ಯಾದಗಿರಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆ ಜಿಲ್ಲೆಯ ಅಂಗನವಾಡಿ ಕೇಂದ್ರ ಸೇರಿದಂತೆ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ಆ.19 ಹಾಗೂ ಆ.20ರಂದು ಎರಡು ರಜೆ ಘೋಷಿಸಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಆದೇಶ ಹೊರಡಿಸಿದ್ದಾರೆ.
‘ರಾಜ್ಯ ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಈ ಕುರಿತು ಶಾಲಾ ವಿದ್ಯಾರ್ಥಿಗಳು ಮತ್ತು ಅಂಗನವಾಡಿ ಕೇಂದ್ರದ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34(ಎಮ್) ರಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರ ಪ್ರದತ್ತವಾದ ಅಧಿಕಾರದ ಮೇರೆಗೆ ಯಾದಗಿರಿ ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಈ ರಜೆ ದಿನವನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸುವ ಮೂಲಕ ಹೊಂದಾಣಿಕೆ ಮಾಡಿಕೊಳ್ಳಲುವಂತೆ ಉಪನಿರ್ದೇಶಕರು, ಪದವಿಪೂರ್ವ ಶಿಕ್ಷಣ ಇಲಾಖೆ, ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಯಾದಗಿರಿ ಮತ್ತು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಯಾದಗಿರಿ ರವರಿಗೆ’ ಆದೇಶದಲ್ಲಿ ಸೂಚಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಮಳೆಯಿಂದ ಶಾಲೆ ಗೋಡೆ ಬಿದ್ದು ವಿದ್ಯಾರ್ಥಿಗೆ ಗಾಯ : ಬಗದಲ್ ಶಾಲೆ ಮುಖ್ಯಶಿಕ್ಷಕ ಅಮಾನತು