ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗರ್ಭಿಣಿ ಮಹಿಳೆ ದುರ್ಮರಣ ಹೊಂದಿದ ಹೃದಯವಿದ್ರಾವಕ ಘಟನೆ ಸೋಮವಾರ ನಡೆದಿದೆ.
ಗೀತಾ ಪಾಟೀಲ ಎಂಬ ಮಹಿಳೆ ಲೋನಾ ಬೈಕ್‌ನಲ್ಲಿ ಮುಖ್ಯರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಎದುರು ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ತೀವ್ರ ಗಾಯಗೊಂಡ ಗೀತಾ ಪಾಟೀಲ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ತೀವ್ರತೆಯಿಂದ ಕೆಲಕಾಲ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಸ್ಥಳಕ್ಕೆ ರಾಮದುರ್ಗ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.