ದ.ಕ. | ಲಾರ್ವಾ ತಾಣಗಳು ಕಂಡುಬಂದರೆ ದಂಡ: ಮನಪಾ ಆಯುಕ್ತರ ಸೂಚನೆ

Date:

Advertisements

ಡೆಂಗ್ಯು ಜ್ವರ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಅದರ ನಿಯಂತ್ರಣ ನಮ್ಮೆಲ್ಲರ ಹೊಣೆಯಾಗಿರುತ್ತದೆ. ಈಡೀಸ್ ಸೊಳ್ಳೆಗಳಿಂದ ಹರಡುವ ಕಾಯಿಲೆ ಮುಂಗಾರು/ ಮುಂಗಾರಿನ ನಂತರ ಕಾಣಸಿಗುತ್ತಿದೆ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಇಡೀ ವರ್ಷ ಪ್ರಕರಣಗಳು ಕಂಡು ಬರುತ್ತಿವೆ. ಬಿಟ್ಟು ಬಿಟ್ಟು ಸುರಿವ ಮಳೆಯಿಂದ ಈಡೀಸ್ ಸೊಳ್ಳೆಗಳ ಉತ್ಪತ್ತಿ ತಾಣಗಳ ಸಂಖ್ಯೆಯು ಹೆಚ್ಚಾಗಿದ್ದರಿಂದ, ಡೆಂಗ್ಯು ಜ್ವರ ಪ್ರಕರಣಗಳು ಹೆಚ್ಚಾಗುತ್ತಿದೆ. ಡೆಂಗ್ಯು ಜ್ವರವು ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿ ಕಾಡುತ್ತಿದ್ದು, ಸಾಂಕ್ರಾಮಿಕ ಸ್ಫೋಟದ ಸಾಧ್ಯತೆಯ ಅಧಿಕವಾಗಬಹುದು. ಆದ್ದರಿಂದ ಮಹಾನಗರ ಪಾಲಿಕೆಯಲ್ಲಿ ಸಕ್ರೀಯವಾಗಿ ತಂಡವಾರು ಲಾರ್ವ ಸಮೀಕ್ಷೆಯೊಂದಿಗೆ ಸಂಪೂರ್ಣ ಲಾರ್ವ ಉತ್ಪತ್ತಿ ತಾಣಗಳ ನಿಯಂತ್ರಣದೊಂದಿಗೆ ಆರೋಗ್ಯ ಜಾಗೃತಿ ಮನೆಮನೆಗೂ ಕ್ಷೇತ್ರ ಭೇಟಿಯೊಂದಿಗೆ ಮುಟ್ಟಿಸಬೇಕು. ಅದೇ ರೀತಿ ಲಾರ್ವ ಉತ್ಪತ್ತಿ ತಾಣಗಳು ಕಂಡುಬಂದ ಕಟ್ಟಡ, ಮನೆ ಹಾಗೂ ಅಪಾರ್ಟ್‍ಮೆಂಟ್‍ಗಳಿಗೆ ಸಂಬಂಧಿಸಿ ದಂಡವನ್ನು ವಿಧಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಸೂಚಿಸಿದ್ದಾರೆ.

ಮಂಗಳವಾರ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದ ಸಾರ್ವತ್ರಿಕ ಲಸಿಕಾ  ಕಾರ್ಯಕ್ರಮದ ನಗರ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದನ್ನೂ ಓದಿ: ಆಧಾರರಹಿತ ಮತ್ತು ಸುಳ್ಳು : ಧರ್ಮಸ್ಥಳ ಬೆಳವಣಿಗೆ ಬಗ್ಗೆ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

Advertisements

ಕಾಮಗಾರಿ ನಡೆಸುತ್ತಿರುವ ಕಟ್ಟಡಗಳು, ಕಾಮಗಾರಿ ನಿಲ್ಲಿಸಿರುವ ಕಟ್ಟಡಗಳ ಸುತ್ತಮುತ್ತಲು ಲಾರ್ವ ಉತ್ಪತ್ತಿಗಳು ಹೆಚ್ಚಾಗುತ್ತಿರುವ ಹಿನ್ನಲೆ ಸಂಬಂಧಿಸಿದ ಕ್ರೆಡಾಯಿ ಸಂಸ್ಥೆಯವರು ಹೆಚ್ಚಿನ ಗಮನ ಹರಿಸಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅದೇ ರೀತಿ ಕಸ, ತ್ಯಾಜ್ಯ ವಿಲೇವಾರಿ ಮಾಡುವ ವಾಹನದ ಮೂಲಕ ಜಾಗೃತಿ ಮೂಡಿಸಲು ಅವರು ಹೇಳಿದರು.

ಹೊರ ರಾಜ್ಯಗಳಿಂದ ಬರುವ ಕಾರ್ಮಿಕರಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬರುತ್ತಿರುವ ಹಿನ್ನಲೆ ಇದರ ಬಗ್ಗೆ ಹೆಚ್ಚಿನ ಗಮನಹರಿಸಲು ಸೂಚಿಸಿದರು. ಅಲ್ಲದೆ ಶಾಲಾ ಕಾಲೇಜು, ನರ್ಸಿಂಗ್ ಕಾಲೇಜು, ವೈದ್ಯಕೀಯ ಕಾಲೇಜು, ಪ್ರತಿಯೊಂದು ಸರ್ಕಾರಿ, ಖಾಸಗಿ ಸಂಸ್ಥೆ, ಕಚೇರಿಗಳಲ್ಲಿ ಅರಿವು ಮೂಡಿಸಬೇಕು. ಪ್ರತಿಯೊಬ್ಬ ನಾಗರೀಕರು ಪರಿಸರ ಸ್ವಚ್ಚತೆ ಸೊಳ್ಳೆಗಳ ನಿಯಂತ್ರಣದೊಂದಿಗೆ ಮನೆಯಲ್ಲಿ ಸೊಳ್ಳೆ ನಿರೋಧಕ ಜಾಲರಿಗಳನ್ನು ಅಳವಡಿಸುವ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಮನೆ, ಕಚೇರಿಯಲ್ಲಿನ ಏರ್‍ಕೂಲರ್, ರೆಫ್ರಿಜರೇಟರ್ ಹಾಗೂ ಅಲಂಕಾರಿಕ ಹೂಕುಂಡ, ಗಿಡಗಳ ತಟ್ಟೆಗಳಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ನಮ್ಮ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಿ ಹಾಗೂ ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು ಎಂದರು.

ರೇಬಿಸ್ ಬಗ್ಗೆ ಜಾಗೃತಿ – ಜೀವ ರಕ್ಷಣೆಯ ಅವಶ್ಯಕತೆ

ಕಳೆದ 3 ವರ್ಷಗಳ ಅಂಕಿ ಅಂಶಗಳನ್ನು ಗಮನಿಸಿದಾಗ ನಾಯಿ ಕಡಿತ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವ ಹಿನ್ನಲೆ ಸರಿಯಾದ ಸಮಯದಲ್ಲಿ ಲಸಿಕೆ ಪಡೆಯುವ ಬಗ್ಗೆ ಜಾಗೃತಿ ಮೂಡಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಸೂಚಿಸಿದರು. ಬೀದಿ ನಾಯಿಗಳ ಕಡಿತಕ್ಕಿಂತ ಸಾಕು ನಾಯಿಗಳ ಕಡಿತ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದೆ. ರೇಬಿಸ್ ಒಂದು ಗಂಭೀರವಾದ ವೈರಲ್ ರೋಗವಾಗಿದ್ದು, ಸೋಂಕಿತ ಪ್ರಾಣಿಗಳಾದ ನಾಯಿ, ಬೆಕ್ಕುಗಳಿಂದ ಈ ರೋಗ ಹರಡುವ ಸಾಧ್ಯತೆ ಹೆಚ್ಚು ಇದೆ. ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ಲಭ್ಯವಿದೆ. ಪಶುಪಾಲನಾ ಇಲಾಖೆಯ ಸಹಕಾರದಿಂದ ಗ್ರಾಮೀಣ ಪ್ರದೇಶಗಳಲ್ಲಿ ಲಸಿಕಾ ಶಿಬಿರಗಳು ನಡೆಯುತ್ತಿದ್ದು, ಅದರ ಸದುಪಯೋಗವನ್ನು ಸಾರ್ವಜನಿಕರು ಪಡೆಯುವಂತೆ ಅವರು ತಿಳಿಸಿದರು.

ಸಾರ್ವಜನಿಕರು ರೇಬಿಸ್ ಬಗ್ಗೆ ಜಾಗೃತರಾಗಿರಬೇಕು ಮತ್ತು ಸರಿಯಾದ ಸಮಯದಲ್ಲಿ ವೈದ್ಯಕೀಯ ಸಲಹೆ ಪಡೆಯಬೇಕು ಎಂದು ಅವರು ಸೂಚಿಸಿದ್ದಾರೆ.  ನಾಯಿಮರಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬಿಡುವುದರಿಂದ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಸಾಕು ನಾಯಿಗಳ ಪೋಷಕರು ಗಮನ ಹರಿಸುವಂತೆ ಅಧ್ಯಕ್ಷರು ಸೂಚಿಸಿದರು. ಈ ಸಂದರ್ಭದಲ್ಲಿ  ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್.ಆರ್ ತಿಮ್ಮಯ್ಯ,   ಆರ್.ಸಿ.ಹೆಚ್ ಅಧಿಕಾರಿ ಡಾ.ರಾಜೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ  ಡಾ.ನವೀನ್ ಚಂದ್ರ ಕುಲಾಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ  ಜ್ಯೋತಿ ಕೆ ಉಳೆಪಾಡಿ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X