ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಬಸ್ ಹೊತ್ತಿ ಉರಿದಿದ್ದು, 17 ಮಕ್ಕಳು ಸೇರಿದಂತೆ ಕನಿಷ್ಠ 71 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಾಂತೀಯ ಸರ್ಕಾರದ ವಕ್ತಾರ ಅಹ್ಮದುಲ್ಲಾ ಮುತ್ತಕಿ ಸಾವಿನ ಸಂಖ್ಯೆಯನ್ನು ದೃಢಪಡಿಸಿದ್ದಾರೆ ಎಂದು ವರದಿಯಾಗಿದೆ. ಹಾಗೆಯೇ ಇದು ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಸಂಚಾರ ಅಪಘಾತಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.

https://shorturl.fm/Lb06j