ಉಡುಪಿ | ಡಿ. ದೇವರಾಜ ಅರಸು ಅವರ ಆಡಳಿತ ಸೇವೆ ದೂರದೃಷ್ಠಿಗೆ ಹಿಡಿದ ಕೈಗನ್ನಡಿ : ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ

Date:

Advertisements

ಸಾಮಾಜಿಕ ನ್ಯಾಯದ ಹರಿಕಾರ ದಿವಂಗತ ಡಿ. ದೇವರಾಜ ಅರಸು ರವರು ಆಡಳಿತ ಅವಧಿಯಲ್ಲಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ, ಬಡವರ ಹಾಗೂ ದೀನ ದಲಿತರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಯೋಜನೆಗಳು ಇಂದಿಗೂ ಸಹ ಮುಂದುವರೆಯುತ್ತಿರುವುದು ಅವರ ದೂರದೃಷ್ಠಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದರು.

ಅವರು ಇಂದು ನಗರದ ಮಿಷನ್ ಕಂಪೌಂಡ್‌ನ ಬಳಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ.ದೇವರಾಜ ಅರಸು ರವರ 110 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಡಿ.ದೇವರಾಜ ಅರಸು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.

ರಾಜ್ಯ ಕಂಡ ಅನುಭವಿ ಪ್ರಾಮಾಣಿಕ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರು ಉಳುವವನೇ ಹೊಲದೊಡೆಯ ಕಾರ್ಯಕ್ರಮದ ಮೂಲಕ ರೈತರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಸಮ ಸಮಾಜ ನಿರ್ಮಾಣದ ರೂವಾರಿಯಾಗಿ ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾಗಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಯೊಂದಿಗೆ ಅವರುಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

Advertisements
1006800856

ಸ್ವಚ್ಛತೆ ಕಾಪಾಡುವಲ್ಲಿ ಉಡುಪಿ ನಗರಸಭೆಯು ದೇಶ-ವಿದೇಶದಲ್ಲಿ ಹೆಸರುವಾಸಿಯಾಗಿದೆ. ನಗರದ ಸ್ವಚ್ಛತೆಯ ಬಗ್ಗೆ ವಿದ್ಯಾರ್ಥಿಗಳು ಜನಸಾಮಾನ್ಯರಲ್ಲಿ ಅರಿವು ಮೂಡಿಸಬೇಕು ಎಂದ ಅವರು, ಯುವಜನತೆ ಸಾಧಕರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ದೀರ್ಘಕಾಲ ಆಡಳಿತ ನಡೆಸಿದವರು ದೇವರಾಜ ಅರಸು ರವರು. ಮಹನೀಯರುಗಳ ಸಾಧನೆಗಳು ಜನಮಾನಸದಲ್ಲಿ ಉಳಿಯುವಂತೆ ಮಾಡುವ ನಿಟ್ಟಿನಲ್ಲಿ ಸರಕಾರ ಜಯಂತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ವಿದ್ಯಾರ್ಥಿಗಳು ದೇವರಾಜ ಅರಸುರವರ ಮಾರ್ಗದರ್ಶನಗಳನ್ನು ಅನುಸರಣೆ ಮಾಡುವುದರೊಂದಿಗೆ ಉನ್ನತ ಶಿಕ್ಷಣ ಪಡೆದು ಸತ್ಪçಜೆಗಳಾಗಿ ಬಾಳಬೇಕು ಎಂದರು.
ಡಿ.ದೇವರಾಜ ಅರಸುರವರ ವ್ಯಕ್ತಿತ್ವ ಮತ್ತು ಸಾಧನೆ ಕುರಿತು ಉಪ ಪೊಲೀಸ್ ಅಧೀಕ್ಷಕ ಡಿ.ಟಿ ಪ್ರಭು ಉಪನ್ಯಾಸ ನೀಡಿ ಮಾತನಾಡುತ್ತಾ, ಕರ್ನಾಟಕ ಕಂಡ ಅಪರೂಪದ ಮುತ್ಸದ್ದಿ ರಾಜಕಾರಣಿ ಡಿ. ದೇವರಾಜ ಅರಸು ಅವರು. ದಮನಿತರ ಅಭಿವೃದ್ಧಿಗೆ ಶ್ರಮಿಸಿದ ಶ್ರೀಮಂತ ವ್ಯಕ್ತಿತ್ವ ಅರಸು ಅವರದ್ದು. ಉಳುವವನೆ ಒಡೆಯ, ಜೀತ ಪದ್ಧತಿ ನಿರ್ಮೂಲನೆ ಕಾರ್ಯಕ್ರಮದ ಮೂಲಕ ರೈತರ ಹಾಗೂ ಬಡಜನರ ಬದುಕಿಗೆ ಆಶಾಕಿರಣವಾಗಿ, ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ಅಗಮಿಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಮೂಲಭೂತ ಸೌಕರ್ಯ ಸೇರಿದಂತೆ ಹಾಸ್ಟೆಲ್‌ಗಳ ನಿರ್ಮಾಣ, ಮೀಸಲಾತಿ ನಿಯಮಗಳ ಮೂಲಕ ಹಿಂದುಳಿದ ವರ್ಗಗಳ ಬೆಳವಣಿಗೆಗೆ ಇವರು ನೀಡಿದ ಕೊಡುಗೆ ಅಪಾರವಾಗಿದೆ ಎಂದರು.

ಕೇಂದ್ರದ 20 ಅಂಶಗಳ ಕಾರ್ಯಕ್ರಮ ಜಾರಿ, ಮಲಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ರದ್ದು, ರೈತರ ಜಮೀನುಗಳಿಗೆ ನೀರುಣಿಸುವ ಉದ್ದೇಶದಿಂದ ಕಾಳಿ ಯೋಜನೆ ಸ್ಥಾಪನೆ, ಅಂದಿನ ಕಾಲದಲ್ಲಿಯೇ ಹಿಂದುಳಿದ ವರ್ಗಗಳ ಸುಮಾರು ಹದಿನಾರು ಸಾವಿರಕ್ಕೂ ಹೆಚ್ಚು ಯುವಕರಿಗೆ ಉದ್ಯೋಗ ದೊರೆಯುವವರೆಗೆ ಸ್ಟೈಫಂಡ್ ಜಾರಿ ಸೇರಿದಂತೆ ಹಲವಾರು ಜನೋಪಯೋಗಿ ಕೆಲಸಗಳನ್ನು ಮಾಡಿದ ಅಪರೂಪದ ಜನಸೇವಕ ಡಿ. ದೇವರಾಜ ಅರಸುರವರು ಎಂದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ,ಸಮ ಸಮಾಜ ನಿರ್ಮಾಣ ಮಾಡುವಲ್ಲಿ ದಿಟ್ಟ ಹೆಜ್ಜೆ ಇಟ್ಟವರಲ್ಲಿ ದೇವರಾಜ ಅರಸು ಕೂಡ ಪ್ರಮುಖರು. ವಿದ್ಯಾರ್ಥಿಗಳು ತಮಗೆ ದೊರಕುವ ಸೌಲಭ್ಯಗಳ ಸದ್ಬಳಕೆ ಮಾಡಿಕೊಂಡು ಮುಂದಿನ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದ ಅವರು, ಸಮಾಜದಲ್ಲಿ ಸಮಾನತೆ ತರುವ ಕೆಲಸದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ಇದೇ ಸಂದರ್ಭದಲ್ಲಿ 2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಅಂಗವಾಗಿ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯ ವಿಜೇತರುಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಸ್.ಎಸ್ ಖಾದರಳ್ಳಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಶಂಕರ್, ಹಿಂದುಳಿದ ವರ್ಗಗಳ ಸಂಘಟನೆಯ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಹಿಂದುಳಿದ ವರ್ಗಗಳ ಇಲಾಖೆಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್ ಲಮಾಣಿ ಸ್ವಾಗತಿಸಿ, ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶ್ರೀಕಾಂತ್ ಜಿ ಗುನಗಾ ನಿರೂಪಿಸಿದರೆ, ಇಲಾಖೆಯ ಲೆಕ್ಕ ಅಧೀಕ್ಷಕಿ ಸುಗುಣ ಎ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X