ಉಪಕಸುಬುಗಳಿಂದ 350 ದಶಲಕ್ಷ ಟನ್ ಕೃಷಿ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ಕಸದಿಂದ ರಸ ಮಾಡುವ ಸಾಕಷ್ಟು ವಿಧಾನ, ತಂತ್ರಜ್ಞಾನಗಳಿದ್ದು, ಕೃಷಿ ತ್ಯಾಜ್ಯದಿಂದ ಮೌಲ್ಯವರ್ಧಿತ ಪದಾರ್ಥ ಪಡೆಯುವುದು. ಕೇವಲ ಪ್ರಾಥಮಿಕ ಆಹಾರ ಪದಾರ್ಥಗಳನ್ನು ಸಂಸ್ಕರಣೆ ಮಾಡುವುದು ಮಾತ್ರವಲ್ಲದೇ ಕೃಷಿ ತ್ಯಾಜ್ಯ ವಸ್ತುಗಳನ್ನು ಸಹ ವಿಘಟನೆ, ಮೌಲ್ಯವರ್ಧನೆ, ಪ್ಯಾಕಿಂಗ್ ಹಾಗೂ ಮಾರಾಟ ಮಾಡಿ ಆದಾಯ ಪಡೆಯಲು ಸಾಧ್ಯವಿದೆ” ಎಂದು ಹೇಳಿದರು.

Advertisements

ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ಮಾತನಾಡಿ, “ಜಾಗತಿಕ ಮಟ್ಟದಲ್ಲಿ ಹಾಗೂ ನಮ್ಮ ದೇಶದಲ್ಲಿ ಕೃಷಿಯ ಬೆಳವಣಿಗೆ ಹೇಗಿದೆ? ನಮ್ಮ ದೇಶಿಯ ಮಾರುಕಟ್ಟೆಗಳಲ್ಲಿರುವ ಸಾಧ್ಯತೆ, ಅವಕಾಶಗಳು, ವಿದೇಶಗಳಲ್ಲಿರುವ ಸಾಧ್ಯತೆ, ಅವಕಾಶಗಳನ್ನು ಅರ್ಥೈಸಿಕೊಂಡು ನಾವು ನಮ್ಮ ಕೃಷಿಯಲ್ಲಿ ತೆಗೆದುಕೊಳ್ಳಬೇಕಾದ ಬದಲಾವಣೆಗಳನ್ನು ಬಹಳಷ್ಟು ತ್ವರಿತಗತಿಯಲ್ಲಿ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರೈತ ಉತ್ಪಾದಕ ಸಂಸ್ಥೆಗಳನ್ನು ಹುಟ್ಟು ಹಾಕಿದೆ. ರೈತರ ಉತ್ಪಾದಕ ಸಂಸ್ಥೆಗಳು ಕೇವಲ ಕೃಷಿ ಪರಿಕರಗಳ ವಿತರಣೆ ಮಾಡುವುದಷ್ಟೇ ಅಲ್ಲದೇ, ಕೃಷಿಯಲ್ಲಿ ಆಗಬೇಕಾದ ಬದಲಾವಣೆಗಳನ್ನು ಸಹ ತರುವ ದಿಕ್ಕಿನಲ್ಲಿ ಸಕ್ರಿಯವಾಗಿ ಭಾಗವಹಿಸಿ, ಬೇಸಾಯ ಪದ್ದತಿ, ನವೀನ ಬೆಳೆ ಪದ್ಧತಿ, ತಳಿಗಳ ಬದಲಾವಣೆ, ಉತ್ಪಾದಕತೆ ಹೆಚ್ಚಳ ಮಾಡುವುದು, ಸಮಗ್ರ ಕೃಷಿ ಪದ್ಧತಿಗಳ ಅಳವಡಿಕೆ, ಕೃಷಿ ಸಂಸ್ಕರಣೆ, ಮೌಲ್ಯವರ್ಧನೆ, ಬ್ರಾಂಡಿಂಗ್, ಪ್ಯಾಕಿಂಗ್ ಸೇರಿದಂತೆ ಅಗತ್ಯ ಬದಲಾವಣೆ ತರುವ ಕೆಲಸಗಳನ್ನು ಮಾಡಬೇಕಿದೆ” ಎಂದು ಹೇಳಿದರು.

“ಜಿಲ್ಲೆಯಲ್ಲಿ ಹೆಚ್ಚು ಪುಷ್ಪ ಕೃಷಿಯನ್ನು ಮಾಡುತ್ತಿದ್ದು, ಹೂ ಬೆಳೆಗಾರರಿಗೆ ಮದ್ಯವರ್ತಿಗಳ ಶೋಷಣೆ ತಪ್ಪಿಸುವ ನಿಟ್ಟಿನಲ್ಲಿ ದೇವಸ್ಥಾನಗಳಿಗೆ ನೇರವಾಗಿ ಸಂಪರ್ಕ ಕಲ್ಪಿಸಲು ಸಾಧ್ಯವಾದರೆ ರೈತ ಉತ್ಪಾದಕ ಸಂಸ್ಥೆಗಳ ಮೂಲಕ ದೇವಸ್ಥಾನಗಳಿಗೆ ತಲುಪಿಸುವ ಕೆಲಸ ಮಾಡೋಣ. ಈ ನಿಟ್ಟಿನಲ್ಲಿ ಸಂಪರ್ಕ ಕಲ್ಪಿಸಲು ಸಮನ್ವಯ ಟ್ರಸ್ಟ್ ಸಹಕಾರ ಅಗತ್ಯವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗದಲ್ಲಿ ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆ: ಕುರಿಗಾಹಿಯಿಂದ ಧ್ವಜಾರೋಹಣ

ಕಾರ್ಯಕ್ರಮದಲ್ಲಿ ಸಮನ್ವಯ ಟ್ರಸ್ಟ್ ಸಂಸ್ಥಾಪಕರು ಹಾಗೂ ಮ್ಯಾನೇಜಿಂಗ್ ಟ್ರಸ್ಟಿ ಕೆ.ಹೆಚ್.ಸುಮಂಗಳ, ಚಿತ್ರದುರ್ಗ ಪ್ರಾದೇಶಿಕ ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷ ಕಟ್ಟಾ ಶ್ರೀನಿವಾಸ ರೆಡ್ಡಿ, ಕಾರ್ಯದರ್ಶಿ ಜಿ.ಟಿ.ವೀರಭದ್ರ ರೆಡ್ಡಿ, ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ.ತಿಪ್ಪೇಸ್ವಾಮಿ, ಕರ್ನಾಟಕ ಕೋಳಿ ಸಾಕಣೆದಾರರು ಮತ್ತು ತಳಿಗಾರರ ಸಂಘದ ನಿರ್ವಹಣಾ ಸಮಿತಿ ಸದಸ್ಯ ಎಸ್.ಜಿ.ವೀರಣ್ಣ, ರಾಜಸ್ಥಾನ್ ವಿಜ್ಞಾನಿ ಅನ್ಮೋಲ್ ಶರ್ಮಾ, ದೃಷ್ಠಿ ಇಂಟರ್ ನ್ಯಾಷನಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಸೆಹ್‍ವಾಲ್, ಸರ್ಕಲ್ ಇನ್ಸ್‍ಪೆಕ್ಟರ್ ಪ್ರಕಾಶ್ ಪಾಟೀಲ್ ಸೇರಿದಂತೆ ರೈತರು ಹಾಗೂ ರೈತ ಉತ್ಪಾದಕ ಕಂಪನಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು. .

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X