ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ ಪ್ರಕರಣ; ಮರ್ಯಾದೆ ಹತ್ಯೆ, ಸಾಮೂಹಿಕ ಕೃತ್ಯದ ಶಂಕೆ ವ್ಯಕ್ತಪಡಿಸಿದ ದಲಿತ ಸಂಘಟನೆಗಳು

Date:

Advertisements

ಕಾಲೇಜು ವಿದ್ಯಾರ್ಥಿನಿಯೊಬ್ಬರು ಕೊಲೆಯಾಗಿ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿತ್ರದುರ್ಗ ನಗರದ ಹೊರವಲಯದ ಗೋನೂರು ಬ್ರಿಡ್ಜ್ ಬಳಿ (ಹೊಸ ಬೈಪಾಸ್ ) ಖಾಲಿ ಜಮೀನಿನಲ್ಲಿ ಕುರುಚಲು ಪೊದೆಗಳಲ್ಲಿ ವಿದ್ಯಾರ್ಥಿನಿಯ ಮೃತ ದೇಹ ಪತ್ತೆಯಾಗಿದೆ. ದೇಹವನ್ನು ಗಮನಿಸಿರುವ ಹೋಟೆಲ್ ಸಿಬ್ಬಂದಿಯೊಬ್ಬರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.‌ ಸಾಮೂಹಿಕ ಅತ್ಯಾಚಾರ ಎಸಗಿದ ಮತ್ತು ಸುಟ್ಟುಹಾಕಲು ಪ್ರಯತ್ನ ಮಾಡಿರುವ ಕೃತ್ಯದ ಶಂಕೆಯನ್ನು ದಲಿತ ಸಂಘಟನೆಗಳ ಮುಖಂಡರು ವ್ಯಕ್ತಪಡಿಸಿದ್ದಾರೆ.‌ ಅಲ್ಲದೇ ಮರ್ಯಾದೆ ಹತ್ಯೆಯ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.‌

ಮೃತಪಟ್ಟ ಯುವತಿಯು ಹಿರಿಯೂರು ತಾಲೂಕಿನ ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊವೇರಹಟ್ಟಿ ಗ್ರಾಮದ ನಿವಾಸಿ ವರ್ಷಿತಾ (19) ಎಂದು ಗುರುತಿಸಲಾಗಿದೆ. ಯುವತಿ ದಲಿತ ಸಮುದಾಯಕ್ಕೆ ಸೇರಿದ್ದು, ಚಿತ್ರದುರ್ಗ ನಗರದಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದು, ಯುವತಿ ವಿದ್ಯಾರ್ಥಿ ನಿಲಯದಲ್ಲಿ ವಾಸವಿದ್ದು ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಪೊಲೀಸರು ಮೊಬೈಲ್ ಸಂಖ್ಯೆ ಆದರಿಸಿ ಆಕೆಯ ಸ್ನೇಹಿತನೊಬ್ಬನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

1002535788

“ಹೋಟೆಲ್ ಸಿಬ್ಬಂದಿಯೊಬ್ಬರು ನೀಡಿದ ಮಾಹಿತಿ ಅನ್ವಯ ಪ್ರಕರಣ ದಾಖಲಾಗಿದ್ದು, ತನಿಖೆ ತ್ರೀವ್ರಗತಿಯಲ್ಲಿ ನಡೆಯುತ್ತಿದ್ದು, ಪ್ರಕರಣ ಸಂಬಂಧ ಶಂಕಿತರೊಬ್ಬರನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ಶೀಘ್ರದಲ್ಲಿ ಒಂದು ಹಂತಕ್ಕೆ ಬರಲಿದ್ದು, ಯಾರೇ ಅಪರಾಧ ಮಾಡಿದರೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ” ಎಂದು ಪೊಲೀಸರ ಮಾಹಿತಿ ಆದರಿಸಿ ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.‌ ವಿದ್ಯಾರ್ಥಿನಿ ಪೋಷಕರಿಗೆ ಸಾಂತ್ವನ ಹೇಳಿ ವೈಯಕ್ತಿಕ ಮತ್ತು ಜಿಲ್ಲಾಡಳಿತದ ವತಿಯಿಂದ 5 ಲಕ್ಷ ಪರಿಹಾರ ವಿತರಿಸಲಾಗಿದೆ.

Advertisements

ಈದಿನ ಡಾಟ್ ಕಾಮ್ ನೊಂದಿಗೆ ದಲಿತ ಮುಖಂಡ, ಕರುನಾಡ ವಿಜಯಸೇನೆ ಸಂಘಟನೆಯ ಅಧ್ಯಕ್ಷ ಶಿವಕುಮಾರ್ ಮಾತನಾಡಿ “ಆಗಸ್ಟ್ 14 ರಂದು ಮನೆಗೆ ಹೋಗುವುದಾಗಿನಿಂದ ವಿದ್ಯಾರ್ಥಿನಿಲಯದಿಂದ ರಜೆ ತೆಗೆದುಕೊಂಡು ಚಿಕ್ಕಮ್ಮನ ಮನೆಗೆ ಯುವತಿ ಹೋಗಿದ್ದಾಳೆ. ಎರಡು ದಿನದ ನಂತರ ಅಲ್ಲಿಂದ ಹೊರಟು ನಾಪತ್ತೆಯಾದವಳು ಆ.19ರಂದು ಶವವಾಗಿ ಅರಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಯುವತಿಯ ಸ್ನೇಹಿತನೊಬ್ಬ ಕರೆಮಾಡಿ ಕರೆಸಿಕೊಂಡ ಅನುಮಾನ ವ್ಯಕ್ತವಾಗಿದೆ. ಸಾಮೂಹಿಕವಾಗಿ ಕೊಲೆ ಮಾಡಿರುವ ಶಂಕೆ ಇದೆ. ಇದನ್ನು ಒಬ್ಬರೇ ವ್ಯಕ್ತಿ ಮಾಡಲು ಸಾಧ್ಯವಿಲ್ಲ ಎನ್ನುವ ಅನುಮಾನ ಇದೆ. ಆದ್ದರಿಂದ ಈ ಪ್ರಕರಣದಲ್ಲಿ ಪೊಲೀಸರು ಸರಿಯಾದ ತನಿಖೆ ನಡೆಸಬೇಕು. ಯಾವುದೇ ಕಾರಣಕ್ಕೂ ಅಪರಾಧಿಗಳನ್ನು ಕಾನೂನಿನಿಂದ ತಪ್ಪಿಸಿಕೊಳ್ಳಲು ಬಿಡಬಾರದು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಬ್ಬಳು ಗೃಹಿಣಿ ಬಲಿ

“ಅಲ್ಲದೆ ಕುಟುಂಬಸ್ಥರು ಮತ್ತು ಸಂಘಟನೆಗಳು ಪ್ರತಿಭಟನೆ ಮಾಡುವವರೆಗೂ ಜಿಲ್ಲೆಯ ರಾಜಕಾರಣಿಗಳು ಈ ಕಡೆ ಗಮನ ಹರಿಸಿಲ್ಲ. ಸಂಘಟನೆಗಳ ಪ್ರತಿಭಟನೆಯ ನಂತರ ಉಸ್ತುವಾರಿ ಮಂತ್ರಿಗಳು ಮತ್ತು ಇತರ ರಾಜಕೀಯ ನಾಯಕರು ಗಮನಹರಿಸಿದ್ದಾರೆ. ಅಲ್ಲದೆ ದಲಿತ ವಿದ್ಯಾರ್ಥಿನಿಯೊಬ್ಬಳ ಸಾವಿಗೆ ಕೇವಲ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಇದು ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯವಾಗಿದೆ. ಬಾಲಕಿಯ ಕುಟುಂಬಸ್ಥರಿಗೆ ನ್ಯಾಯಯುತವಾದ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಲಿಂಗಾಯತ ಮಠಾಧೀಶರ ಒಕ್ಕೂಟದಿಂದ ಬಸವ ಸಂಸ್ಕೃತಿ ಅಭಿಯಾನ, ಸೆ.1ರಿಂದ ಆರಂಭ

ಲಿಂಗಾಯತ ಮಠಾಧೀಶರ ಒಕ್ಕೂಟವು ಸೆ.1ರಿಂದ ಅ.1ರವರೆಗೆ ರಾಜ್ಯದಲ್ಲಿ ನಡೆಸಲಿರುವ ಬಸವ ಸಂಸ್ಕೃತಿ...

ಧರ್ಮಸ್ಥಳ | ಅನನ್ಯಾ ಭಟ್ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

ಧರ್ಮಸ್ಥಳ ಗ್ರಾಮದಲ್ಲಿ ಅಕ್ರಮವಾಗಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಆರೋಪ ಪ್ರಕರಣ...

ಚಿಕ್ಕಮಗಳೂರು l ಎಸ್ಐಟಿ ತನಿಖೆ: ಬಿಜೆಪಿ, ಕಾಂಗ್ರೆಸ್ ಶಾಸಕರ ಶಾಸಕತ್ವ ರದ್ದುಗೊಳಿಸಬೇಕು; ದಸಂಸ ಆಗ್ರಹ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್ ಐಟಿ ತನಿಖೆಯನ್ನು ದಿಕ್ಕು ತಪ್ಪಿಸಲು ಹೊರಟಿರುವ ಬಿಜೆಪಿ...

Download Eedina App Android / iOS

X