ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ಡಿ.ದೇವರಾಜ ಅರಸು ಭವನದ ಕಟ್ಟಡ ಕಾಮಗಾರಿಗೆ 2 ಕೋಟಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗವು ಶಿಕ್ಷಣ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧುಬಂಗಾರಪ್ಪನವರಿಗೆ ಮನವಿ ಸಲ್ಲಿಸಿತು.
ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ಇವರ ನೇತೃತ್ವದಲ್ಲಿ ಇಂದು ಸಚಿವರನ್ನು ಭೇಟಿ ಮಾಡಿ ಕಾಮಗಾರಿ ಪ್ರಾರಂಭವಾಗಿ ಸುಮಾರು 3 ವರ್ಷಗಳು ಕಳೆದರೂ ಸಹ ಭವನದ ಕಟ್ಟಡ ಕಾಮಗಾರಿಯು ಶೇ. 70 ರಷ್ಟು ಪೂರ್ಣಗೊಂಡಿರುವುದಿಲ್ಲ.
ಕಟ್ಟಡ ಪೂರ್ಣಗೊಳಿಸಲು ಇನ್ನು ಸುಮಾರು ರೂ. 2 ಕೋಟಿಗಳ ಹೆಚ್ಚುವರಿ ಅನುದಾನ ಅವಶ್ಯಕತೆ ಇದ್ದು ತಕ್ಷಣ ರೂ. 2 ಕೋಟಿ ಬಿಡುಗಡೆ ಮಾಡಬೇಕೆಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಬಲ್ಕೀಶ್ ಬಾನು, ಶಿವಮೊಗ್ಗ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷರಾದ ವಿ.ರಾಜು, ರಾಜ್ಯ ಓಬಿಸಿ ಕೋಆರ್ಡಿನೇಟರ್ ಜಿ.ಡಿ.ಮಂಜುನಾಥ್, ಸೂಡಾ ಸದಸ್ಯ ಪ್ರವೀಣ್ ಕುಮಾರ್, ಕಾಂಗ್ರೆಸ್ ಮುಖಂಡರುಗಳಾದ ಶರತ್ ಮರಿಯಪ್ಪ, ಮುಹೀಬ್ ಮೊದಲಾದವರು ಇದ್ದರು.