ಕೋಲಾರ | ದ್ವಿಚಕ್ರ ವಾಹನ ಕಳ್ಳನ ಬಂಧನ: 22.20ಲಕ್ಷ ಬೆಲೆಯ 11 ವಾಹನಗಳು ಪೊಲೀಸರ ವಶ

Date:

Advertisements

ಬೈಕ್‌ಗಳನ್ನು ಕಳ್ಳತನ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆಸಾಮಿ ಸುಭಾನ್ ಎಂಬಾತನನ್ನು ಕೋಲಾರ ನಗರದ ಗಲ್‌ಪೇಟೆ ಪೊಲೀಸರು ಬಂಧಿಸಿದ್ದು, ₹22.20 ಲಕ್ಷದ 11 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಹಲವು ದಿನಗಳಿಂದ ಕೋಲಾರ ನಗರ ಮತ್ತು ಜಿಲ್ಲೆಯ ಇತರೆಡೆ ಅಗುತ್ತಿದ್ದ ದ್ವಿಚಕ್ರ ವಾಹನಗಳ ಕಳವು ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಲು ಕೋಲಾರ ಜಿಲ್ಲಾ ಪೊಲೀಸ್‌ ಅಧೀಕ್ಷಕ ಬಿ ನಿಖಿಲ್, ಐಪಿಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರವಿಶಂಕರ್ ಮತ್ತು ಜಗದೀಶ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪಾಧೀಕ್ಷಕರು ಕೋಲಾರ ಉಪ-ವಿಭಾಗದ ಎಂ ಹೆಚ್ ನಾಗ್ತೆ ಅವರ ನೇತೃತ್ವದಲ್ಲಿ ಗಲ್‌ಪೇಟೆ ವೃತ್ತ ಸಿಪಿಐ ಲೋಕೇಶ್ ಎಂ ಜೆ ಮತ್ತು ಗಲ್‌ಪೇಟೆ ಪೊಲೀಸ್ ಠಾಣೆ ಪಿಎಸ್‌ಐ ವಿಠಲ್ ವೈ ತಳವಾರ್ ಹಾಗೂ ಅವರ ಸಿಬ್ಬಂದಿಗಳಾದ ಎಎಸ್‌ಐ ಮುನಿವೆಂಕಟಸ್ವಾಮಿ, ಶಪೀಉಲ್ಲಾ, ರಮೇಶ್, ರಾಜೇಶ್, ಸದಾಶಿವ ಮಂಜುನಾಥ ಅವರ ವಿಶೇಷ ತಂಡವನ್ನು ರಚಿಸಿದ್ದು, ಆರೋಪಿಯಾದ ಎಸ್ ಸುಭಾನ್(30) ಎಂಬಾತನನ್ನು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವಿ ಕೋಟೆ ಎಸ್‌ಎಜಿ ರಸ್ತೆಯಲ್ಲಿ ವಾಸವಿದ್ದಲ್ಲಿಗೆ ಹೋಗಿ ದಸ್ತಗಿರಿ ಮಾಡಿ, ಆತನು ನೀಡಿದ ಮಾಹಿತಿ ಮೇರೆಗೆ ಕಳ್ಳತನ ಮಾಡಿದ್ದ 06 ಬುಲೆಟ್ ದ್ವಿಚಕ್ರವಾಹನ, 1 R15 ಯಮಹ, 1 ಸುಜುಕಿ, 1 ಆಕ್ಸಿಸ್, 1 ಆಕ್ಟಿವ್, 1 ಪ್ಯಾಷನ್ ಪ್ರೋ, ಒಟ್ಟು ₹22,20,000 ಬೆಲೆಬಾಳುವ 11 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಚಂದಾ ನೀಡಲಿಲ್ಲ ಎಂಬ ಕಾರಣಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ ; ದೂರು ದಾಖಲು

Advertisements

ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಅಧಿಕಾರಿ ಹಾಗೂ ಸಿಬ್ಬಂದಿಯವರ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X