ಬೀದರ್‌ | ಸೋರುತಿಹದು ನಿಟ್ಟೂರ(ಬಿ) ನಾಡ ಕಚೇರಿ, ಆವರಣದಲ್ಲಿ ಮಳೆ ನೀರು!

Date:

Advertisements

ಬೀದರ್‌ ಜಿಲ್ಲಾದ್ಯಂತ ಕಳೆದ ಎರಡ್ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಭಾಲ್ಕಿ ತಾಲೂಕಿನ ಹೋಬಳಿ ಕೇಂದ್ರವಾದ ನಿಟ್ಟೂರ(ಬಿ) ನಾಡ ಕಚೇರಿ ಕಟ್ಟಡ ಶಿಥಿಲಗೊಂಡು ನೀರು ಸೋರುತ್ತಿದ್ದು, ಕಚೇರಿ ಆವಣರದಲ್ಲಿ ಅಪಾರ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದ್ದು, ಇಲ್ಲಿನ ಸಿಬ್ಬಂದಿ ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.

ನಾಡ ಕಚೇರಿ ಕಟ್ಟಡ ಹಳೆಯದಾಗಿರುವುದರಿಂದ ಬಳಸಲು ಯೋಗ್ಯಾಗಿಲ್ಲ. ಒಟ್ಟು ಮೂರು ಕೋಣೆಗಳಲ್ಲಿ ಎರಡು ಕೋಣೆಗಳ ಚಾವಣಿ ಬಿರುಕು ಸ್ವಲ್ಪ ಮಳೆಯಾದರೂ ಛಾವಣಿ ಮೇಲಿಂದ ನೀರು ಸುರಿಯುತ್ತಿದೆ. ಕಂಪ್ಯೂಟರ್ ಹಾಗೂ ದಾಖಲೆಗಳ ಮೇಲೆ ಹನಿ ಹನಿ ನೀರು ಬೀಳುತ್ತಿದ್ದು, ಸಿಬ್ಬಂದಿ ಇಂತಹ ಅವ್ಯವಸ್ಥೆ ನಡುವೆ ಕೆಲಸ ಮಾಡುತ್ತಿದ್ದಾರೆ.

ಸಾಧಾರಣ ಮಳೆ ಸುರಿದರೆ ಸೋರುವ ಈ ಕಟ್ಟಡದಲ್ಲಿ ಎರಡ್ಮೂರು ದಿನಗಳಿಂದ ನಿರಂತರವಾಗಿ ಸುರಿಯುವ ಮಳೆಯಿಂದ ನೀರು ಸೋರಿಕೆಯ ಪ್ರಮಾಣ ಹೆಚ್ಚಾಗಿದೆ. ಮಳೆ ನೀರು ಕಚೇರಿ ಒಳಗೆ ಇಳಿಯುತ್ತಿದ್ದು, ವಿವಿಧ ಕಡತಗಳು, ದಾಖಲೆ ಪತ್ರಗಳು ತೇವಗೊಂಡು ಹಾಳಾಗುತ್ತಿವೆ ಎಂದು ಇಲ್ಲಿನ ಸಿಬ್ಬಂದಿ ಹೇಳುತ್ತಾರೆ.

Advertisements

ʼನಿಟ್ಟೂರ(ಬಿ) ಹೋಬಳಿ ವ್ಯಾಪ್ತಿಯಲ್ಲಿ ಸುಮಾರು 15ಕ್ಕೂ ಹೆಚ್ಚು ಹಳ್ಳಿಗಳು ಬರುತ್ತವೆ. ರೈತರು, ವಿದ್ಯಾರ್ಥಿಗಳು ಸೇರಿದಂತೆ ಸರ್ಕಾರಿ ಕೆಲಸ ಕಾರ್ಯಕ್ಕೆ ನಾಡ ಕಚೇರಿಗೆ ಬರುವುದು ಅನಿವಾರ್ಯ. ಆದರೆ ಇಲ್ಲಿ ಸೂಕ್ತ ಸೌಲಭ್ಯವಿಲ್ಲದೆ ಜನರಿಗೆ ತೊಂದರೆಯಾಗುತ್ತಿದೆ. ಛಾವಣಿ ಸೋರುತ್ತಿರುವುದರಿಂದ ಕಡತಗಳೂ ಸುರಕ್ಷಿತವಾಗಿಲ್ಲ. ಆದಷ್ಟು ಬೇಗ ಹೊಸ ಕಟ್ಟಡಕ್ಕೆ ಕ್ರಮ ಕೈಗೊಳ್ಳಬೇಕುʼ ಎಂದು ನಾಗರಾಳ ಗ್ರಾಮದ ಗ್ರಾ.ಪಂ. ಸದಸ್ಯ ಆಕಾಶ ಸಿಂಧೆ ಆಗ್ರಹಿಸಿದ್ದಾರೆ.

ʼನಾಡ ಕಚೇರಿಗೆ ಹೋಗಿ ಬರಲು ಸರಿಯಾದ ದಾರಿ ಇಲ್ಲ. ಮಳೆ ಬಂದರೆ ಅಪಾರ ಪ್ರಮಾಣದಲ್ಲಿ ನೀರು ನಿಲ್ಲುತ್ತದೆ. ಇಡೀ ಪರಿಸರವೂ ಹಾಳಾಗಿದೆ. ಸಂಬಂಧ ಪಟ್ಟವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಮುಂದಿನ ಎದುರಾಗಬಹುದಾದ ಅನಾಹುತಗಳನ್ನು ತಪ್ಪಿಸಬೇಕುʼ ಎಂದು ಗ್ರಾಮದ ವಿದ್ಯಾರ್ಥಿ ಮುಖಂಡ ಜಾವೀದ್‌ ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ʼಸದ್ಯ ಪ್ರವಾಸಿ ಮಂದಿರದ ಕಟ್ಟಡದಲ್ಲಿ ನಾಡ ಕಚೇರಿ ಕಾರ್ಯನಿರ್ವಹಿಸುತ್ತಿದೆ. ಕಟ್ಟಡ ಹಳೆಯದಾಗಿದ್ದು, ಅಧಿಕ ಮಳೆಯಾದರೆ ಛಾವಣಿ ಸೋರುತ್ತದೆ. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ, ಶೀಘ್ರದಲ್ಲೇ ಕಟ್ಟಡದ ದುರಸ್ತಿ ಕಾರ್ಯ ಆಗುತ್ತಿದೆ. ಹೊಸ ಕಟ್ಟಡಕ್ಕೆ ಈಗಾಗಲೇ ಜಾಗ ಮಂಜೂರಾಗಿದೆ. ನೂತನ ಕಟ್ಟಡ ಆಗುವವರೆಗೂ ಇದರಲ್ಲೇ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ನಿಟ್ಟೂರ(ಬಿ) ನಾಡ ಕಚೇರಿ ಉಪತಹಸೀಲ್ದಾರ್‌ ಈರಣ್ಣಾ ʼಈದಿನʼಕ್ಕೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

Download Eedina App Android / iOS

X