ಚಿಕ್ಕಮಗಳೂರು l ಎಸ್ಐಟಿ ತನಿಖೆ: ಬಿಜೆಪಿ, ಕಾಂಗ್ರೆಸ್ ಶಾಸಕರ ಶಾಸಕತ್ವ ರದ್ದುಗೊಳಿಸಬೇಕು; ದಸಂಸ ಆಗ್ರಹ

Date:

Advertisements

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್ ಐಟಿ ತನಿಖೆಯನ್ನು ದಿಕ್ಕು ತಪ್ಪಿಸಲು ಹೊರಟಿರುವ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರ ಶಾಸಕತ್ವ ರದ್ದುಗೊಳಿಸಬೇಕೆಂದು ದಲಿತ ಸಂಘಟನೆಗಳ ಒಕ್ಕೂಟದಿಂದ ಚಿಕ್ಕಮಗಳೂರು ನಗರದಲ್ಲಿ ಬುಧವಾರ ನಡೆದಿದೆ.

ಧರ್ಮಸ್ಥಳದಲ್ಲಿ ಸೌಜನ್ಯ ಎಂಬ ಕಾಲೇಜು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಲಾಗಿದ್ದು, 12 ವರ್ಷ ಕಳೆದರು ಈ ಪರೆಗೂ ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗಿರುವುದಿಲ್ಲ. ಈ ಸಂಬಂಧ ನ್ಯಾಯಕ್ಕಾಗಿ ಹೋರಾಟಗಳೂ ನಡೆಯುತ್ತಿರುವಾಗಲೆ ಹಾಗೂ ಸರ್ಕಾರದ ನಿಯೋಜಿತ ವಿಶೇಷ ತನಿಖಾ ತಂಡ ತನಿಖೆಯನ್ನು ನಡೆಸುತ್ತಿರುವ ಸಂದರ್ಭದಲ್ಲಿ ಪ್ರಕರಣವನ್ನು ದಿಕ್ಕು ತಪ್ಪಿಸುತ್ತಿರುವ ಕೆಲವು ಶಾಸಕರ ನಡೆಯನ್ನು ದಲಿತ ಸಂಘಟನೆಗಳ ಒಕ್ಕೂಟ ತೀರ್ವವಾಗಿ ಖಂಡಿಸುತ್ತದೆ ಎಂದು ದಸಂಸ ಮುಖಂಡರು ತಿಳಿಸಿದರು.

ಧರ್ಮಸ್ಥಳದಲ್ಲಿ ನೂರಾರು ಮಹಿಳೆಯರು, ವಿದ್ಯಾರ್ಥಿಗಳು, ಇನ್ನಿತರು ಸೇರಿದಂತೆ ಅಸಹಜ ಸಾವುಗಳನ್ನು ನೋಡಿದ್ದೇನೆ ಎಂದು ಭೀಮ ಎಂಬ ವ್ಯಕ್ತಿ ಹೇಳಿಕೆಯನ್ನು ನೀಡಿರುತ್ತಾನೆ. ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಮಾನದ ಪರ ಹೋರಾಟಗಾರರು, ನ್ಯಾಯವಾದಿಗಳು, ಯೂಟ್ಯೂಬರ್‌ಗಳು ಮತ್ತು ಕೆಲವು ಮಾದ್ಯಮಗಳು ಧ್ವನಿ ಎತ್ತಿದ ಕಾರಣದಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಿದ ಭಾಗವಾಗಿ ಎಸ್.ಐ.ಟಿ ಗೆ ತನಿಖೆ ಶುರುವಾಗಿದೆ.

Advertisements

ನೂರಾರು ಅಸಹಜ ಸಾವುಗಳ ಬಗ್ಗೆ ಊತು ಹಾಕಿರುವ ಸ್ಥಳಗಳನ್ನು ಗುರುತಿಸಿ ಆಗೆದು ಅಸ್ಥಿಪಂಜರ, ಮೂಳೆಗಳನ್ನು ಹುಡುಕುತ್ತಿರುವಾಗಲೆ ಕೆಲವು ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ಎಸ್.ಐ.ಟಿ ತನಿಖೆಯನ್ನು ನಿಲ್ಲಿಸಬೇಕು. ಇದರಿಂದ ಮಂಜುನಾಥ ಸ್ವಾಮಿ ಕ್ಷೇತ್ರಕ್ಕೆ ಅಪಪ್ರಚಾರವಾಗುತ್ತಿದೆ ಎಂದು ಸುಳ್ಳು ಹೇಳಿಕೆ ನೀಡುವ ಮೂಲಕ ಎಸ್.ಐ.ಟಿ ತನಿಖೆಯನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಜನರಿಂದ ಆಯ್ಕೆಯಾದ ಇವರುಗಳು ಜನರ ಪರವಾಗಿ ನ್ಯಾಯ ಕೇಳದೆ ಅತ್ಯಾಚಾರಿಗಳ, ಕೊಲೆಗಡುಕರ ಪರವಾಗಿ ಹೇಳಿಕೆ ನೀಡುತ್ತಿರುವುದು ಅತ್ಯಂತ ಖಂಡನೀಯವಾಗಿದೆ. ಎಸ್ ಐಟಿ ತಂಡದವರು ತನಿಖೆ ವರದಿ ಬಿಡುಗಡೆ ಮಾಡುವ ಮೊದಲೆ, ಆರೋಪಿಸುತ್ತಿರುವುದು ಕೊಲಗಾರರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂಬುವಂತಹ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ ಎಂದು ದಸಂಸ ವತಿಯಿಂದ ತಿಳಿಸಿದರು.

ಸೌಜನ್ಯ, ಅನನ್ಯಭಟ್, ಪದ್ಮಲತಾ ಮತ್ತು ಆನೆ ಮಾವುತನ ಕೊಲೆಯ ಬಗ್ಗೆ ಒಂದು ದಿನವೂ ನ್ಯಾಯಕ್ಕಾಗಿ ವಿಧಾನ ಸಭೆಯಲ್ಲಾಗಲಿ ಅಥವಾ ಸಾರ್ವಜನಿಕವಾಗಲಿ ಈ ಶಾಸಕರು ಒತ್ತಾಯಿಸಿರುವುದಿಲ್ಲ. ಈ ಘಟನೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದು, ಬಿಜೆಪಿ ಮತ್ತು ಕೆಲವು ಕಾಂಗ್ರೇಸ್ ಶಾಸಕರು ಮುಗ್ಧ ಜನರ ಮತ್ತು ಭಕ್ತರನ್ನು ದೇವರ ಹೆಸರಿನಲ್ಲಿ ಪ್ರಚೋದಿಸುತ್ತಿರುವುದು ಮತ್ತು ಹೋರಾಟಗಾರರ ಮೇಲೆ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಎಸ್.ಐ.ಟಿ ತನಿಖೆಯ ದಿಕ್ಕು ತಪ್ಪಿಸಲು ಹೊರಟಿರುವ ಶಾಸಕರಸದಸ್ಯತ್ವವನ್ನು ರಾಜ್ಯ ಪಾಲರು ಕೂಡಲೆ ರದ್ದುಪಡಿಸಬೇಕೆಂದು ದಲಿತ ಸಂಘಟನೆಗಳ ಒಕ್ಕೂಟವು ಒತ್ತಾಯಿಸುತ್ತದೆ ಎಂದು ಆಶಾ ಸಂತೋಷ್ ತಿಳಿಸಿದರು.

ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ಮಲೆನಾಡಿನಲ್ಲಿ ಕಾಡಾನೆ ಹಾವಳಿ: ಜನರಲ್ಲಿ ಭಯದ ವಾತಾವರಣ

ಈ ವೇಳೆ ಪ್ರಗತಿಪರ ಸಂಘಟನೆಯವರು ಹಾಗೂ ದಸಂಸ,  ಸಾರ್ವಜನಿಕರು ಮತ್ತು ಇನ್ನಿತರರು ಸೇರಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಳೆ ದ್ವೇಷ : ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು...

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

Download Eedina App Android / iOS

X