ದ.ಕ | ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿಗೆ ಹಿನ್ನಡೆ; ‘ಕೈ’ ಪಾಳಯಕ್ಕೆ ದಕ್ಕಿದ ಅಧಿಕಾರ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಕಾಂಗ್ರೆಸ್ 8 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಗಳಿಸಿದೆ.

ಬಿಜೆಪಿ ಐದು ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಒಟ್ಟು 13 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭಗೊಂಡ ಮತ ಎಣಿಕೆಯು 9.45ರ ವೇಳೆ ಮುಕ್ತಾಯಗೊಂಡಿದೆ.

ತೀವ್ರ ಕುತೂಹಲ ಮೂಡಿಸಿದ್ದ ಕಳಾರ ವಾರ್ಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ತಮನ್ನಾ ಜಬೀನ್ ಜಯ ಗಳಿಸಿದರೆ, 8ನೇ ಪಿಜಕ್ಕಳ ವಾರ್ಡ್‌ನಲ್ಲಿ ಬಿಜೆಪಿಯ ದಯಾನಂದ ಗೌಡ ಪಿ. ಅವರು ಕಾಂಗ್ರೆಸ್ ಅಭ್ಯರ್ಥಿ ಅಶ್ರಫ್ ಶೇಡಿಗುಂಡಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಕೋಡಿಬೈಲು ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ಕುಸುಮಾ, ಮೂರಾಜೆ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಪನ್ಯ ವಾರ್ಡ್ ಕಾಂಗ್ರೆಸ್ ಮಹಮ್ಮದ್‌ ಫೈಝಲ್, ಕೋಡಿಂಬಾಳ ವಾರ್ಡ್ ಬಿಜೆಪಿ ಅಕ್ಷತಾ ಮಣಿಮುಂಡ ಗೆಲುವು ಸಾಧಿಸಿದ್ದಾರೆ.

Advertisements

ಇದನ್ನೂ ಓದಿ: ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ

ಬೆದ್ರಾಜೆ ವಾರ್ಡ್‌ನಲ್ಲಿ ಕಾಂಗ್ರೆಸ್ ಸಿ.ಜೆ.ಸೈಮನ್, ದೊಡ್ಡಕೊಪ್ಪ ವಾರ್ಡ್ ನಲ್ಲಿ ಬಿಜೆಪಿಯ ಗುಣವತಿ ಗೆಲುವು ಸಾಧಿಸಿದ್ದು, ಮಾಲೇಶ್ವರ ವಾರ್ಡ್‌ನಲ್ಲಿ ಕಾಂಗ್ರೆಸ್‌ನ ಮುಹಮ್ಮದ್ ಹನೀಫ್, ಮಜ್ಜಾರು ವಾರ್ಡ್‌ನಲ್ಲಿ ಬಿಜೆಪಿಯ ಮೋಹನ್, ಕಡಬ ವಾರ್ಡ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನೀಲಾವತಿ ಶಿವರಾಮ, ಪುಳಿಕುಕ್ಕು ವಾರ್ಡ್‌ನಲ್ಲಿ ಕಾಂಗ್ರೆಸ್‌ನ ಕೃಷ್ಣಪ್ಪ, ಪಣೆಮಜಲ್ ವಾರ್ಡ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರೋಹಿತ್ ಗೌಡ ಗೆಲುವು ಸಾಧಿಸಿದ್ದಾರೆ. ಫಲಿತಾಂಶ ಹೊರಬರುತ್ತಿದ್ದಂತೆ ಕಾಂಗ್ರೆಸ್‌ ಮುಖಂಡ, ನಾಯಕರು ಮತ್ತು ಬೆಂಬಲಿಗರು ಸಿಹಿಹಂಚಿ ಸಂಭ್ರಮಿಸಿದರು.

ಕಡಬ
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X