ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ (SDMC)ಗೆ ಹೊಸ ನೇಮಕಾತಿ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಬಂದೇನವಾಜ್ ಜಾಲಹಳ್ಳಿ ಅವರನ್ನು ಅಧ್ಯಕ್ಷರಾಗಿ ಹಾಗೂ ಅಬ್ದುಲ್ ರಹೀಮ್ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಶಾಲೆಯ ಸಮಿತಿಯ ಆಯ್ಕೆಯಿಂದ ಮುಂದಿನ ದಿನಗಳಲ್ಲಿ ಶಾಲೆಯ ಶೈಕ್ಷಣಿಕ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಬದ್ಧತೆಯಿಂದ ಕಾರ್ಯನಿರ್ವಹಿಸುವ ನಿರೀಕ್ಷೆ ವ್ಯಕ್ತವಾಗಿದೆ.
ಶಾಲಾ ಸಮಿತಿಯ ಇತರ ಸದಸ್ಯರ ನೇಮಕವೂ ನಡೆಯಿದ್ದು, ಪೋಷಕರು ಹಾಗೂ ಸ್ಥಳೀಯ ಶಿಕ್ಷಣ ಹಿತಾಸಕ್ತರು ಇದರ ಭಾಗಿಯಾಗಿದ್ದಾರೆ. ಹೊಸ ತಂಡವು ವಿದ್ಯಾರ್ಥಿಗಳ ಹಿತಾಸಕ್ತಿ, ಶಿಕ್ಷಣದ ಗುಣಮಟ್ಟದ ಉತ್ತರವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಸರ್ವ ಸದಸ್ಯರು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ನವಜಾತ ಶಿಶುವನ್ನು ರಸ್ತೆ ಬದಿ ಬಿಟ್ಟು ಹೋದ ಪೋಷಕರು!
ಅಧ್ಯಕ್ಷರಾಗಿ ಆಯ್ಕೆಯಾದ ಬಂದೇನವಾಜ್ ಅವರು ಮಾತನಾಡಿ“ಶಾಲೆಯ ಅಭಿವೃದ್ಧಿಗಾಗಿ ನನಗೆ ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದಗಳು ಸಲ್ಲಿಸುತ್ತೇನೆ. ಶಾಲೆಯ ಅಭಿವೃದ್ಧಿಗಾಗಿ ಹಗಲು-ರಾತ್ರಿ ಶ್ರಮಿಸಿ, ಶಾಲೆಯನ್ನು ಉನ್ನತ ಮಟ್ಟಕ್ಕೇರಿಸಲು ಸದಾ ಪ್ರಯತ್ನಿಸುವೆ ಎಂದು ಹೇಳಿದರು.
