ಉಜಿರೆ ಖಾಸಗಿ ಆಸ್ಪತ್ರೆ ಮುಂಭಾಗ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ವಿಚಾರಣೆಗಾಗಿ ಬುಧವಾರ ಹಾಜರಾಗಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಪ್ರಕರಣದ 16 ಆರೋಪಿಗಳಿಗೆ ಆ.20 ರಂದು 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿತ್ತು. ಇದರ ಬೆನ್ನಲ್ಲೇ ಬುಧವಾರ ಸಂಜೆ 5 ಗಂಟೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಇದನ್ನೂ ಓದಿ: ಪುತ್ತೂರು | ಅತ್ಯಾಚಾರ, ವಂಚನೆ ಪ್ರಕರಣ: ಸಂತ್ರಸ್ತೆ ಮಗು, ಆರೋಪಿಯ ಡಿಎನ್ಎ ಪರೀಕ್ಷೆ
ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣಣವರ್, ಜಯಂತ್.ಟಿ ವೆಂಕಪ್ಪ ಕೋಟ್ಯಾನ್, ಶ್ರೀನಿವಾಸ್ ಗೌಡ, ಮೋಹನ್ ಶೆಟ್ಟಿ, ತನುಷ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಗಣೇಶ್ ಶೆಟ್ಟಿ, ರಾಜೇಶ್ ಭಟ್ ಸೇರಿದಂತೆ 16 ಮಂದಿಗೆ ಆ.20 ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದರು. ಅವರೆಲ್ಲರೂ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.
ಆಸ್ಪತ್ರೆ ಮುಂಭಾಗ ಅಕ್ರಮ ಕೂಟದಲ್ಲಿ ಸುಮೋಟೋ ಕೇಸ್, ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಪ್ರಕರಣ, ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರು ಪ್ರಕರಣ ದಾಖಲಾಗಿತ್ತು. ವಿಚಾರಣೆಗಾಗಿ ಬೆಳ್ತಂಗಡಿ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ಮುಂದೆ ಹಾಜರಾಗಿದ್ದಾರೆ.
https://shorturl.fm/Uopxl