ಕೋಲಾರ ತಾಲೂಕಿನ ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಆಗಸ್ಟ್ 20ರ ಬುಧವಾರ ಬೆಳಿಗ್ಗೆ 8ರಿಂದ ಆರಂಭಗೊಂಡಿದ್ದು, 10ರ ವೇಳೆಗೆ ಪೂರ್ಣ ಫಲಿತಾಂಶ ಹೊರಬೀಳಲದೆ.
ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಎಎಪಿ, ಪಕ್ಷೇತರರು ಸೇರಿದಂತೆ ಒಟ್ಟು 51 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಮತ ಎಣಿಕೆ ನಡೆಯುವ ಕೋಲಾರದ ಬಾಲಕಿಯರ ಪಿಯು ಕಾಲೇಜು ಕೇಂದ್ರಕ್ಕೆ ತಹಶೀಲ್ದಾರ್ ನಯನ ಭೇಟಿ ನೀಡಿ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾರೆ.
ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಗಾಗಿ ಎರಡು ಟೇಬಲ್ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 20 ಮಂದಿ ಚುನಾವಣಾ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದಾರೆ.
ಎಲೆಕ್ಟ್ರಾನಿಕ್ ಮತಯಂತ್ರಗಳಾಗಿರುವುದರಿಂದ ಫಲಿತಾಂಶ ಅತಿ ಶೀಘ್ರ ಹೊರಬೀಳಲಿದ್ದು, ಒಂದು ವಾರ್ಡ್ ಆದ ನಂತರ ಒಂದು ವಾರ್ಡಿನ ಮತ ಎಣಿಕೆ ನಡೆಯುತ್ತಲಿದೆ.
ಈ ಸುದ್ದಿ ಓದಿದ್ದೀರಾ? ಕೆ ಆರ್ ಪೇಟೆ | ಇ-ಸ್ವತ್ತು, ಮನರೇಗಾ ಯೋಜನೆಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಕ್ರಮಕ್ಕೆ ಕರವೇ ಆಗ್ರಹ
ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಎಣಿಕೆ ಸಂದರ್ಭದಲ್ಲಿ ಈ ಭಾಗದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.
ಈ ನಡುವೆ ತಹಶೀಲ್ದಾರ್ ನಯನ, ವೃತ್ತ ನಿರೀಕ್ಷಕ ಲೋಕೇಶ್, ಕಸಬಾ ಕಂದಾಯ ನಿರೀಕ್ಷಕ ರಾಜೇಂದ್ರ ಪ್ರಸಾದ್ ಮತ್ತಿತರರು ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿ ಸಿದ್ದತೆಗಳ ಪರಿಶೀಲನೆ ನಡೆಸಿದರಲ್ಲದೇ ಮತ ಯಂತ್ರಗಳನ್ನು ಭದ್ರಪಡಿಸಿರುವ ಸ್ಟಾಂಗ್ ರೂಂ ಪರಿಶೀಲನೆ ನಡೆಸಿದ್ದಾರೆ.