ರಾಯಚೂರು | ಹಟ್ಟಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿಗಾಗಿ ಕಾಲ್ನಡಿಗೆ ಜಾಥಾ

Date:

Advertisements

ರಾಯಚೂರು : ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಮತ್ತು ಪಟ್ಟಣದ ಸಮಗ್ರ ಅಭಿವೃದ್ದಿಗೆ ಮುಂದಾಗಬೇಕು ಎಂದು ಆಗ್ರಹಿಸಿ ನವ ಭಾರತ ಹಿಂದೂ ದಲಿತ ಸಂಘಟನೆ ಕಾರ್ಯಕರ್ತರು ಕಾಲ್ನಡಿಗೆ ಜಾಥಾ ನಡೆಸಿದರು.

ಹಟ್ಟಿಯಿಂದ ಜಾಥಾ ಆರಂಭಿಸಿ ರಾಯಚೂರಿಗೆ ಆಗಮಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

“ಹಟ್ಟಿ ಪಟ್ಟಣಕ್ಕೆ 15 ದಿನಗಳ ಒಳಗಾಗಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಶಾಶ್ವತ ಕುಡಿಯುವ ನೀರಿನ ಯೋಜನೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು. ಹಿಂದೂ ರುದ್ರಭೂಮಿಗಾಗಿ ಸ್ಥಳ ನಿಗದಿಪಡಿಸಬೇಕು” ಎಂದು ಪ್ರತಿಭಟಿಸಿದರು.

Advertisements

“ಹಟ್ಟಿ ಪಟ್ಟಣಕ್ಕೆ ಮಂಜೂರಾಗಿರುವ ಬಸ್ ಡಿಪೋ ಕೂಡಲೇ ಕಾರ್ಯಾರಂಭವಾಗಬೇಕು. ಲಿಂಗಸುಗೂರಿನಿಂದ ಕಲಬುರಗಿಗೆ ತೆರಳುವ ಸಾರಿಗೆ ಬಸ್‌ಗಳನ್ನು ಹಟ್ಟಿ ಮಾರ್ಗವಾಗಿ ಸಂಚರಿಸಲು ಆದೇಶಿಸಬೇಕು” ಎಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದರು.

“ರಾಯಚೂರು ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಚುನಾವಣಾ ಬೂತ್‌ ಹಾಗೂ ಅಧಿಕ ಜನಸಂಖ್ಯೆಯನ್ನು ಹೊಂದಿದ ಹಟ್ಟಿ ಪಟ್ಟಣವನ್ನು ತಾಲೂಕು ಕೇಂದ್ರವಾಗಿ ಘೋಷಣೆ ಮಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮತ್ತೆ ಬೇಡಿಕೆ ಇಟ್ಟ ಮಾಜಿ ಸಚಿವ ವಿ ಸೋಮಣ್ಣ

ಹಟ್ಟಿ ಪಟ್ಟಣದಲ್ಲಿ ಡಿಪ್ಲೊಮಾ ಇನ್ ಮೈನಿಂಗ್ ಎಂಜಿನಿಯರಿಂಗ್‌, ಡಿಪ್ಲೊಮಾ ಕಾಲೇಜು ಮಂಜೂರು ಮಾಡಬೇಕು. ಸರ್ಕಾರಿ ಜಾಗ ಅತಿಕ್ರಮಣ ಮಾಡಿರುವ ಕುರಿತು ಸಮಗ್ರ ತನಿಖೆ ನಡೆಸಬೇಕು. ಹೈಟೆಕ್ ಗ್ರಂಥಾಲಯ ನಿರ್ಮಾಣದ ಜೊತೆಗೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಕಾಲ್ನಡಿಗೆ ಜಾಥಾದಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ವಿನೋದ್ ಕುಮಾರ್, ಗೌರವಾಧ್ಯಕ್ಷ ಅಮರೇಶ್, ಹಟ್ಟಿ ಘಟಕದ ಅಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ಭೀಮರಾಯ ಭಜೆಂತ್ರಿ, ಯಂಕೋಬ ಪವಾಡೆ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X