ಮಳೆ ಬರುವ ಸಂದರ್ಭದಲ್ಲಿ ಶಾಲೆಯಲ್ಲಿ ಅನುಸರಿಸಬೇಕಾದ ಮುಂಜಾಗೃತ ಕ್ರಮದ ಬಗ್ಗೆ ಇಲಾಖೆ ಹೊರಡಿಸಿದ ಮಾರ್ಗಸೂಚಿ ಮತ್ತು ಆದೇಶ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸದೆ ಕರ್ತವ್ಯದಲ್ಲಿ ಬೇಜವಾಬ್ದಾರಿ ಹಾಗೂ ಕರ್ತವ್ಯಲೋಪ ಎಸಗಿದಕ್ಕಾಗಿ ಬೀದರ್ ತಾಲ್ಲೂಕಿನ ಬಗದಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಮಡಯ್ಯಾ ಸ್ವಾಮಿ ಅವರನ್ನು ಅಮಾನತುಗೊಳಿಸಲಾಗಿದೆ.
2025ರ ಆಗಸ್ಟ್ 7ರಂದು ಸದರಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ರೋಹನ ರಾಬರ್ಟ್ ಮಧ್ಯಾಹ್ನದ ಬಿಸಿಯೂಟ ಸೇವಿಸುವಾಗ ಶಾಲೆಯ ಗೋಡೆ ಬಿದ್ದು ತಲೆಗೆ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ಕೂಡಲೇ ಗ್ರಾಮದ ಮುಖಂಡರು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದರು.
ಅಮಾನತಿನ ಅವಧಿಯಲ್ಲಿ ನಿಯಮಾನುಸಾರ ಕೆಸಿಎಸ್‌ಆರ್ ನಿಯಮ 98ರ ಅನ್ವಯ ಜೀವನಾಧರ ಭತ್ಯೆ ಪಡೆಯಲು ಅರ್ಹರಾಗಿರುತ್ತಾರೆ. ಕೇಂದ್ರ ಸ್ಥಾನ ಬಿಡುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯಬೇಕೆಂದು ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪನಿರ್ದೇಶಕರು ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ಅಧಿಕ ಮಳೆ : 4 ತಿಂಗಳಲ್ಲಿ 101 ಜನ, 843 ಜಾನುವಾರು ಸಾವು; 15 ಸಾವಿರ ಹೆಕ್ಟೇರ್ ಬೆಳೆ ಹಾನಿ