ಶತಮಾನದ ದಾಖಲೆ ಮಳೆಗೆ ತತ್ತರಿಸಿದ ಮುಂಬೈ; ವಿಮಾನ, ರೈಲು, ಜನಜೀವನ ಅಸ್ತವ್ಯಸ್ತ

Date:

Advertisements

ದೇಶದ ಆರ್ಥಿಕ ರಾಜಧಾನಿಯಾದ ಮುಂಬೈ ಶತಮಾನದ ದಾಖಲೆಯ ಮಳೆಗೆ ತತ್ತರಿಸಿದೆ. ಕೇವಲ ಒಂದೇ ದಿನದಲ್ಲಿ ಒಂದು ತಿಂಗಳ ಮಳೆ ಸುರಿದಿದ್ದು, ನಗರದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

ಭಾರತೀಯ ಹವಾಮಾನ ಇಲಾಖೆ ಮಂಗಳವಾರದಂದು ಮುಂಬೈ, ಥಾಣೆ, ಪಾಲ್ಘರ್, ರಾಯಗಡ ಮತ್ತು ರತ್ನಗಿರಿಗಳಿಗೆ ಒಟ್ಟು ಮೂರು ಬಾರಿ ರೆಡ್ ಅಲರ್ಟ್ ಎಚ್ಚರಿಕೆಯನ್ನು ಜಾರಿಗೊಳಿಸಿದೆ. ಒಂದೇ ದಿನದಲ್ಲಿ 300 ಮಿಲಿ ಮೀಟರ್‌ ದಾಖಲೆ ಮಳೆಯಾಗಿದೆ.

ಮುಂಬೈ, ಥಾಣೆ, ಪಲ್ಘರ್, ರಾಯಗಡ, ರತ್ನಗಿರಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮೂರನೇ ಬಾರಿ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ ಗಂಟೆಗಳಲ್ಲಿ ತೀವ್ರ ಮಳೆ ಜೊತೆಗೆ 40–60 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ನಗರದಲ್ಲಿ ಎಲ್ಲಾ ಏಜೆನ್ಸಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

Advertisements

ಭಾರೀ ಮಳೆಯಿಂದಾಗಿ ನಗರದ ಹಲವು ರಸ್ತೆಗಳು, ಅಂಡರ್‌ಪಾಸ್‌ಗಳು ಮತ್ತು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ, ಇದರಿಂದ ಜನರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮುಂಬೈನ ಛತ್ರಪತಿ ಶಿವಾಜಿ ಅಂತಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಲಾವೃತದಿಂದಾಗಿ ಸುಮಾರು 400 ವಿಮಾನಗಳ ವೇಳಾಪಟ್ಟಿಯಲ್ಲಿ ವಿಳಂಬವಾಗಿದೆ. ಸ್ಥಳೀಯ ರೈಲು ಸೇವೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ಮತ್ತು ಥಾಣೆ ನಡುವಿನ ಮುಖ್ಯ ಮಾರ್ಗದ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಳೆ ಸಮಸ್ಯೆಯಾಗಿದ್ದು ಯಾಕೆ ಮತ್ತು ಯಾರಿಗೆಲ್ಲ ಅನುಕೂಲ?  

ಹಾರ್ಬರ್ ಲೈನ್‌ನಲ್ಲಿ ಕುರ್ಲಾ ಮತ್ತು CSMT ನಡುವಿನ ರೈಲು ಸೇವೆಯೂ ಸ್ಥಗಿತಗೊಂಡಿದೆ. ಚುನಾಭಟ್ಟಿ ನಿಲ್ದಾಣದಲ್ಲಿ ಜಲಾವೃತದಿಂದಾಗಿ ರೈಲು ಸಂಚಾರ ಸಂಪೂರ್ಣವಾಗಿ ನಿಂತಿದೆ. ಥಾಣೆ-ಕರ್ಜತ್, ಖೋಪೋಲಿ ಮತ್ತು ಕಸಾರಾ ನಡುವೆ ಕೇವಲ ಶಟಲ್ ಸೇವೆಗಳು ಕಾರ್ಯನಿರ್ವಹಿಸುತ್ತಿವೆ. ಸೆಂಟ್ರಲ್ ರೈಲ್ವೇಯು CSMT, ಥಾಣೆ, ಕಲ್ಯಾಣ, ಪನ್ವೆಲ್, ವಡಾಲಾ, ಕುರ್ಲಾ, ವಾಶಿ ಮತ್ತು ದಾದರ್‌ನಂತಹ ಪ್ರಮುಖ ನಿಲ್ದಾಣಗಳಲ್ಲಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಿದೆ.

8 ಸಾವು, ಮುಂಜಾಗ್ರತೆ ವಹಿಸಲು ರಾಜ್ಯದ ಜನತೆಗೆ ಸಿಎಂ ಸೂಚನೆ

ಮಹಾರಾಷ್ಟ್ರದಲ್ಲಿ ಸುಮಾರು 14 ಲಕ್ಷ ಹೆಕ್ಟೇರ್ ಕೃಷಿ ಭೂಮಿಯು ಜಲಾವೃತಗೊಂಡಿದ್ದು, ಖರೀಫ್ ಬೆಳೆಗಳಿಗೆ ಭಾರೀ ಹಾನಿಯಾಗಿದೆ. ನಾಂದೇಡ್‌ ಜಿಲ್ಲೆಯಲ್ಲಿ ಮಳೆಯಿಂದಾದ ಅನಾಹುತದಿಂದಾಗಿ 8 ಮಂದಿ ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮುಂಬೈ ಸೇರಿದಂತೆ ಥಾಣೆ, ರಾಯಗಡ, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳು ನಿರ್ಣಾಯಕವಾಗಿವೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (NDRF) ಮತ್ತು ಭಾರತೀಯ ಸೇನೆಯ ತಂಡಗಳು ನಂದೇಡ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ನಗರದಲ್ಲಿ ಶಾಲೆ-ಕಾಲೇಜುಗಳು, ಸರ್ಕಾರಿ ಮತ್ತು ಪೌರ ಕಚೇರಿಗಳು ಮುಚ್ಚಲ್ಪಟ್ಟಿವೆ. ಮಿಥಿ ನದಿಯ ನೀರಿನ ಮಟ್ಟವು ಗಂಭೀರ ಮಟ್ಟವನ್ನು ತಲುಪಿದ್ದು, ಅಪಾಯ ಸ್ಥಳದಲ್ಲಿರುವ ಜನರನ್ನು ಸ್ಥಳಾಂತರಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ದೆಹಲಿಯ 50ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

ದೆಹಲಿಯ 50ಕ್ಕೂ ಅಧಿಕ ಶಾಲೆಗಳಿಗೆ ಬುಧವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ...

Download Eedina App Android / iOS

X