ಧರ್ಮಸ್ಥಳ | ಅನನ್ಯಾ ಭಟ್ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

Date:

Advertisements

ಧರ್ಮಸ್ಥಳ ಗ್ರಾಮದಲ್ಲಿ ಅಕ್ರಮವಾಗಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಆರೋಪ ಪ್ರಕರಣ ದೇಶಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ಧರ್ಮಸ್ಥಳದಲ್ಲಿ ನಾಪತ್ತೆಯಾದ ಅನನ್ಯಾ ಭಟ್ ಪ್ರಕರಣವನ್ನು ಇದೀಗ ಎಸ್​ಐಟಿಗೆ ಹಸ್ತಾಂತರಿಸಲಾಗಿದೆ.

“ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್ 2003ರಲ್ಲಿ ನಾಪತ್ತೆಯಾಗಿದ್ದಾಳೆ” ಎಂದು ಸುಜಾತ ಭಟ್ ಎಂಬುವರು ಧರ್ಮಸ್ಥಳ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಧರ್ಮಸ್ಥಳಕ್ಕೆ ಬಂದಿದ್ದ ಅನನ್ಯಾ ಭಟ್​ ನಾಪತ್ತೆಯಾಗಿದ್ದಳು. ಆಕೆಯನ್ನು ಹುಡುಕಿಕೊಡಿ ಎಂದು ಸುಜಾತ ಭಟ್​ ಆರೋಪ ಮಾಡಿದ್ದರು. ಈ ಸಂಬಂಧ ಅನನ್ಯಾ ಭಟ್ ಕುರಿತಂತೆ ಸಾಕಷ್ಟು ಅನುಮಾನಗಳು ಎದ್ದಿದ್ದವು.

ಸುಜಾತ ಭಟ್ ಈಕೆ ನನ್ನ ಮಗಳು ಎಂದು ಫೋಟೋವೊಂದನ್ನು ತೋರಿಸಿದ್ದರು. ಆದರೆ ಅವರು ತೋರಿಸಿದ ಫೋಟೋ ಬಗ್ಗೆ ಗುಮಾನಿಗಳು ಎದ್ದಿವೆ. ಸುಜಾತ ಭಟ್ ಗೆ ಮಕ್ಕಳೆ ಇಲ್ಲ ಎಂದು ಅವರ ಸಂಬಂಧಿಗಳು ತಿಳಿಸಿದ್ದರು. ಹೀಗಾಗಿ ಲಾಯರ್ ಜೊತೆ ಕಾಣಿಸಿಕೊಂಡಿದ್ದ ಸುಜಾತ ಭಟ್ ಇವಳೇ ನನ್ನ ಮಗಳು ಅನನ್ಯಾ ಭಟ್​ ಎಂದು ಫೋಟೋ ರಿಲೀಸ್ ಮಾಡಿದ್ದರು.

Advertisements

ಆದರೆ ಈ ಫೋಟೋದಲ್ಲಿ ಇರೋದು ಅನನ್ಯಾ ಭಟ್ ಅಲ್ಲ. ನನ್ನ ತಂಗಿ ವಾಸಂತಿ ಎಂದು ಕೊಡಗಿನ ವಿಜಯ್ ಎಂಬುವರು ಹೇಳಿದ್ದಾರೆ. ಅಲ್ಲದೆ ಆಕೆ ನನ್ನ ತಂಗಿ ವಾಸಂತಿ. ಆಕೆ 2007ರಲ್ಲಿ ಮೃತಪಟ್ಟಿದ್ದಳು ಎಂದು ವಿಜಯ್ ಹೇಳಿದ್ದಾರೆ. ಸತ್ಯಾಸತ್ಯತೆ ಏನು ಎಂಬುದು ತನಿಖೆಯಿಂದ ತಿಳಿಯಬೇಕಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹56 ಸಾವಿರ ಕೋಟಿ ಹೆಚ್ಚುವರಿ ತೆರಿಗೆ ಪಡೆದರೂ ಅಭಿವೃದ್ಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ರಾಜ್ಯದ ಜನರಿಂದ ಹೆಚ್ಚುವರಿಯಾಗಿ 56 ಸಾವಿರ ಕೋಟಿ ತೆರಿಗೆ ವಸೂಲಿ ಮಾಡುತ್ತಿದ್ದರೂ,...

ದಾವಣಗೆರೆ | ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಬ್ಬಳು ಗೃಹಿಣಿ ಬಲಿ

ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ...

ಅರಸು ಜನ್ಮದಿನದಂದೇ ಅಧಿವೇಶನದಲ್ಲಿ ಒಳಮೀಸಲಾತಿ ಘೋಷಿಸಿದ ಸಿದ್ದರಾಮಯ್ಯ

ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗ ರಚಿಸಲು ತೀರ್ಮಾನ ಒಳಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆ...

ಒಳಮೀಸಲಾತಿ ತೀರ್ಮಾನ, ನಮ್ಮ ಸರ್ಕಾರದಿಂದ ಅರಸು ಅವರಿಗೆ ಸಲ್ಲಿಸಿದ ನಮನ: ಡಿ ಕೆ ಶಿವಕುಮಾರ್

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಳ ಮೀಸಲಾತಿ ವಿಚಾರದಲ್ಲಿ ಎಲ್ಲಾ...

Download Eedina App Android / iOS

X