ದಕ್ಷ ಅಧಿಕಾರಿಯ ವರ್ಗಾವಣೆ ಸಮ್ಮತವಲ್ಲ, ಸರ್ಕಾರದ ಆದಿವಾಸಿ ವಿರೋಧಿ ನಡೆ ಖಂಡನೀಯ: ಭರತ್‌ ಚಂದ್ರ ದೇವಯ್ಯ

Date:

Advertisements

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯಕ್ರಮಗಳನ್ನು ಹೊಸ ಹುರುಪಿನಿಂದ ಅನುಷ್ಠಾನಗೊಳಿಸುವಲ್ಲಿ ಸರ್ಕಾರದ ಕಾರ್ಯದರ್ಶಿ ರಂದೀಪ್ ಅವರು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಆದಿವಾಸಿಗಳ ಏಳಿಗೆಯನ್ನು ಸಹಿಸದೆ ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡಿರುವ ಸರ್ಕಾರದ ಆದಿವಾಸಿ ವಿರೋಧಿ ದೋರಣಾ ನಡೆಯನ್ನು ಖಂಡಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಕಾಡು, ಕಾಡಂಚಿನ ಅರಣ್ಯಾಧಾರಿತ ಆದಿವಾಸಿಗಳ ಒಕ್ಕೂಟದ ಅದ್ಯಕ್ಷ ಕುಡಿಯರ ಭರತ್‌ ಚಂದ್ರ ದೇವಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಐಎಎಸ್ ರಂದಿಪ್‌ರವರ ವರ್ಗಾವಣೆಯನ್ನು ರದ್ದುಪಡಿಸಿ ಬುಡಕಟ್ಟು ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿಯಾಗಿ ಮುಂದುವರೆಸಬೇಕು” ಎಂದು ಕರ್ನಾಟಕ ರಾಜ್ಯ ಕಾಡು ಕಾಡಂಚಿನ ಅರಣ್ಯಾಧಾರಿತ ಆದಿವಾಸಿಗಳ ಒಕ್ಕೂಟದ ಪರವಾಗಿ ಆಗ್ರಹಿಸಿದರು.

”ಕರ್ನಾಟಕ ಸರ್ಕಾರವು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಬೇರ್ಪಡಿಸಿದ ತರುವಾಯ ಪ್ರತ್ಯೇಕವಾದ ಸಚಿವಾಲಯ ಮತ್ತು ನಿರ್ದೇಶನಾಲಯವನ್ನು ಅಸ್ತಿತ್ವಕ್ಕೆ ತಂದಿರುವುದು ಬುಡಕಟ್ಟು ಜನರ ಅಭ್ಯುದಯಕ್ಕೆ ಸಹಕಾರಿಯಾಗಿದೆ. ಇಲಾಖೆಯು ರಾಜ್ಯದ ಬುಡಕಟ್ಟು ಸಮುದಾಯಗಳು ಹಾಗೂ ಕಾಡು, ಕಾಡಂಚಿನ ಆದಿವಾಸಿ ಸಮುದಾಯಗಳ ಶಿಕ್ಷಣ, ಆರೋಗ್ಯ, ಕೌಶಲ್ಯ ವರ್ಧನೆ, ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಸಮುದಾಯಗಳ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ಹಾಕಿಕೊಂಡಿರುವುದು ಸಂತೋಷದಾಯಕವಾಗಿದ್ದು, ಅಭಿವೃದ್ಧಿಯ ಆಶಾ ಭಾವನೆ ಮೂಡಿಸಿದೆ” ಎಂದರು.

Advertisements

”ರಂದೀಪ್ ಅವರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿರುವ 50 ಸಮುದಾಯಗಳ ಅಭಿವೃದ್ಧಿಗಾಗಿ ಅನೇಕ ವಿನೂತನ ಯೋಜನೆಗಳನ್ನು ರೂಪಿಸಿದ್ದಾರೆ. ಮುಖ್ಯಮಂತ್ರಿಗಳು ಪ್ರಸ್ತುತ 2025-26ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಅವಿರತ ಶ್ರಮ ವಹಿಸುತ್ತಿದ್ದರು. ಅವರು ಅಧಿಕಾರ ವಹಿಸಿಕೊಂಡ ಪ್ರಾರಂಭದಿಂದಲೂ ಪರಿಶಿಷ್ಟ ಪಂಗಡ ಸಮುದಾಯಗಳ ಶ್ರೇಯೋಭಿವೃದ್ಧಿಗೆ ಅದರಲ್ಲೂ ಆದಿಮಾ ಬುಡಕಟ್ಟುಗಳು, ಆದಿವಾಸಿ ಸಮುದಾಯಗಳ ಸಮಸ್ಯೆಗಳಾದ ವಂಶವಾಹಿ ಕಾಯಿಲೆ ʼಸಿಕ್ಕಲ್ ಶೆಲ್ ಅನೀಮಿಯಾʼ ರೋಗ ನಿವಾರಿಸುವ ನಿಟ್ಟಿನಲ್ಲಿ ಅನೇಕ ಹೊಸ ಯೋಜನೆಗಳನ್ನು ಹಮ್ಮಿಕೊಂಡು ಸಮುದಾಯದ ಆರೋಗ್ಯ ರಕ್ಷಣೆಗೆ ಕ್ರಮಗಳನ್ನು ಕೈಗೊಂಡಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ, ಡಿ ದೇವರಾಜ ಅರಸು ಜನ್ಮ ದಿನಾಚರಣೆ

“ಅರಣ್ಯ ಹಕ್ಕು ಮಾನ್ಯತೆ ಕಾಯ್ದೆಯಡಿ ಭೂಮಿ ವಿತರಣೆ, ಅರಣ್ಯ ಸಂಪನ್ಮೂಲಗಳ ಹಕ್ಕು ನೀಡುವುದು, ಇಲಾಖೆಯ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಸೇವೆಗಳ ಉನ್ನತೀಕರಣ, ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಅಧ್ಯಯನ, ಸಂಶೋಧನೆ ಮುಂತಾದ ಕೆಲಸ ಕಾರ್ಯಗಳನ್ನು ಕ್ರಿಯಾಶೀಲಗೊಳಿಸುವಂತಹ ಮಹತ್ತರ ಕಾರ್ಯಗಳನ್ನು ಮಾಡಿದ್ದಾರೆ” ಎಂದರು.

“ಮುಖ್ಯಮಂತ್ರಿಗಳ ಆಶಯದಂತೆ ನಿರ್ಲಕ್ಷಿತರ, ಅನ್ಯಾಯಕ್ಕೆ ಒಳಗಾದ ಕಟ್ಟಕಡೆಯ ಸಮುದಾಯಗಳಿಗೆ ನ್ಯಾಯ ನೀಡುವಲ್ಲಿ ನಿರಂತರ ಪ್ರಯತ್ನ ನಡೆಸುತ್ತಿರುವ ದಕ್ಷ, ಪ್ರಾಮಾಣಿಕ ಅಧಿಕಾರಿ ರಂದೀಪ್ ಅವರನ್ನು ಏಕಾಏಕಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಗೆ ವರ್ಗಾಯಿಸಿ ಹೆಚ್ಚುವರಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹೊಣೆಗಾರಿಕೆ ನೀಡಿರುವುದು ನಿಜಕ್ಕೂ ಬೇಸರವನ್ನು ಉಂಟುಮಾಡಿದೆ. ಈ ಕೂಡಲೇ ಸರ್ಕಾರ ರಂದೀಪ್‌ ಅವರ ವರ್ಗಾವಣೆ ಆದೇಶವನ್ನು ಹಿಂಪಡೆಯಬೇಕು” ಎಂದು ಕರ್ನಾಟಕ ರಾಜ್ಯ ಕಾಡು, ಕಾಡಂಚಿನ ಅರಣ್ಯಾಧಾರಿತ ಆದಿವಾಸಿಗಳ ಒಕ್ಕೂಟವು ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X