ರಸ್ತೆಯಲ್ಲಿ ಮಲಗಿದ್ದ ನಾಯಿ ಮೇಲೆ ಉದ್ದೇಶಪೂರ್ವಕವಾಗಿ ಚಾಲಕನೊಬ್ಬ ಕಾರು ಹರಿಸಿದ ಘಟನೆ ಬೆಂಗಳೂರಿನ ಇಬ್ಬಲೂರಿನ ಎಂಬಸಿ ಪ್ರಿಸ್ಟಿನ್ ಅಪಾರ್ಟ್‌ಮೆಂಟ್ ಬಳಿ ನಡೆದಿದೆ.
ಆಗಸ್ಟ್ 8ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿದಾಡುತ್ತಿದೆ.
ಈ ಬಗ್ಗೆ ಮಿತು ಸಿಂಗ್ ಎಂಬುವವರು ಟ್ವೀಟ್ ಮಾಡಿದ್ದು, “ರಸ್ತೆಯಲ್ಲಿ ಕಾರು ಚಲಾಯಿಸುವಾಗ ಇದು ಕೇವಲ ನಾಯಿ ಎಂದು ಉದ್ದೇಶಪೂರ್ವಕವಾಗಿ ಕಾರು ಹರಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ನಗರ ಪೊಲೀಸ್ ಘಟನೆ ನಡೆದ ಸ್ಥಳ ಸೇರಿದಂತೆ ಸೂಕ್ತ ವಿವರ ನೀಡಿ ಎಂದು ಕೇಳಿದೆ.
ರಸ್ತೆ ಮೇಲೆ ಬಿದ್ದು ನರಳಾಡುತ್ತಿದ್ದ ನಾಯಿಯನ್ನು ಸ್ಥಳೀಯರು ರಕ್ಷಿಸಿ ಚಿಕಿತ್ಸೆ ಕೊಡಿಸಿದ್ದಾರೆ.