ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮದ ಕಲ್ಲೂರು ರಸ್ತೆಯ ಬಳಿಯಲ್ಲಿ ಇಂದು ಹೃದಯವಿದ್ರಾವಕ ಘಟನೆ ನಡೆದಿದೆ. ನವಜಾತ ಶಿಶುವನ್ನು ರಸ್ತೆ ಬದಿಗೆ ಬಿಟ್ಟು ಹೋಗಿದ್ದು, ದಾರಿಹೋಕರು ಶಿಶುವಿನ ಆಕ್ರಂದನ ಶಬ್ದವನ್ನು ಕೇಳಿ ಸ್ಥಳಕ್ಕೆ ಧಾವಿಸಿದರು.
ಸ್ಥಳೀಯರು ತಕ್ಷಣ ಶಿಶುವನ್ನು ಸಮೀಪದ ಕಲ್ಮಲಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ : ನಾಲ್ಕು ಗ್ರಾಮಕ್ಕೆ ಸಂಪರ್ಕ ಕಡಿತ
ರಾಯಚೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
