ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಂಗಳೂರಿನ ಮೂಲದ ಡಾ. ಪ್ರಿಯಾ (27) ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ. ಅವರು ಹಾಸ್ಟೆಲ್ ಕೊಠಡಿಯಲ್ಲಿ ವಿವಿಧ ಬಗೆಯ ಔಷಧಗಳನ್ನು ಸೇವಿಸಿರುವುದು ಸಾವಿಗೆ ಕಾರಣ ಎಂಬ ಸಂದೇಹವಿದೆ.
ಘಟನೆಯ ನಂತರ ತಕ್ಷಣವೇ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ನಿಖರ ಸಾವಿನ ಕಾರಣ ವರದಿ ನಂತರವೇ ತಿಳಿಯಲಿದೆ ಎಂದು ಬಿಮ್ಸ್ ನಿರ್ದೇಶಕ ಡಾ. ಅಶೋಕ ಶೆಟ್ಟಿ ತಿಳಿಸಿದ್ದಾರೆ.
ಆಸ್ಪತ್ರೆ ಮೂಲಗಳ ಪ್ರಕಾರ, ಡಾ. ಪ್ರಿಯಾ ಕೆಲವು ದಿನಗಳ ಹಿಂದೆ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು ಆದರೆ ಅಂದು ಪ್ರಾಣಾಪಾಯದಿಂದ ಪಾರಾಗಿದ್ದರು. ದೀರ್ಘಕಾಲದಿಂದ ಖಿನ್ನತೆಗೆ ಒಳಗಾಗಿದ್ದ ಅವರು ಈ ರೀತಿಯ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.