ಶಿವಮೊಗ್ಗ, ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ(ರಿ) ವತಿಯಿಂದ ಶಿವಮೊಗ್ಗ ಜಿಲ್ಲಾ ಘಟಕದ ಕಛೇರಿಯ ಉದ್ಘಾಟನಾ ಸಮಾರಂಭವನ್ನು ನೆನ್ನೆ ದಿವಸ ದಿ.19-08-2025 ರ ಮಂಗಳವಾರ ಬೆಳಗ್ಗೆ 10:00 ಗಂಟೆಗೆ ಏರ್ಪಡಿಸಲಾಗಿತ್ತು.
ರಾಜ್ಯ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಹಾಗೂ ಹೆಚ್.ಜಿ ರಮೇಶ್ ಕುಣಿಗಲ್ ರವರು ಮತ್ತು ರಾಜ್ಯಾಧ್ಯಕ್ಷರಾದ ಓಂಕಾರಪ್ಪ.ಎಂ ಉದ್ಘಾಟಿಸಿದರು.
ಈ ಕಾರ್ಯಕ್ರಮವನ್ನು ಉದ್ದೇಶಿಸಿ ಸಂಸ್ಥಾಪಕ ಅಧ್ಯಕ್ಷರಾದ ರಮೇಶ್ ಮಾತನಾಡಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಎಂಬ ಸಂಘಟನೆಯು ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದೆ ಎಂದರು.
ಇನ್ನು ಮುಂದೆ ಶಿವಮೊಗ್ಗ ಜಿಲ್ಲೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಲು ಸಂಘಟನೆ ಸಜ್ಜಾಗಿದೆ, ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಭ್ರಷ್ಟಾಚಾರದಿoದ ಕೂಡಿದ ಅಧಿಕಾರಿಗಳಿಗೆ ಸಿಂಹ ಸ್ವಪ್ನವಾಗಲಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಜಿಲ್ಲಾ ಗೌರವಾಧ್ಯಕ್ಷರಾದ ಈರಪ್ಪ ವಹಿಸಿದರು. ಮುಖ್ಯ ಅತಿಥಿಗಳಾಗಿ ರಾಜ್ಯ ಉಪಾಧ್ಯಕ್ಷರಾದ ಶಿವಾನಂದ ಮಾಳಗಿ.ಕಲ್ಯಾಣ ಕರ್ನಾಟಕದ ಉಪಾಧ್ಯಕ್ಷರಾದ ಹನುಮಂತ ಹುಲಿಕಟ್ಟೆ, ಉಪಸ್ಥಿತರಿದ್ದರು.
ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಮೋಹನ್. ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಶ್ರೀ ಮತಿ ಮೀನಾ.ಎಂ.ಎಸ್. ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನಾಗರಾಜ್ ಕುಮಾರ್. ಜಿಲ್ಲಾ ಪ್ರಧಾನ ಕಾರ್ಯದರ್ಶಿ .ನಾಗರಾಜ್ ಬಿ.ಟಿ. ಜಿಲ್ಲಾ ಉಪಾಧ್ಯಕ್ಷರಾಗಿ ಶ್ರೀ ಪ್ರಶಾಂತ್ ಎಂ.ಜಿ.ಹಾಗೂ ಶ್ರೀಮತಿ ಲಕ್ಷ್ಮಿ ಕಳಸಣ್ಣನವರು.ಜಿಲ್ಲಾ ಕಾರ್ಯದರ್ಶಿ ಕು. ಭಾಗ್ಯ.ಪಿ.ಗೌಡ. ಹಾಗೂ ಡಾ.ಈಶ್ವರ ಎನ್.ಡಿ. ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಸತೀಶ್ ಅಂಗಡಿ.ವೆಂಕಟೇಶ್. ಸಿ. ಶಿಕಾರಿಪುರ ತಾಲೂಕು ಅಧ್ಯಕ್ಷರಾದ ಕು. ಪ್ರಭಾವತಿ.ಹೆಚ್.ಸೊರಬ ತಾಲ್ಲೂಕು ಅಧ್ಯಕ್ಷರಾದ ರಾಜೇಶ್ ಕಾನಡೆ. ಮುಂತಾದವರು ಉಪಸ್ಥಿತರಿದ್ದರು.