ಸಾಲದ ಭಾದೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಫರತಬಾದ್ ಹೋಬಳಿ ವ್ಯಾಪ್ತಿಯ ಕಾವುಲಗಾ ಬಿ ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು ಹನುಮಂತ (30) ಎಂದು ಗುರುತಿಸಲಾಗಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಸಾಲದ ಹೊರೆ ತಾಳಲಾರದೆ ರೈತ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಿಸಬೇಕು. ಸಾಲ ಋಣ ಮುಕ್ತ ಕಾಯ್ದೆ ಜಾರಿಗೆ ಮಾಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾಧ್ಯಕ್ಷ
ಶರಣಬಸಪ್ಪ ಮಮಶೆಟ್ಟಿ ಆಗ್ರಹಿಸಿದ್ದಾರೆ.
ಕಲಬುರಗಿಯಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಳವಾಗುತ್ತಿದ್ದು ಫೆಬ್ರವರಿ-ಮಾರ್ಚ್ ತಿಂಗಳ ಅವಧಿಯಲ್ಲೇ ಆರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
