ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಬಸ್ ಹೊತ್ತಿ ಉರಿದಿದ್ದು, 17 ಮಕ್ಕಳು ಸೇರಿದಂತೆ ಕನಿಷ್ಠ 71 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಾಂತೀಯ ಸರ್ಕಾರದ ವಕ್ತಾರ ಅಹ್ಮದುಲ್ಲಾ ಮುತ್ತಕಿ ಸಾವಿನ ಸಂಖ್ಯೆಯನ್ನು ದೃಢಪಡಿಸಿದ್ದಾರೆ ಎಂದು ವರದಿಯಾಗಿದೆ. ಹಾಗೆಯೇ ಇದು ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಸಂಚಾರ ಅಪಘಾತಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಛತ್ತೀಸ್‌ಗಢ | ಭೀಕರ ಅಪಘಾತ: ಹೊತ್ತಿ ಉರಿದ ಕಾರು, ನಾಲ್ವರ ಸಾವು
“ಹೆರಾತ್‌ನಲ್ಲಿ ಒಂದು ಬಸ್, ಟ್ರಕ್ ಮತ್ತು ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ 71 ಮಂದಿ ಮೃತಪಟ್ಟಿದ್ದಾರೆ” ಎಂದು ತಿಳಿಸಿದ್ದಾರೆ.
د اطفايې مسؤلين په ډير ليږ وخت کي د حادثی ځای ته ورسيدل خو متاسفانه په ژغورلو ونه توانيدل pic.twitter.com/cj3RhQc25H
— Ahmadullah Muttaqi | احمدالله متقي (@Ahmadmuttaqi01) August 19, 2025
ಸದ್ಯ ಡಿಕ್ಕಿಯ ನಂತರ ಬಸ್ ಹೊತ್ತಿ ಉರಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಸ್‌ನಲ್ಲಿ ಇರಾನ್‌ನಿಂದ ಗಡೀಪಾರು ಮಾಡಲಾದ ಅಪ್ಘಾನಿಸ್ತಾನಿಗಳು ಇದ್ದರು ಎಂದು ಹೇಳಲಾಗಿದೆ.
“ಗಡಿ ದಾಟಿದ ನಂತರ ಬಸ್ ಕಾಬೂಲ್ ಕಡೆಗೆ ಸಾಗುತ್ತಿತ್ತು. ಎಲ್ಲಾ ಪ್ರಯಾಣಿಕರು ಇಸ್ಲಾಂ ಕ್ವಾಲಾದಲ್ಲಿ ವಾಹನವನ್ನು ಹತ್ತಿದ ವಲಸಿಗರು ಆಗಿದ್ದಾರೆ” ಎಂದು ಪ್ರಾಂತೀಯ ಅಧಿಕಾರಿ ಮೊಹಮ್ಮದ್ ಯೂಸುಫ್ ಸಯೀದಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
