ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಸೋಮವಾರ ಮತ್ತು ಮಂಗಳವಾರ ಕೆಲ ತಾಲ್ಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು. ಆದರೆ ಮಂಗಳವಾರವೂ ನಿರಂತರ ಮಳೆ ಮುಂದುವರಿದಿರುವುದರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ವಿಸ್ತರಿಸಲಾಗಿದೆ.
ಮೂರು ದಿನಗಳಿಂದ ನಿರಂತರ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದ್ದು, ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲಾಗುತ್ತಿದೆ. ಇದರಿಂದ ಕೃಷ್ಣಾ ತೀರದಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ.
ಪ್ರವಾಹದ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
Your blog is a breath of fresh air in the crowded online space. I appreciate the unique perspective you bring to every topic you cover. Keep up the fantastic work!