ಪಟ್ಟಣದ 19ನೇ ವಾರ್ಡಿನ ಶ್ರೀ ಚೌಡೇಶ್ವರಿ ದೇವಸ್ಥಾನದ ಹತ್ತಿರದ ಬಯಲು ಜಾಗದಲ್ಲಿ ಬುಧವಾರ ಮಧ್ಯಾಹ್ನ ನವಜಾತ ಗಂಡು ಮೃತ ಶಿಶುವನ್ನು ಸ್ಥಳೀಯರು ಪತ್ತೆ ಹಚ್ಚಿದ ಘಟನೆ ನಡೆದಿದೆ.
ಘಟನೆಯನ್ನು ಗಮನಿಸಿದ ನಾಗರಿಕರು ತಕ್ಷಣವೇ ಪುರಸಭೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪುರಸಭೆ ಆರೋಗ್ಯ ನಿರೀಕ್ಷಕ ಮಹೇಶ್ ಕುಮಾರ ಅವರು ಶಿಶುವನ್ನು ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಿದರು. ಆದರೆ ಪರಿಶೀಲನೆ ವೇಳೆ ಮಗು ಈಗಾಗಲೇ ಮೃತಪಟ್ಟಿರುವುದು ದೃಢಪಟ್ಟಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮಟ್ಕಾ, ಜೂಜಾಟದ ಅಡ್ಡೆ ಮೇಲೆ ದಾಳಿ; ಮೂವರ ಬಂಧನ
ನವಜಾತ ಶಿಶುವಿನ ಪಾಲಕರ ಪತ್ತೆಹಚ್ಚುವ ಕಾರ್ಯದಲ್ಲಿ ಮಾನ್ವಿ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
