ಮಹಿಳಾ ವಿಶ್ವಕಪ್‌, ಆಸೀಸ್‌ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ ಪ್ರಕಟ

Date:

Advertisements

ಮುಂದಿನ ತಿಂಗಳು ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಮಹಿಳೆಯರ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದೆ.

ನೀತು ಡೇವಿಡ್‌ ಸಾರಥ್ಯದ ಆಯ್ಕೆ ಸಮಿತಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ 15 ಮಂದಿ ಆಟಗಾರ್ತಿಯರ ತಂಡವನ್ನು ಪ್ರಕಟಿಸಿದೆ. ಸ್ಮೃತಿ ಮಂಧಾನ ಅವರು ಉಪ ನಾಯಕಿಯಾಗಿ ಮುಂದುವರಿದಿದ್ದಾರೆ. ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ. ಸ್ಮೃತಿ ಮಂಧಾನ ಅವರೊಂದಿಗೆ ಪ್ರತಿಕಾ ರಾವಲ್‌ ಕಣಕ್ಕಿಳಿಯಲಿದ್ದಾರೆ. ಕನ್ನಡತಿ ಶ್ರೇಯಾಂಕಾ ಪಟೇಲ್‌ ಆಯ್ಕೆಯಾಗಿಲ್ಲ.

ಇನ್ನುಳಿದಂತೆ ಹರ್ಲೀನ್‌ ಡಿಯೋಲ್‌, ದೀಪ್ತಿ ಶರ್ಮಾ, ವಿಕೆಟ್‌ ಕೀಪರ್‌ಗಳಾದ ರೀಚಾ ಘೋಷ್, ಯಸ್ತಿಕಾ ಭಾಟೀಯಾ, ರೇಣುಕಾ ಠಾಕೂರ್, ಅರುಂಧತಿ ರೆಡ್ಡಿ, ಕ್ರಾಂತಿ ಗೌಡ್, ರಾಧಾ ಯಾದವ್ ಅವರುಗಳನ್ನು ಆಯ್ಕೆ ಮಾಡಲಾಗಿದೆ.

Advertisements

ಇದೇ ಸಂದರ್ಭದಲ್ಲಿ ಸೆ.14 ರಂದು ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಪ್ರವಾಸಕ್ಕೂ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ.

ಇದನ್ನು ಓದಿದ್ದೀರಾ? ಮಹಿಳಾ ಕ್ರಿಕೆಟ್‌ನ ದಂತಕತೆ ಸ್ಮೃತಿ ಮಂಧಾನಗೆ ಐಸಿಸಿಯಿಂದ ಮತ್ತೊಂದು ಗರಿ

ಪಾಕಿಸ್ತಾನದ ಪಂದ್ಯಗಳನ್ನು ಹೊರತುಪಡಿಸಿ ಉಳಿದ ಎಲ್ಲ ಪಂದ್ಯಗಳು ಕೊಲೊಂಬೊದಲ್ಲಿ ನಡೆಯಲಿದೆ. ಸೆ.30 ರಿಂದ ವಿಶ್ವಕಪ್‌ ಆರಂಭವಾಗಲಿದ್ದು, ಟ್ರೋಫಿಗಾಗಿ 8 ತಂಡಗಳು ಸೆಣಸಲಿವೆ. ಭಾರತವು ತನ್ನ ಮೊದಲ ಪಂದ್ಯವನ್ನು ಶ್ರೀಲಂಕಾ ವಿರುದ್ಧ ಆಡಲಿದೆ.

ಅಕ್ಟೋಬರ್ 5ರ ಭಾನುವಾರ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯ ನಡೆಯಲಿದೆ.

ವಿಶ್ವಕಪ್‌ಗೆ ಭಾರತ ತಂಡ:
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್‌ ಕೀಪರ್), ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ಕ್ರಾಂತಿ ಗೌಡ್, ಅಮಾನ್‌ಜೋತ್ ಕೌರ್, ರಾಧಾ ಯಾದವ್, ಯಾಸ್ತಿಕಾ ಭಾಟಿಯಾ (ವಿಕೆಟ್‌ ಕೀಪರ್), ಶ್ರೀ ಚರಣಿ, ಸ್ನೇಹ ರಾಣಾ

ಹೆಚ್ಚುವರಿ ಆಟಗಾರರು: ತೇಜಲ್ ಹಸಾಬ್ನಿಸ್, ಪ್ರೇಮಾ ರಾವತ್, ಪ್ರಿಯಾ ಮಿಶ್ರಾ, ಉಮಾ ಚೆಟ್ರಿ, ಮಿನ್ನು ಮಣಿ, ಸಯಾಲಿ ಸತ್ಘರೆ.

ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ರಿಚಾ ಘೋಷ್ (ವಿಕೆಟ್‌ ಕೀಪರ್), ಕ್ರಾಂತಿ ಗೌಡ್, ಸಯಾಲಿ ಸತ್ಘರೆ, ರಾಧಾ ಯಾದವ್, ಶ್ರೀ ಚರಣಿ, ಯಾಸ್ತಿಕಾ ಭಾಟಿಯಾ(ವಿಕೆಟ್‌ ಕೀಪರ್), ಸ್ನೇಹ ರಾಣಾ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

ಬಾಗಲಕೋಟೆಯ ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ನೆರವಾದ ಸ್ಟಾರ್ ಕ್ರಿಕೆಟರ್‌ ರಿಷಬ್‌ ಪಂತ್;‌ ಎಲ್ಲೆಡೆ ಮೆಚ್ಚುಗೆ

ಬಡತನದಲ್ಲಿ ಬೆಳೆದರೂ ಉನ್ನತ ಶಿಕ್ಷಣ ಪಡೆಯುವ ಕನಸು ಕಂಡಿದ್ದ ಪ್ರತಿಭಾವಂತ ವಿದ್ಯಾರ್ಥಿನಿಗೆ...

Download Eedina App Android / iOS

X