ಆಗಸ್ಟ್ 29 ರಿಂದ 31 ರವರೆಗೆ ಅಮೆರಿಕದ ಫ್ಲೋರಿಡಾ ರಾಜ್ಯದ ಲೇಕ್‌ಲ್ಯಾಂಡ್ ನಗರದಲ್ಲಿ ನಡೆಯಲಿರುವ 8ನೇ ನಾವಿಕ ವಿಶ್ವ ಕನ್ನಡ 2025ರ ಸಮ್ಮೇಳನದಲ್ಲಿ ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಅಂತಾರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಭಾಗವಹಿಸಲಿದ್ದಾರೆ.
ನಾವಿಕ ಕನ್ನಡ ಭಾಷೆ ಮತ್ತು ಅದರ ಸಂಸ್ಕೃತಿಯನ್ನು ಸಂರಕ್ಷಿಸಲು ಮತ್ತು ಪ್ರಚಾರ ಮಾಡಲು ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ಸ್ಥಾಪಿಸಲಾದ ರಾಷ್ಟ್ರೀಯ ಕನ್ನಡ ಸಂಘಟನೆಯಾಗಿದೆ. ಈ ಕಾರ್ಯಕ್ರಮದಲ್ಲಿ ನಾಟಕಗಳು, ಸಂಗೀತ ಕಚೇರಿಗಳು, ಸಾಹಿತ್ಯ ಚರ್ಚೆಗಳು, ಚಲನಚಿತ್ರೋತ್ಸವ, ವ್ಯಾಪಾರ ವೇದಿಕೆ, ಆಧ್ಯಾತ್ಮಿಕ ಚರ್ಚೆಗಳು, ಮಹಿಳಾ ವೇದಿಕೆ, ಯುವ ಕಾರ್ಯಕ್ರಮಗಳು ಮತ್ತು ಇನ್ನೂ ಅನೇಕ ಕಾರ್ಯಕ್ರಮಗಳು ನಡೆಯಲಿದ್ದು ಜಿಲ್ಲೆಯ ಜಾನಪದ ಕಲಾವಿದ ಗೋ ನಾ ಸ್ವಾಮಿ ಭಾಗವಹಿಸಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಇದನ್ನೂ ಓದಿ: ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ