ಯಾದಗಿರಿ | ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಸೇರಿದ ಕುಡಿಯುವ ನೀರಿನ ಬಾವಿ ಮುಚ್ಚಿಸಿದ ಸವರ್ಣೀಯರು

Date:

Advertisements

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕೊಂಗಂಡಿ ಗ್ರಾಮದ ಸೀಮಾಂತರದಲ್ಲಿ ಬರುವ ಸರ್ವೇ ನಂ:12/6-03 ಗುಂಟೆ ಜಮೀನಿನಲ್ಲಿರುವ ಎಸ್‌ಟಿ/ಎಸ್‌ಸಿ ಜನಾಂಗಕ್ಕೆ ಸೇರಿದ ಸರ್ಕಾರಿ ಬಾವಿಯನ್ನು ಜೆಸಿಬಿಯಿಂದ ಬಾವಿ ಮುಚ್ಚಿಸಿರುವ ಸವರ್ಣೀಯರು ಜಾಗ ನಮ್ಮದೆಂದು ದೌರ್ಜನ್ಯ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತಾಲೂಕಿನ ಗೋನಾಲ ಪಂಚಾಯಿತಿ ವ್ಯಾಪ್ತಿಯ ಕೊಂಗಂಡಿ ಗ್ರಾಮದ ತಿಮ್ಮಣ್ಣ ಮತ್ತು ಮರಲಿಂಗ ಎಂಬುವವರು ಒಗ್ಗೂಡಿ ಎಸ್‌ಸಿ/ಎಸ್‌ಟಿ ಸಮುದಾಯದ ಕುಡಿಯುವ ನೀರಿನ ಬಾವಿ ಮುಚ್ಚಿಸಿದ ಹಿನ್ನೆಲೆ ಶೋಷಿತ ಸಮುದಾಯ ನಿಂಗಪ್ಪ ಚಂದ್ರಪ್ಪ, ಲಚಮಣ್ಣ ಎಂಬುವವರು ಕುಡಿಯುವ ನೀರಿನ ಬಾವಿ ಮುಚ್ಚಿಸಿದ್ದನ್ನು ಪ್ರಶ್ನಿಸಿದ್ದಾರೆ. ಬಳಿಕ ಸವರ್ಣಿಯರಾದ ತಿಮ್ಮಣ್ಣ ಮತ್ತು ಮರಲಿಂಗ ಎಂಬವವರು ಕೂಡಿಕೊಂಡು ʼಈ ಬಾವಿ ನನ್ನ ಜಮೀನಿನಲ್ಲಿ ಬರುತ್ತದೆಂದು ಹೇಳಿ ನಮ್ಮ ಮೇಲೆ ದೌರ್ಜನ್ಯದಿಂದ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ಮಾತನಾಡಿದ್ದು, ಜಾತಿ ನಿಂದನೆ ಮಾಡಿದ್ದಾರೆʼ ಎಂದು ಸ್ಥಳೀಯ ಸಂತ್ರಸ್ತರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆಯ ಮತ ಎಣಿಕೆ: ಸ್ಥಳೀಯರಲ್ಲಿ ಕುತೂಹಲ

Advertisements

“ಸರ್ಕಾರಿ ಬಾವಿಯನ್ನು ಒತ್ತುವರಿ ಮಾಡಿಕೊಂಡು ನಮ್ಮ ಮೇಲೆ ಹಲ್ಲೆ ಮಾಡಿರುವ ತಿಮ್ಮಣ್ಣ ಮತ್ತು ಮರಲಿಂಗ ವಿರುದ್ಧ ಸೂಕ್ತ ಕ್ರಮ ಜರುಗಿಸಿ ನಮಗೆ ಸಾರ್ವಜನಿಕ ಬಾವಿಯನ್ನು ಮರಳಿಸುವ ಮೂಲಕ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸಬೇಕು” ಎಂದು ಆಗ್ರಹಿಸಿ ಯಾದಗಿರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X