ಒಳಮೀಸಲಾತಿ | ಕೊನೆಗೂ ಕೂಡಿಬಂತು ಭಾಗ್ಯ, ಅಲೆಮಾರಿಗಳಿಗೆ ಕಂಟಕ!

Date:

Advertisements

ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿ ವಿಚಾರವಾಗಿ ರಾಜ್ಯ ಸರ್ಕಾರ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡಿದೆ.

ನ್ಯಾ.ನಾಗಮೋಹನ್‌ದಾಸ್‌ ಆಯೋಗದ ವರದಿಯಲ್ಲಿನ ಮೀಸಲಾತಿ ವರ್ಗೀಕರಣದ ಕುರಿತು ಅಪಸ್ವರ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಬಗ್ಗೆ ಕುತೂಹಲ ಉಂಟಾಗಿತ್ತು. ಇದೀಗ ಸರ್ಕಾರ ಒಂದು ತೀರ್ಮಾನಕ್ಕೆ ಬಂದಿದೆ.

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ. ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ 6% ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ. ಪರಿಶಿಷ್ಟ ಜಾತಿ ಸಮುದಾಯವನ್ನು ಎಡಗೈ, ಬಲ ಮತ್ತು ಇತರೆ ಎಂಬ ಮೂರು ಗುಂಪುಗಳಾಗಿ ಮರುವರ್ಗೀಕರಣ ಮಾಡಲಾಗಿದ್ದು, ಕ್ರಮವಾಗಿ 6%, 6% ಮತ್ತು 5% ಒಳಮೀಸಲಾತಿ ನೀಡಲು ವಿಶೇಷ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Advertisements

ನಿವೃತ್ತ ನ್ಯಾ.ನಾಗಮೋಹನ್‌ದಾಸ್‌ ಅವರ ಆಯೋಗವು ತನ್ನ ವರದಿಯಲ್ಲಿ 101 ಪರಿಶಿಷ್ಟ ಜಾತಿಗಳನ್ನು ಐದು ಗುಂಪುಗಳಾಗಿ ವರ್ಗೀಕರಣ ಮಾಡಿ ಶೇ.17ರಷ್ಟು ಮೀಸಲಾತಿ ಹಂಚಿಕೆ ಮಾಡಿದೆ. ಆದರೆ ಸರ್ಕಾರ ಮೂರು ಗುಂಪುಗಳನ್ನಾಗಿ ಮಾಡಿದೆ. ಎಡಗೈ, ಬಲಗೈ ಹಾಗೂ ಸ್ಪೃಶ್ಯ ದಲಿತರೊಂದಿಗೆ ಅಲೆಮಾರಿಗಳ ಸೇರ್ಪಡೆಯಾಗಿದೆ ಎನ್ನಲಾಗುತ್ತಿದೆ.

ಗುಂಪುಗಳ ರಚನೆ ವೇಳೆ ಆದಿ ಕರ್ನಾಟಕ, ಆದಿ ಆಂಧ್ರ ಹಾಗೂ ಆದಿ ದ್ರಾವಿಡ ಜಾತಿಗಳನ್ನು ಪ್ರತ್ಯೇಕ ಗುಂಪಾಗಿ ಪರಿಗಣಿಸಿ ಶೇ.1ರಷ್ಟು ಮೀಸಲಾತಿ ನೀಡಿರುವುದಕ್ಕೆ ಬಲಗೈ ಸಮುದಾಯಗಳಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ನಿವಾಸದಲ್ಲಿ ಸಭೆ ನಡೆಸಿ ಮೀಸಲಾತಿ ವರ್ಗೀಕರಣ ಕುರಿತು ಪುನರ್‌ ಪರಿಶೀಲನೆ ಮಾಡಿ ವರದಿ ನೀಡುವಂತೆ ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಹಾಗೂ ಪರಿಷತ್‌ ಸದಸ್ಯ ಸುಧಾಮ್‌ದಾಸ್‌ ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ಅವರು ನೀಡಿದ ವರದಿ ಆಧಾರದ ಮೇಲೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಗಳು ಆಗಿವೆ ಎನ್ನುವ ಮಾಹಿತಿ ಇದೆ.

ಸೂಚಿಸಿರುವ ವರ್ಗೀಕರಣ

ಶೇ.17ರಷ್ಟು ಮೀಸಲಾತಿಯನ್ನು ಐದು ವರ್ಗಗಳಾಗಿ ವಿಂಗಡಿಸಿದ್ದು, ಮತ್ತು ಅತಿ ಸೂಕ್ಷ್ಮ ಜಾತಿಗಳನ್ನು ‘ಎ’ ವರ್ಗವಾಗಿ ವಿಂಗಡಿಸಿ ಶೇ.1, ಮಾದಿಗ ಮತ್ತು ಅದೇ ರೀತಿಯ ಅಸ್ಪೃಷ್ಯತೆ ಅನುಭವಿಸುತ್ತಿರುವ ಅತ್ಯಂತ ಹಿಂದುಳಿರುವ ಜಾತಿಗಳನ್ನು ‘ಬಿ’ ಎಂದು ವರ್ಗೀಕರಣ ಮಾಡಿ ಶೇ.6, ಹೊಲೆಯ ಮತ್ತು ಅದೇ ರೀತಿ ಅಸ್ಪೃಶ್ಯತೆ ಜೊತೆಗೆ ಹಿಂದುಳಿರುವ ಜಾತಿಗಳನ್ನು ‘ಸಿ’ ಎಂದು ಪರಿಗಣಿಸಿ ಶೇ.5, ಅಸ್ಪೃಶ್ಯರಲ್ಲದ ಭೋವಿ, ಲಂಬಾಣಿ, ಕೊರಚ, ಕೊರಮ ಈ ನಾಲ್ಕು ಜಾತಿಗಳನ್ನು ‘ಡಿ’ ಎಂದು ಪರಿಗಣಿಸಿ ಶೇ.4, ಮಾದಿಗ, ಛಲವಾದಿ ಎಂದು ಗುರುತಿಸಿಕೊಳ್ಳದ ಆದಿಕರ್ನಾಟಕ, ಆದಿ ಆಂಧ್ರ, ಆದಿದ್ರಾವಿಡ ಎಂದೇ ಗುರುತಿಸಿಕೊಂಡಿರುವ ಗುಂಪನ್ನು ‘ಇ’ ಎಂದು ಶೇ.1ರಷ್ಟು ಮೀಸಲಾತಿ ನೀಡಿ ವರ್ಗೀಕರಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಡ, ಬಲ ಹಾಗೂ ಇತರೆ ಎಂದು ಮೂರು ವಿಂಗಡನೆ ಮಾಡಿ ಮರುವರ್ಗೀಕರಿಸಿ ಒಳಮೀಸಲಾತಿ ಮರುಹಂಚಿಕೆಗೆ ತೀರ್ಮಾನಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ...

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

Download Eedina App Android / iOS

X