ವಿಜಯಪುರ | ಹಾಸ್ಟೆಲ್‌ ನಿರ್ವಹಣೆಗಾಗಿ ವಿನೂತನ ʼಮೆಂಟರ್‌ಶಿಪ್ʼ ಕಾರ್ಯಕ್ರಮ; ಅಧಿಕಾರಿಗಳ ನೇಮಕ

Date:

Advertisements

ವಿಜಯಪುರ ಜಿಲ್ಲೆಯಲ್ಲಿರುವ ಎಲ್ಲಾ ಸರ್ಕಾರಿ ವಸತಿ ನಿಲಯಗಳ ನಿರ್ವಹಣೆ, ವಿದ್ಯಾರ್ಥಿಗಳ ಕಲ್ಯಾಣ, ಮೂಲಸೌಕರ್ಯಗಳ ಸುಧಾರಣೆ ಹಾಗೂ ಇತರೆ ಚಟುವಟಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ʼಹಾಸ್ಟೆಲ್ ಮೆಂಟರ್‌ಶಿಪ್‌ʼ ಎಂಬ ವಿನೂತನ ಕಾರ್ಯಕ್ರಮ ಆರಂಭಿಸಿದ್ದು, ಇದಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ಡಾ. ಆನಂದ ಕೆ ನೇಮಕ ಮಾಡಿದ್ದಾರೆ.

ಹಾಸ್ಟೆಲ್ ಮೆಂಟರ್ಶಿಪ್ ಎಂಬ ವಿನೂತನ ಕಾರ್ಯಕ್ರಮಕ್ಕೆ ನೇಮಕವಾದ ಹಾಸ್ಟೆಲ್ ಮೆಂಟರ್‌ಗಳು ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ, ವೈಯಕ್ತಿಕ ಹಾಗೂ ವೃತ್ತಿ ಜೀವನದ ಬೆಳವಣಿಗೆಗೆ ಮಾರ್ಗದರ್ಶನ ನೀಡಲು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುವುದು, ಪ್ರತಿ ವಾರ ಕನಿಷ್ಠ ಒಂದು ಬಾರಿ ವಸತಿ ನಿಲಯಗಳಿಗೆ ಭೇಟಿ ನೀಡುವುದು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಮೂಲಕ ಪರೀಕ್ಷಾ ಸಿದ್ಧತೆಗೆ ಮನೋಸ್ಥೈರ್ಯ ತುಂಬುವುದು ಮಾಡುತ್ತಾರೆ.

ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ವಸತಿ ನೆಲೆಯದಲ್ಲಿ ಪ್ರತಿ ತಿಂಗಳಿಗೊಮ್ಮೆ ಆರೋಗ್ಯ ಶಿಬಿರ ಏರ್ಪಡಿಸುವುದು, ಗುಣಮಟ್ಟದ ಆಹಾರ ಪೂರೈಕೆ, ಶುದ್ಧ ಕುಡಿಯುವ ನೀರು ಪೂರೈಸುವುದು, ನೀರು ಸುದ್ದಿಕರಣ ವ್ಯವಸ್ಥೆ, ಪಠ್ಯ ಸಾಮಗ್ರಿಗಳ ವ್ಯವಸ್ಥೆಗೆ ಬಗ್ಗೆ ಕ್ರಮವಹಿಸುವುದು, ಒಟ್ಟಾರೆ ವಿದ್ಯಾರ್ಥಿಗಳ ನಿಲಯಗಳ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ವೃದ್ಧಿಗೆ ಸೂಕ್ತ ಮಾರ್ಗದರ್ಶನ ಪ್ರೋತ್ಸಾಹ ದೊಂದಿಗೆ ವಿನೂತನ ಕಾರ್ಯಕ್ರಮಗಳು – ಸೌಲಭ್ಯಗಳ ಮೇಲ್ವಿಚಾರಣೆ ವಹಿಸಲು ಸೂಚಿಸಲಾಗಿದೆ.

Advertisements

ಇದನ್ನೂ ಓದಿ: ವಿಜಯಪುರ | ವಿವಿಧ ಬೇಡಿಕೆ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ವಿನೂತನ ಕಾರ್ಯಕ್ರಮಕ್ಕೆ ನೇಮಕವಾದ ಹಾಸ್ಟೆಲ್ ಮೆಂಟರ್‌ ಗಳು ಪ್ರತಿವಾರ ತಪ್ಪದೇ ವಹಿಸಿಕೊಟ್ಟ ವಸತಿ ನಿಲಯಕ್ಕೆ ಭೇಟಿ ನೀಡಿ ಎಲ್ಲಾ ಅಗತ್ಯ ಸೌಲಭ್ಯ ಕಲ್ಪಿಸಿರುವ ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ವೈಯಕ್ತಿಕವಾಗಿ ಗಮನಹರಿಸಿ, ಆ ಕುರಿತು ವಿಡಿಯೋ ಚಿತ್ರೀಕರಣ ಮತ್ತು ಛಾಯಾಚಿತ್ರದೊಂದಿಗೆ ವರದಿಯನ್ನು ಕಡ್ಡಾಯವಾಗಿ ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X